Vijayapura: ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ ನಡೆಸಿ ಅಮಾನವೀಯ ಕೃತ್ಯ…
Team Udayavani, Jul 30, 2024, 1:07 PM IST
ವಿಜಯಪುರ: ಆಸ್ತಿ ವಿವಾದದ ಕಾರಣಕ್ಕೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಮಹಿಳೆ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ನಡೆಸಿದ್ದು, ವೃದ್ಧನ ಮೇಲೆ ಕುಳಿತು ಮನಬಂದಂತೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಜಿಲ್ಲೆಯ ನಾಲತವಾಡ-ನಾರಾಯಣಪುರ ಬಳಿಯ ವೀರೇಶನಗರದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಮ್ಮ ಲೊಟಗೇರಿ ಹಾಗೂ ಸಣ್ಣಹನುಮಂತ ಲೊಟಗೇರಿ ಎಂಬುವವರ ಮೇಲೆ ಅಮಾನವೀಯ ರೀತಿಯಲ್ಲಿ ಸಂಬಂಧಿಗಳೇ ಹಲ್ಲೆ ಮಾಡಿದ್ದಾರೆ.
ವಿಡಿಯೋದಲ್ಲಿ ವ್ಯಕ್ತಿಯೊಬ್ಬ ದೇವಮ್ಮ ಅವರ ತಲೆಗೂದಲು ಹಿಡಿದು ಎಳೆದಾಡಿದ್ದರೆ, ಇನ್ನೋರ್ವ ವ್ಯಕ್ತಿ ವೃದ್ಧ ಸಣ್ಣಹನುಮಂತ ಅವರನ್ನು ಕೆಡವಿ ಎದೆಯ ಮೇಲೆ ಕುಳಿತು ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಹನುಮಂತ ಅವರ ಸಂಬಂಧಿಗಳಾದ ಅಮರಪ್ಪ ಕೋರಿ ಹಾಗೂ ಈರಪ್ಪ ಕೋರಿ ಇವರು ಈ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ.
ಸಣ್ಣಹನುಮಂತ ಹಾಗೂ ಕೋರಿ ಕುಟುಂಬಗಳ ಮಧ್ಯೆ ಆಸ್ತಿ ವಿಷಯವಾಗಿ ವಿವಾದವಿದ್ದು, ಇದೇ ವಿಷಯವಾಗಿ ಉಂಟಾದ ಜಗಳದಲ್ಲಿ ಕೋರಿ ಕುಟುಂಬದವರು ಲೊಟಗೇರಿ ಕುಟುಂಬದ ವೃದ್ಧರ ಮೇಲೆ ಅಮಾನವೀಯ ರೀತಿಯಲ್ಲಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಹಲ್ಲೆಯ ಕಾರಣದಿಂದ ತೀವ್ರವಾಗಿ ಗಾಯಗೊಂಡಿರುವ ದೇವಮ್ಮ, ಹನುಮಂತ ಇವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ನಗರದಲ್ಲಿ ನಡೆದಿರುವ ಈ ಅಮಾನವೀಯ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರಿಂದ ಒತ್ತಾಯ ಕೇಳಿಬಂದಿದೆ.
ಇದನ್ನೂ ಓದಿ: Koratagere: ಪತಿಯನ್ನು ಮುಗಿಸಲು ಮಾಜಿ ಪ್ರಿಯಕರ, ತಮ್ಮನಿಗೆ ಸುಪಾರಿ ಕೊಟ್ಟ ಪತ್ನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.