44 ಸಂತ್ರಸ್ತರಿಗೆ 52 ಲಕ್ಷ ರೂ. ಪರಿಹಾರ ವಿತರಣೆ
ಬಾಕಿಯಿರುವ 3 ಪ್ರಕರಣಗಳಿಗೆ ಪರಿಹಾರ ಧನ ನೀಡಿಲ್ಲ ಪ್ರಸಕ್ತ ವರ್ಷ 16 ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥ
Team Udayavani, Mar 13, 2020, 1:30 PM IST
ವಿಜಯಪುರ: ಜಿಲ್ಲಾದ್ಯಂತ 2019ರ ಜನೆವರಿ 1ರಿಂದ ಡಿಸೆಂಬರ್ 31ರ ವರೆಗೆ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ದೌರ್ಜನ್ಯಕ್ಕೀಡಾದ 44 ಸಂತ್ರಸ್ತರಿಗೆ ಜಿಲ್ಲಾಡಳಿತದಿಂದ 52.67 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಭೆಗೆ ವಿವರ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾದ್ಯಂತ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಜನಾಂಗದ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಯಂತ್ರಣದ ಕುರಿತು ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರು ವಿಶೇಷ ಗಮನ ನೀಡಬೇಕು. ಅದರಂತೆ ದೌರ್ಜನ್ಯದಲ್ಲಿ ನೊಂದ ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕುರಿತು ಸೂಕ್ತ ಅರಿವು ಮೂಡಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ಜನರಿಗೆ ಹೊಸೂರ ಗ್ರಾಮ, ಬ್ಯಾಲ್ಯಾಳ ಗ್ರಾಮ ಸೇರಿದಂತೆ ಅವಶ್ಯಕತೆ ಇರುವ ಕಡೆ ಸ್ಮಶಾನ ಭೂಮಿ ಸಮಸ್ಯೆ ಪರಿಹರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಅಲ್ ಆಮೀನ್ ಮೆಡಿಕಲ್ ಕಾಲೇಜ್ ಎದುರು ಇರುವ ಸರ್ಕಾರಿ ಜಮೀನು ಅತಿಕ್ರಮಿಸಿ ಮಳಿಗೆ ನಿರ್ಮಿಸಿರುವ ಕುರಿತಂತೆ ಸದಸ್ಯರಿಂದ ಬಂದ ದೂರಿನ ಹಿನ್ನೆಲೆ ಐವರು ಅಧಿಕಾರಿಗಳನ್ನು ಒಳಗೊಂಡ ಸದಸ್ಯರ ಸಮಿತಿ ರಚಿಸಿ ಪರಿಶೀಲಿಸಬೇಕು. ಹಾಲ್ಯಾಳ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ರಸ್ತೆ ಸಮಸ್ಯೆ ನಿವಾರಣೆಗಾಗಿ ಅವಶ್ಯಕವಿರುವ ಜಮೀನಿನ ಕುರಿತು ಮಾ.16ರೊಳಗೆ ಜಮೀನು ದರ ನಿಗದಿಪಡಿಸಿ ಖರೀದಿಗೆ ಪ್ರಯತ್ನಿಸಬೇಕು. ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಹಕಾರ ನೀಡಬೇಕು. ಅಗತ್ಯ ಇದ್ದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾದ್ಯಂತ 2019ರಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಜನಾಂಗದ ಮೇಲೆ 49 ದೌರ್ಜನ್ಯ ಪ್ರಕರಣಗಳು ನಡೆದಿದ್ದು, 44 ಪ್ರಕರಣಗಳಲ್ಲಿ 52.67 ಲಕ್ಷ ರೂ.ಗಳ ಪರಿಹಾರ ಧನ ವಿತರಿಸಲಾಗಿದೆ. ವಿವಿಧ ಹಂತದಲ್ಲಿರುವ ಬಾಕಿಯಿರುವ 3 ಪ್ರಕರಣಗಳಿಗೆ ಪರಿಹಾರ ಧನ ವಿತರಿಸುವುದು ಬಾಕಿ ಇದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ವಿವರಿಸಿದರು.
2020ರ ಜನವರಿ 1ರಿಂದ ಫೆಬ್ರುವರಿ 29ರ ವರೆಗೆ ಪರಿಶಿಷ್ಟರ ಮೇಲೆ ನಡೆದ 13 ದೌರ್ಜನ್ಯ ಪ್ರಕರಣಗಳಲ್ಲಿ 6 ಪ್ರಕರಣಗಳಿಗೆ ಸಂತ್ರಸ್ತರಿಗೆ 2.50 ಲಕ್ಷ ರೂ.ಗಳ ಪರಿಹಾರ ವಿತರಿಸಲಾಗಿದೆ. ಬಾಕಿಯಿರುವ 7 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸಬೇಕಾಗಿದೆ. ಅದರಂತೆ 2019ರಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ದೌರ್ಜನ್ಯ ನಿಯಂತ್ರಣ ಕಾಯ್ದೆ 1989 ಅಡಿಯಲ್ಲಿ 161 ಪ್ರಕರಣಗಳಲ್ಲಿ 42 ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಿವೆ. 2020ರಲ್ಲಿ 16 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಇತ್ಯರ್ಥ ಪಡಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ ಅಗರವಾಲ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಅಡಿವೆಪ್ಪ ಸಾಲಗಲ್, ಅರವಿಂದ ಸಾಲವಾಡಗಿ, ರಾಜಶೇಖರ ಕೂಚಬಾಳ, ಮುತ್ತಣ್ಣ ಸಾಸನೂರ, ಮನೋಹರ ಕಾಂಬಳೆ, ಬಸವರಾಜ ಪೂಜಾರಿ, ವಿನಾಯಕ ಗುಣಸಾಗರ, ಪರಶುರಾಮ ಮಾದರ, ಶಿವಾನಂದ ಪಟ್ಟೇದ, ಗಣಪತಿ ಬಾನಿಕೋಲ, ಸುರೇಶ ಮಣೂರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.