ಧೂಳಖೇಡ ಚೆಕ್‌ಪೋಸ್ಟ್‌ನಲ್ಲಿ ಕಟ್ಟೆಚ್ಚರ
ಪ್ರಯಾಣಿಕರ ತಪಾಸಣೆ ಪರಿಶೀಲಿಸಿದ ಡಿಸಿ ನೇತೃತ್ವದ ತಂಡ ಅಂತಾರಾಜ್ಯ-ಅಂತರ ಜಿಲ್ಲಾ ಪ್ರಯಾಣಿಕರ ಮೇಲೆ ನಿಗಾ
Team Udayavani, May 8, 2020, 11:44 AM IST
ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ನೇತೃತ್ವದಲ್ಲಿ ಎಸ್ಪಿ ಅನುಪಮ, ಸಿಇಒ ಗೋವಿಂದರಡ್ಡಿ ಅವರಿದ್ದ ತಂಡ ಧೂಳಖೇಡ್ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪ್ರಯಾಣಿಕರ ತಪಾಸಣೆ ವ್ಯವಸ್ಥೆ ಪರಿಶೀಲಿಸಿತು
ವಿಜಯಪುರ: ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಅಂತಾರಾಜ್ಯ ಮತ್ತು ಅಂತರ ಜಿಲ್ಲಾ ಪ್ರಯಾಣಿಕರ ಪರಿಶೀಲನೆಗಾಗಿ ಜಿಲ್ಲೆಯ ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ಗುರುವಾರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ನೇತೃತ್ವದಲ್ಲಿ ಎಸ್ಪಿ ಅನುಪಮ ಅಗರವಾಲ್ ಹಾಗೂ ಜಿಪಂ ಸಿಇಒ ಗೋವಿಂದರಡ್ಡಿ ಅವರ ತಂಡ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಏಕಮುಖ ಆಗಮನ, ಏಕಮುಖ ನಿರ್ಗಮನ ನಿಯಮದಂತೆ ಧೂಳಖೇಡ ಚೆಕ್‌ಪೋಸ್ಟ್ ಸ್ಥಾಪಿಸಲಾಗಿದೆ. ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಈ ಚೆಕ್‌ಪೋಸ್ಟ್‌ನಲ್ಲಿ 6 ಜನ ತಜ್ಞ ವೈದ್ಯರು, 30 ಜನ ಆರೋಗ್ಯ ಕಾರ್ಯಕರ್ತರು, ಪೊಲೀಸ್, ಕಂದಾಯ, ಶಿಕ್ಷಕರು ಮತ್ತು ಪಿಡಿಒಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಸೇವಾ ಸಿಂಧು ಆ್ಯಪ್‌ನಲ್ಲಿ ನೋಂದಣಿ ಮಾಡದ ಪ್ರಯಾಣಿಕರಿಗೆ ಪ್ರತ್ಯೇಕ ಸೇವಾ ಸಿಂಧು ಆನ್‌ಲೈನ್ ಕೌಂಟರ್ ತೆರೆಯಲಾಗಿದೆ ಎಂದರು.
ವಿವಿಧ ರಾಜ್ಯಗಳಿಂದ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಸಾಂಸ್ಥಿಕ ಕ್ವಾರಂಟೈನ್, ನಗರ ಪ್ರದೇಶದಲ್ಲಿ ಹೋಂ ಕ್ವಾರಂಟೈನ್ ನಿಗಾ ಇರಿಸಲಾಗುತ್ತಿದೆ. ಕೋವಿಡ್-19 ಲಕ್ಷಣವುಳ್ಳ ವರ್ಗ “ಎ’ ದವರಿಗೆ ಆಸ್ಪತ್ರೆ ಕ್ವಾರಂಟೈನ್ ಮತ್ತು ರೋಗ ಲಕ್ಷಣ ಇಲ್ಲದ “ಬಿ’ ವರ್ಗದವರಿಗೆ ಕ್ವಾರಂಟೈನ್‌ಗೆ ಕ್ರಮ ಕೈಗೊಂಡಿದೆ. ಸರ್ಕಾರ ನಿಗದಿಪಡಿಸಿದ ಅರ್ಜಿ ನಮೂನೆಯಲ್ಲಿ ಪ್ರಯಾಣಿಕರ ಮಾಹಿತಿ, ಆರೋಗ್ಯ ಸ್ಥಿತಿಗತಿ ಪರಿಶೀಲಿಸುತ್ತಿದ್ದು, ಬೇರೆ ಜಿಲ್ಲೆಗಳಿಗೆ ಪ್ರಯಾಣಿಕರನ್ನು ಕಳಿಸುವ ಸಂದರ್ಭದಲ್ಲಿ ಆಯಾ ಜಿಲ್ಲಾಧಿಕಾರಿ ಜೊತೆಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದರು.
ಚೆಕ್‌ಪೋಸ್ಟ್‌ದಲ್ಲಿ ಪೊಲೀಸ್ ಸಿಬ್ಬಂದಿಗಳ ಮೂಲಕ ಇ-ಪಾಸ್ ಅಧಿಕೃತ ಕುರಿತಂತೆ ಪರಿಶೀಲನೆ ಸಹ ನಡೆಸುತ್ತಿದ್ದು, ಅನುಬಂಧಗಳಲ್ಲಿ ಪ್ರಯಾಣಿಕರ ಮಾಹಿತಿ ಪಡೆಯುವುದರ ಜೊತೆ ಸೀಲ್ ಸಹ ಹಾಕಲಾಗುತ್ತಿದೆ. ವಿಜಯಪುರ ಜಿಲ್ಲೆಯ ಪ್ರಯಾಣಿಕರ ಮಾಹಿತಿಯನ್ನು ಅನುಬಂಧ-1 ರಲ್ಲಿ ಪಡೆಯುವುದರ ಜೊತೆಗೆ ಹೋಂ ಕ್ವಾರಂಟೈನ್ ಆಗುವ ಬಗ್ಗೆ ಮುಚ್ಚಳಿಕೆ ಪಡೆಯಲಾಗುತ್ತಿದೆ. ಪ್ರತಿ 8 ಗಂಟೆಗೆ ಒಂದು ತಂಡದಂತೆ ದಿನದ 24 ಗಂಟೆ ಚೆಕ್‌ಪೋಸ್ಟ್ ಕಾರ್ಯ ನಿರ್ವಹಿಸಲಿದೆ. ಸಿಬ್ಬಂದಿಗೆ ಸೂಕ್ತ ರೀತಿಯಲ್ಲಿ ಊಟ, ಉಪಹಾರ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಪ್ರತಿ ಕೌಂಟರ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಸಹ ಹಾಕಲಾಗಿದೆ. ಕಡ್ಡಾಯವಾಗಿ ಸ್ಯಾನಿಟೈಸರ್ ಬಳಕೆ, ಮಾಸ್ಕ್ಬ ಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಪ್ರಯಾಣಿಕರಿಂದ ಕರ್ನಾಟಕಕ್ಕೆ ಆಗಮಿಸಿದ ದಿನ, ಪ್ರಯಾಣ ಪ್ರಾರಂಭಿಸಿದ ಸ್ಥಳ, ಅಂತಿಮವಾಗಿ ತಲುಪಬೇಕಾದ ಸ್ಥಳ, ವಿಳಾಸದ ವಿವರ. ಆರೋಗ್ಯ ಸ್ಥಿತಿಗತಿ, ಕೋವಿಡ್-19 ಲಕ್ಷಣಗಳ ಬಗ್ಗೆ ಅನುಬಂಧದಲ್ಲಿ ಮಾಹಿತಿ ಪಡೆಯಲಾಗುತ್ತಿದೆ. ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್, ಆಪ್ತಮಿತ್ರ ಆ್ಯಪ್, ಕ್ವಾರಂಟೈನ್ ವಾಚ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ವಾಹನಗಳಲ್ಲಿ ಮಾತ್ರವಲ್ಲ ಕಾಲ್ನಡಿಗೆಯಿಂದ ಆಗಮಿಸುವ ಪ್ರಯಾಣಿಕರ ಬಗ್ಗೆ ತೀವ್ರ ನಿಗಾ ಇಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಂತಾರಾಜ್ಯಗಳಿಂದ ಆಗಮಿಸುವವರಿಗೆ ಪ್ರತ್ಯೇಕ ಕೌಂಟರ್, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಿಣ, ಬಾಗಲಕೋಟೆ ಜಿಲ್ಲೆಗಳಿಗೆ ಕೌಂಟರ್ ಹಾಗೂ ಇತರೆ ಜಿಲ್ಲೆಗಳ ಪ್ರಯಾಣಿಕರ ಅನುಕೂಲಕ್ಕಾಗಿ 4 ಪ್ರತ್ಯೇಕ ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ. ಇಂಡಿ ಉಪವಿಭಾಗಾಕಾರಿ ಸ್ನೇಹಲ್ ಲೋಖಂಡೆ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದ್ದು, ಡಿವೈಎಸ್‌ಪಿ
ಎಂ.ಬಿ.ಸಂಕದ, ಡಯಟ್ ಹಿರಿಯ ಉಪನ್ಯಾಸಕರಾದ ಅಶೋಕ ಲಿಮ್ಕರ್, ಚಡಚಣ ತಹಶೀಲ್ದಾರ್ ಎನ್.ಬಿ.ಗೆಜ್ಜಿ, ಡಿಡಿಪಿಐ ಪ್ರಸನ್ನಕುಮಾರ ಇತರೆ ಅಧಿಕಾರಿಗಳ ತಂಡ ಪರಿಸ್ಥಿತಿ ನೋಡಿಕೊಳ್ಳುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.