ಕೃಷ್ಣೆಗೆ ಪ್ರವಾಹ : ಗಂಗೂರಿನ ದೇವಸ್ಥಾನ ಜಲಾವೃತ
Team Udayavani, Jul 29, 2021, 1:21 PM IST
ಅಡವಿ ಸಿದ್ದೇಶ್ವರ ದೇವಸ್ಥಾನ ಜಲಾವೃತ
ಮುದ್ದೇಬಿಹಾಳ : ತಾಲೂಕಿನ ಕೃಷ್ಣಾನದಿಗೆ ಪ್ರವಾಹ ಹೆಚ್ಚಾಗುವ ಆತಂಕ ಮುಂದುವರೆದಿದ್ದು ಇದರ ಮೊದಲ ಭಾಗವಾಗಿ ನದಿ ತೀರದಲ್ಲಿರುವ ಗಂಗೂರು ಗ್ರಾಮದ ಶ್ರೀ ಅಡವಿ ಸಿದ್ದೇಶ್ವರ ದೇವಸ್ಥಾನ, ಗದ್ದುಗೆ ಜಲಾವೃತವಾಗಿದೆ.
ಗಂಗೂರ – ಕಮಲದಿನ್ನಿ ರಸ್ತೆ ಮೇಲೆ ಒಂದು ಅಡಿಗಳಷ್ಟು ನೀರು ನಿಂತು ಸಂಚಾರ ದುಸ್ತರವಾಗಿದೆ. ಇದರೊಟ್ಟಿಗೆ ನದಿ ತೀರದ ದೇವೂರ, ಕಮಲದಿನ್ನಿ, ಗಂಗೂರ, ಕುಂಚಗನೂರ, ಹಂಡರಗಲ್ಲ, ನಾಗರಾಳ, ಮುದೂರ, ತಂಗಡಗಿ ಗ್ರಾಮಗಳಿಗೂ ನೀರು ತೀರ ಸಮೀಪಕ್ಕೆ ಬಂದು ಆತಂಕ ಹೆಚ್ಚುವಂತೆ ಮಾಡಿದೆ. ಕೃಷ್ಣಾನದಿಗೆ ಆಲಮಟ್ಟಿಯ ಲಾಲಬಹಾದ್ದೂರ ಶಾಸ್ತ್ರೀ ಜಲಾಶಯದಿಂದ 4 ಲಕ್ಷ ಕ್ಯೂಸೆಕವರೆಗೆ ನೀರು ಹರಿಸುತ್ತಿರುವುದು ಇಂಥ ಪರಿಸ್ಥಿತಿಗೆ ಕಾರಣವಾಗಿದೆ.
ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?
ತಹಶೀಲ್ದಾರ್ ಬಿ.ಎಸ್. ಕಡಕಭಾವಿ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ನೋಡಲ್ ಅಧಿಕಾರಿಗಳು ಪರಿಸ್ಥಿತಿ ಅವಲೋಕಿಸತೊಡಗಿದ್ದು ಸಂಭವನೀಯ ಆತಂಕ ಎದುರಿಸಲು ಸನ್ನದ್ದರಾಗಿದ್ದಾರೆ.
ಏತನ್ಮಧ್ಯೆ, ನೋಡಲ್ ಅಧಿಕಾರಿಗಳ ಸಹಾಯಕ್ಕಾಗಿ ಗ್ರಾಮ ಲೆಕ್ಕಾಧಿಕಾರಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಂಬಂಧಿಸಿದ ಗ್ರಾಪಂ ಸಿಬ್ಬಂದಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಸಹ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ನಿಯೋಜಿಸಲಾಗಿದೆ. ಸಂದರ್ಭಾನುಸಾರ ಪ್ರವಾಹ ಪೀಡಿತರನ್ನು ರಕ್ಷಿಸಲು ಕಾಳಜಿ ಕೇಂದ್ರಗಳನ್ನು ಸಕಲ ಮೂಲಸೌಕರ್ಯಗಳೊಂದಿಗೆ ಸಿದ್ದತೆಯಲ್ಲಿಡಲಾಗಿದೆ.
ಇದನ್ನೂ ಓದಿ : ಜಾಹೀರಾತು: ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ(ರಿ) ಕಾಪು; ಟೆಂಡರ್ ಆಹ್ವಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.