ಬೇಸಿಗೆ ತಾಪ ತಡೆಯಲು ಅಗತ್ಯ ಮುನ್ನೆಚ್ಛರಿಕೆಗೆ ಡಿಸಿ ಸೂಚನೆ
ತಾಲೂಕಿನ ವಿವಿಧ ವೃತ್ತಗಳಲ್ಲಿ ನೆರಳಿಗಾಗಿ ಸೂಕ್ತ ಮೇಲ್ಛಾವಣಿ ವ್ಯವಸ್ಥೆ ಮಾಡಿ
Team Udayavani, Mar 4, 2020, 1:35 PM IST
ವಿಜಯಪುರ: ವಿಜಯಪುರ ಜಿಲ್ಲೆಯಾದ್ಯಂತ ಮುಂಬರುವ ದಿನಗಳಲ್ಲಿ ಗರಿಷ್ಠ ಉಷ್ಣಾಂಶ ಸಂದರ್ಭದಲ್ಲಿ ಅವಶ್ಯಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.
ಹವಾಮಾನ ಅಪಾಯಗಳಿಗೆ ಸ್ಪಂದಿಸಲು ಮತ್ತು ಹೊಂದಿಕೊಳ್ಳಲು ಪರಿಣಾಮಕಾರಿ ಸಿದ್ಧತೆಗಾಗಿ ಈಗಾಗಲೇ ಜಿಲ್ಲಾ ವಿಪತ್ತು ನಿರ್ವಹಣಾ ಕ್ರಿಯಾಯೋಜನೆ ರೂಪಿಸಲಾಗಿದೆ. ಅದರನ್ವಯ ವಿವಿಧ ಇಲಾಖೆಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾ ಧಿಕಾರದಿಂದ ನೀಡಲಾದ ನಿರ್ದೇಶನಗಳನ್ನು ತಪ್ಪದೇ ಪಾಲಿಸಿ, ಬೇಸಿಗೆ ಕಾಲದ ಗರಿಷ್ಠ ಉಷ್ಣಾಂಶ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಸೂಕ್ತ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವಂತೆ ಸೂಚನೆ ನೀಡಿದರು.
ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಪ್ರಾಧಿಕಾರದ ಎಚ್ಚರಿಕೆಯಂತೆ ಪ್ರಸಕ್ತ ಬೇಸಿಗೆ ಕಾಲದಲ್ಲಿ ಜಿಲ್ಲೆಯ ಇಂಡಿ ಮತ್ತು ಚಡಚಣ ಭಾಗಗಳಲ್ಲಿ ಗರಿಷ್ಠ ಪ್ರಮಾಣದ ಉಷ್ಣಾಂಶದ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಈ ಕುರಿತು ಸೂಕ್ತ ಮುನ್ನೆಚ್ಚರಿಕೆಗೆ ಕ್ರಮ ಕೈಗೊಳ್ಳಬೇಕು. ಗರಿಷ್ಠ ಉಷ್ಣಾಂಶ ಸಂದರ್ಭದಲ್ಲಿ ಮಧ್ಯಾಹ್ನ ಸಮಯದಲ್ಲಿ ಹಿರಿಯ ನಾಗರಿಕರು, ಚಿಕ್ಕಮಕ್ಕಳು ಹಾಗೂ ಮಹಿಳೆಯರು ಅವಶ್ಯಕ ಜಾಗೃತಿ ವಹಿಸಬೇಕು. ಈ ಸಮಯದಲ್ಲಿ ವಿರಾಮ ವಹಿಸುವ ಜೊತೆಗೆ ಬಿಸಿಲಿನ ತಾಪದಿಂದ ಉಂಟಾಗುವ ಅಪಾಯಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಅವರು ತಿಳಿಸಿದ್ದಾರೆ.
ಬೇಸಿಗೆ ಕಾಲದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವಿವಿಧ ಇಲಾಖೆಗಳ ಜವಾಬ್ದಾರಿಗಳ ಬಗ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೂಚಿಸಲು ತಿಳಿಸಿದ ಅವರು, ಇಲಾಖಾವಾರು ಯೋಜನೆ ಸಿದ್ಧಪಡಿಸಿಕೊಳ್ಳಬೇಕು. ಪಾಲಿಕೆ ಹಾಗೂ ಪುರಸಭೆಗಳಿಂದ ತೀವ್ರ ಉಷ್ಣಾಂಶ ಸಂದರ್ಭದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ವೃತ್ತಗಳಲ್ಲಿ ನೆರಳಿಗಾಗಿ ಸೂಕ್ತ ಮೇಲ್ಛಾವಣಿ ವ್ಯವಸ್ಥೆಯನ್ನು ವಿವಿಧ ನಗರ ಸ್ಥಳೀಯ ಸಂಸ್ಥೆಗಳ ನೆರವಿನೊಂದಿಗೆ ಮಾಡಬೇಕು ಎಂದರು.
ಮಹಾನಗರ ಪಾಲಿಕೆಯಿಂದ ತುರ್ತು ಕಂಟ್ರೋಲ್ ರೂಂ ತೆರೆಯಬೇಕು. ಆರೋಗ್ಯ ಇಲಾಖೆ ಮೂಲಕ 108 ಆಂಬ್ಯುಲೆನ್ಸ್, ತುರ್ತು ಚಿಕಿತ್ಸಾ ವಾರ್ಡ್‌ಗಳ ಸೌಲಭ್ಯ, ಅವಶ್ಯಕ ಔಷಧಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಮನೆ ಮನೆಗೆ ಕೈಗೊಳ್ಳಬೇಕಾದ ಅವಶ್ಯಕ ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ಜೊತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಬಿಸಿಲಿನ ತಾಪಮಾನದಿಂದ ಸಾವು ನೋವುಗಳಾದಲ್ಲಿ, ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಸಹಾಯವಾಣಿ 1077ಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ಹೇಳಿದರು.
ಇದಲ್ಲದೇ ಪ್ರಕೃತಿ ವಿಕೋಪ ನಿರ್ವಹಣಾ ಕಾಯ್ದೆ 2005 (ಸೆಂಟ್ರಲ್ ಆ್ಯಕ್ಟ್ 53 ಆಫ್ 205) ರನ್ವಯ ಜಿಲ್ಲಾ ಪ್ರಕೃತಿ ವಿಕೋಪ ಪ್ರಾಧಿಕಾರಗಳನ್ನು ರಾಜ್ಯದ 22 ಜಿಲ್ಲೆಗಳಲ್ಲಿ ಹೆಚ್ಚಿಸಲಾಗಿದ್ದು, ವಿಜಯಪುರ ಜಿಲ್ಲೆಯೂ ಒಳಗೊಂಡಿದೆ. ಜಿಲ್ಲಾಧಿಕಾರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿದ್ದು, ಜಿಪಂ ಅಧ್ಯಕ್ಷರು ಸಹ ಅಧ್ಯಕ್ಷರಾಗಿದ್ದಾರೆ. ಜಿಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರು ಸದಸ್ಯರಾಗಿದ್ದು, ಅಪರ ಜಿಲ್ಲಾಧಿಕಾರಿಗಳು ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಾಹಣಾ ಧಿಕಾರಿಗಳಾಗಿರುತ್ತಾರೆ.
ಜಿಪಂ ಸಿಇಒ ಗೋವಿಂದರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ, ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ವಿಪತ್ತು ನಿರ್ವಹಣಾಧಿ ಕಾರಿ ಜೈನಾಪುರ ಸೇರಿದಂತೆ ಇತರರು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.