ವಾರ್ಡ್‌ವಾರು ಆಸ್ತಿ ತೆರಿಗೆ ದರ ನಿಗದಿ : ಡಿಸಿ


Team Udayavani, Mar 30, 2021, 9:44 PM IST

ಹ್ಗದಸ಻

ವಿಜಯಪುರ: ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ದರವನ್ನು 2021-22ನೇ ಸಾಲಿನ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಸಭಾಭವನದಲ್ಲಿ ಜಿಲ್ಲಾ ಧಿಕಾರಿ ಅಧ್ಯಕ್ಷತೆಯಲ್ಲಿ ಜರುಗಿದ ಯೋಜನಾ ನಿರ್ದೇಶಕರು, ಆಯುಕ್ತರು ಸೇರಿದಂತೆ ಅಧಿ ಕಾರಿಗಳ ಸಭೆಯಲ್ಲಿ ಈ ಮಾಹಿತಿ ನೀಡಿದ ಅವರು, ಕರ್ನಾಟಕ ಪೌರ ಕಾಯ್ದೆಗಳ ತಿದ್ದುಪಡಿಯಂತೆ ಸ್ವತ್ತಿನ ಮೂಲ ಮೌಲ್ಯವನ್ನು ಪ್ರಕಟಿಸಲಾದ ಚಾಲ್ತಿ ಸಾಲಿನ ಮಾರುಕಟ್ಟೆ ಮೌಲ್ಯದ ಮಾರ್ಗಸೂಚಿ ಬೆಲೆಯ ಶೇ. 25ರಷ್ಟು ಪರಿಗಣಿಸಲಾಗುತ್ತದೆ. ಅದೇ ರೀತಿ ಪ್ರದೇಶಗಳಿಗೆ ತಕ್ಕಂತೆ ಬೇರೆ ಬೇರೆ ಆಸ್ತಿ ತೆರಿಗೆ ದರ ನಿಗದಿಪಡಿಸಲಾಗಿದೆ ಎಂದರು. ಕರ್ನಾಟಕ ಪೌರ ನಿಗಮ ಅಧಿ ನಿಯಮದ ತಿದ್ದುಪಡಿಯಂತೆ ವಾಸದ ಕಟ್ಟಡಗಳಿಗೆ ಮಾರುಕಟ್ಟೆ ಮೂಲ ಬೆಲೆಯ ಮೇಲೆ ಕನಿಷ್ಠ ಶೇ. 0.2ಕ್ಕಿಂತ ಕಡಿಮೆ ಇಲ್ಲದಂತೆ ಮತ್ತು ಶೇ. 1.5ಕ್ಕಿಂತ ಹೆಚ್ಚಿಗೆ ಇಲ್ಲದಂತೆ ಪ್ರದೇಶವಾರು ತೆರಿಗೆ ದರ ವಿಧಿ ಸಲಾಗುತ್ತದೆ.

ಖಾಲಿ ನಿವೇಶನಗಳಿಗೆ ಕನಿಷ್ಠ ಶೇ. 0.2ಗಿಂತ ಕಡಿಮೆ ಹಾಗೂ 0.5ಕ್ಕಿಂತ ಹೆಚ್ಚಿಲ್ಲದಂತೆ ಪ್ರದೇಶವಾರು ಬೇರೆ ಬೇರೆ ತೆರಿಗೆ ದರ ವಿಧಿ ಸಲಾಗುತ್ತದೆ. ಕಟ್ಟಡಕ್ಕೆ ಹೊಂದಿಕೊಂಡಿರುವ 1 ಸಾವಿರ ಚದರ ಅಡಿಗಿಂತ ಹೆಚ್ಚಿರುವ ಖಾಲಿ ನಿವೇಶನಕ್ಕೆ ಖಾಲಿ ಭೂಮಿಗೆ ವಿಧಿ ಸುವ ಆಸ್ತಿ ತೆರಿಗೆ ದರವನ್ನೇ ವಿಧಿ ಸಲಾಗುತ್ತದೆ ಎಂದರು. ಕರ್ನಾಟಕ ಪೌರ ನಿಯಮಗಳ ಅಧಿ ನಿಯಮ ತಿದ್ದುಪಡಿಯಂತೆ ವಾಣಿಜ್ಯ ಕಟ್ಟಡಗಳಿಗೆ ಮಾರುಕಟ್ಟೆ ಮೂಲ ಬೆಲೆಯ ಕನಿಷ್ಠ ಶೇ. 0.5ಕ್ಕಿಂತ ಕಡಿಮೆ ಶೇ. 3.0ಕ್ಕಿಂತ ಹೆಚ್ಚಿಗೆ ಇಲ್ಲದಂತೆ ಪ್ರದೇಶವಾರು ಬೇರೆ ಬೇರೆ ತೆರಿಗೆ ದರ ವಿಧಿಸಲಾಗುತ್ತದೆ. ತಿದ್ದುಪಡಿ ಪ್ರಕಾರ ಪ್ರತಿವರ್ಷ ಶೇ. 3-5ರಷ್ಟು ಸ್ವತ್ತು ತೆರಿಗೆ ಹೆಚ್ಚಿಸಲು ಅವಕಾಶವಿದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆಗೆ ಸಂಬಂ ಧಿಸಿದಂತೆ 2005ರಿಂದ 2021ಕ್ಕೆ ಆಸ್ತಿ ತೆರಿಗೆ ದರವನ್ನು ಪರಿಷ್ಕರಣೆ ಮಾಡಲಾಗಿರುತ್ತದೆ. ಆದರೆ ಕರ್ನಾಟಕ ಪೌರ ನಿಗಮ ಅಧಿನಿಯಮ 1976ರ ತಿದ್ದುಪಡಿ ಮಾಡಿ, ಫೆಬ್ರುವರಿ 18 ರಂದು ರಾಜ್ಯಪತ್ರ ಹೊರಡಿಸಲಾಗಿದೆ. ಅದರಂತೆ 2005-06ನೇ ಹಣಕಾಸು ವರ್ಷದಿಂದ ಆರಂಭಿಸಿ ಪ್ರತಿ 3 ವರ್ಷಕ್ಕೊಮ್ಮೆ ಶೇ. 15ರಿಂದ 30 ಆಸ್ತಿ ತೆರಿಗೆ ಹೆಚ್ಚಿಸಿ ಪರಿಷ್ಕರಿಸಲು ಅವಕಾಶವಿದೆ ಎಂದರು.

ವಾರ್ಡ್‌ವಾರು ಮತ್ತು ಪ್ರದೇಶವಾರು ಆಸ್ತಿ ತೆರಿಗೆ ದರಗಳನ್ನು ನಿಗ ದಿ ಪಡಿಸಿ ಠರಾವು ಮಾಡಿದ ಪ್ರಕಾರ 2021-22ನೇ ಸಾಲಿನ ಅನ್ವಯವಾಗುವಂತೆ ಏಪ್ರಿಲ್‌ 1ರಿಂದ ಜಾರಿಗೆ ಬರುತ್ತದೆ. ಸಾರ್ವಜನಿಕರು ವಾರ್ಡ್‌ವಾರು ಮತ್ತು ಪ್ರದೇಶವಾರು ಆಸ್ತಿ ತೆರಿಗೆ ದರಗಳ ಮಾಹಿತಿಯನ್ನು ಕಂದಾಯ ವಿಭಾಗದಲ್ಲಿ ಪಡೆಯಬೇಕೆಂದು ಸೂಚಿಸಿದರು. ಮಹಾನಗರ ಪಾಲಿಕೆ ಆಯುಕ್ತ ಹರ್ಷ ಶೆಟ್ಟಿ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.