ಖಾಸಗಿ ಆಸ್ಪತ್ರೆ ಸೇವೆ ಆರಂಭಿಸಲು ಡಿಸಿ ಸೂಚನೆ
Team Udayavani, Apr 26, 2020, 1:51 PM IST
ವಿಜಯಪುರ: ನಗರದ ಜಿಲ್ಲಾಧಿ ಕಾರಿ ಕಚೇರಿಯಲ್ಲಿ ಜಿಲ್ಲಾ ಧಿಕಾರಿ ವೈ.ಎಸ್.ಪಾಟೀಲ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯರ ಸಭೆ ನಡೆಯಿತು
ವಿಜಯಪುರ: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಯುದ್ಧದ ಪರಿಸ್ಥಿತಿ ಇದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳು ಕೂಡಲೇ ಸೇವೆ ಪುನರಾರಂಭಿಸಿ ಖಾಸಗಿ ವೈದ್ಯರು-ದಾದಿಯರು ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಸಗಿ ಆಸ್ಪತ್ರೆಗಳ ಕುರಿತು ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಖಾಸಗಿ ವೈದ್ಯರ ಸೇವೆಯೂ ಈ ಹಂತದಲ್ಲಿ ಅಮೂಲ್ಯವಾಗಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ವೈದ್ಯರು ಸೇವೆ ಆರಂಭಿಸಿ ಕೋವಿಡ್ -19 ಲಕ್ಷಣ ಇರುವ ರೋಗಿಗಳು ಕಂಡುಬಂದಲ್ಲಿ ತಕ್ಷಣ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ತುರ್ತು ಸಂದರ್ಭದಲ್ಲಿ ಕೊರೊನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಅಗತ್ಯ ಪ್ರಮಾಣದಷ್ಟು ಪಿಪಿಇ ಕಿಟ್ ಮತ್ತು ಎನ್-95 ಮಾಸ್ಕ್ ಪೂರೈಸಲು ನಾವು ಸಿದ್ಧರಿದ್ದೇವೆ. ಒಂದೊಮ್ಮೆ ಸೇವೆ ಸಲ್ಲಿಸುವ ಖಾಸಗಿ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ ಕುರಿತು ನಿರ್ದಿಷ್ಟ ದೂರು ಬಂದಲ್ಲಿ ಜಿಲ್ಲಾಡಳಿತ ಅಂಥ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಗಳ ಬಗ್ಗೆ ತೀವ್ರ ತನಿಖೆ ನಡೆಸಲಾಗುತ್ತಿದೆ. ನಾಲ್ಕು ತಜ್ಞರ ತಂಡಗಳನ್ನು ಸಹ ರಚಿಸಿ ಮತ್ತು ಇತರೆ ಆರೋಗ್ಯ ಸಿಬ್ಬಂದಿಗಳು ಸಂಪರ್ಕ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. ಪಾಸಿಟಿವ್ ಪ್ರಕರಣ ಕಂಡುಬಂದ 37 ಜನರ ಆರೋಗ್ಯ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ. ಜಿಪಂ ಸಿಇಒ ಗೋವಿಂದ ರೆಡ್ಡಿ, ಎಡಿಸಿ ಡಾ| ಔದ್ರಾಮ್, ಸರ್ಕಾರಿ ಹಾಗೂ ಖಾಸಗಿ ವೈದ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.