ಮತ್ತೊಬ್ಬನಿಗೆ ಸೋಂಕು ದೃಢ; 222ಕ್ಕೇರಿದ ಕೋವಿಡ್ ಸಂಖ್ಯೆ
Team Udayavani, Jun 13, 2020, 11:48 AM IST
ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೊಬ್ಬನಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 222 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ 69 ರೋಗಿಗಳು ಸಕ್ರಿಯ ರೋಗಿಗಳಾಗಿದ್ದಾರೆ. ಶುಕ್ರವಾರ ಮತ್ತೆ 1 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ಸೋಂಕು ದೃಢಪಟ್ಟ ವ್ಯಕ್ತಿಯನ್ನು 20 ವರ್ಷದ ಪಿ-6246 ಎಂದು ಗುರುತಿಸಲಾಗಿದೆ. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯ ಗಂಟಲು ದ್ರವ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಈವರೆಗೆ 26637 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, 26330 ಜನರ ನೆಗೆಟಿವ್ ವರದಿ ಬಂದಿದೆ. 222 ಜನರಲ್ಲಿ ಸೋಂಕು ದೃಢಪಟ್ಟಿದ್ದು, 85 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ.
ಸೋಂಕಿತರಲ್ಲಿ 6 ಜನರು ಮೃತಪಟ್ಟಿದ್ದಾರೆ. 147 ಜನರು ಸಂಪೂರ್ಣ ಗುಣಮುಖರಾಗಿ ಮನೆಗೆ ಮರಳಿದ್ದು, 69 ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 29,317 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 8709 ಜನರು 28 ದಿನಗಳ ಐಸೋಲೇಶನ್ ಅವಧಿ ಮುಗಿಸಿದ್ದು, 20,455 ಜನರು 28 ದಿನಗಳ ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.