ಖಾಸಗಿ ಆಸ್ಪತ್ರೆಯಲ್ಲಿನ ಪ್ರತಿ ಸಾವಿನ ಬಗ್ಗೆ ಅಂದಂದೇ ವರದಿಗೆ ಜಿಲ್ಲಾಧಿಕಾರಿ ಸೂಚನೆ
Team Udayavani, May 19, 2021, 9:38 AM IST
ವಿಜಯಪುರ: ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಪ್ರತಿ ಸಾವಿನ ಕುರಿತು ಅಂದಂದೇ ವರದಿ ನೀಡವಂತೆ ಜಿಲ್ಲಾಧಿಕಾರಿ ಸುನಿಲ್ ಕುಮಾರ ಖಾಸಗಿ ಆಸ್ಪತ್ರೆ ಆಡಳಿತ ಸಮಿತಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತಮ್ಮ ನೇತೃತ್ವದ ವಿಶೇಷ ತಜ್ಞರ ಸಮಿತಿ ತಂಡ ನಗರದ ನೇಮಿಗೌಡ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆ ಪ್ರಮುಖರೊಂದಿಗೆ ಡೆತ್ ಆಡಿಟ್ ಕುರಿತು ಪರಿಶೀಲನಾ ಸಭೆ ನಡೆಸಿ ಈ ಸೂಚನೆ ನೀಡಿರುವ ಜಿಲ್ಲಾಧಿಕಾರಿ, ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲಾ ಸಾವುಗಳ ಕುರಿತು ಅದೇ ದಿನ ವರದಿ ನೀಡಬೇಕು ಎಂದು ಸೂಚಿಸಿದರು.
ಆಸ್ಪತ್ರೆಗೆ ದಾಖಲಾದ ತೀವ್ರತರ ರೋಗ ಲಕ್ಷಣ ಹೊಂದಿರುವ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಪ್ರಾರಂಭಿಸಿ, ಸಾವಿನ ಪ್ರಮಾಣ ಕಡಿಮೆ ಮಾಡಬೇಕು. ಅಗತ್ಯ ಪ್ರಮಾಣದಷ್ಟು ಆಕ್ಸಿಜನ್ ದಾಸ್ತಾನು ಇರಿಸಿಕೊಳ್ಳಬೇಕು. ಯಾವ ರೋಗಿಯೂ ಆಕ್ಸಿಜನ್ ಕೊರತೆಯಿಂದ ತೊಂದರೆ ಅನುಭವಿಸದಂತೆ ನೋಡಿಕೊಳ್ಳುವಂತೆ ನಿರ್ದೇಶನ ನೀಡಿದರು.
ಇದಲ್ಲದೇ ಜಿಲ್ಲಾಡಳಿತವು ಆಕ್ಸಿಜನ್ ಏಜೆನ್ಸಿಗಳ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದೆ ಎಂದರು.
ಜಿಲ್ಲೆಯಲ್ಲಿ ಈ ವರೆಗೆ ವರದಿಯಾದ Mucromycosis ( ಬ್ಲ್ಯಾಕ್ ಫಂಗಸ್) ರೋಗದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು , ಜಿಲ್ಲೆಯಲ್ಲಿ ಮೇ 17 ರಂದು 25 ಪ್ರಕರಣಗಳು ಮತ್ತು ಮೇ 18 ರಂದು 3 ಹೊಸ ಪ್ರಕರಣಗಳು ಕಂಡುಬಂದಿವೆ. Mucromycosis (ಬ್ಲ್ಯಾಕ್ ಫಂಗಸ್) ರೋಗವು ರೋಗನಿರೋಧಕ ಶಕ್ತಿ ಕಡಿಮೆಯಾದ ವ್ಯಕ್ತಿಗಳಿಗೆ ಈ ರೋಗವು ಕಂಡುಬರುತ್ತಿದ್ದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಈ ವರೆಗೆ ದಾಖಲಾದ ಹೆಚ್ಚಿನ ರೋಗಿಗಳು ಬಿ.ಎಲ್.ಡಿ.ಇ ಬಿ.ಎಂ.ಪಾಟೀಲ ವೈದ್ಯಕೀಯ ವಿದ್ಯಾಲಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದರಿ ಆಸ್ಪತ್ರೆಯಲ್ಲಿ ಈ ರೋಗಿಗಳಿಗಾಗಿಯೇ ಪ್ರತ್ಯೇಕ ವಾರ್ಡ್ ಮೀಸಲಿರಿಸಲು ಸೂಚಿಸಲಾಗಿದೆ.
ಏಕೆಂದರೆ ಸದರಿ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಎಲ್ಲಾ ತರಹದ ಕೇಸುಗಳು ನೋಡಲು ನುರಿತ ತಜ್ಞ ವೈದ್ಯರ ತಂಡ ಲಭ್ಯವಿದೆ. ಹೀಗಾಗಿ ಚಿಕಿತ್ಸೆ ನೀಡಲು ಇದರಿಂದ ಸಹಾಯಕವಾಗಿದೆ ಎಂದು ತಿಳಿಸಿದರು.
ಪ್ರತಿ ಪ್ರಕರಣದ ಬಗ್ಗೆ ತಜ್ಞರ ಕಮಿಟಿಯಲ್ಲಿ ಚರ್ಚೆ ನಡೆಸಲಾಯಿತು. ಮರಣ ಹೊಂದಿದ ಎಲ್ಲಾ ಪ್ರಕರಣದಲ್ಲಿ ಕೋಮಾರ್ಬಿಡ್ ಸ್ಥಿತಿ (Comorbid Condlition) ಗಳು ಇದ್ದ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಎಲ್ಲಾ ಕೇಸುಗಳಲ್ಲಿ ಮುಖ್ಯವಾಗಿ DM.HTN. ಇರುವ ಬಗ್ಗೆ ಸೂಚಿಸಿದರು.
ರೆಮಡಿಸಿವರ ಇಂಜೆಕ್ಷನ್ ಕುರಿತು ಜಿಲ್ಲಾ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಲಭ್ಯತೆ ಬಗ್ಗೆ ವಿಚಾರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಂದ್ರ ಕಾಪಸೆ, ಸರ್ಕಾರಿ ಜಿಲ್ಲಾ ಆಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಶರಣಪ್ಪ ಕಟ್ಟಿ, ವಿವಿಧ ಆಸ್ಪತ್ರೆಗಳ ಡಾ. ಸಂತೋಷ ನೇಮಿಗೌಡ, ಡಾ. ರಾಜೇಂದ್ರಕುಮಾರ, ಡಾ.ಎಸ್.ಎಲ್ ಲಕ್ಕಣ್ಣವರ, ಡಾ.ಸಂತೋಷ ನಂದಿ, ಪೀಟರ್ ಅಲೆಗ್ಸಾಂಡರ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.