ತಿಕೋಟಾ ಸುತ್ತಮುತ್ತ ಭಾರಿ ಸದ್ದಿನೊಂದಿಗೆ ಭೂಕಂಪನ: ಮನೆಗಳಿಂದ ಹೊರ ಓಡಿ ಬಂದ ಜನ
Team Udayavani, Feb 24, 2023, 10:59 PM IST
ವಿಜಯಪುರ: ಜಿಲ್ಲೆಯ ತಿಕೋಟಾ ಭಾಗದಲ್ಲಿ ಶುಕ್ರವಾರ ರಾತ್ರಿ 10-32 ರ ಸುಮಾರಿಗೆ ಭಾರಿ ಸದ್ದಿನೊಂದಿಗೆ ಭೂಕಂಪನ ಸಂಭವಿಸಿದೆ. ಭೂಮಿನಡುಗುತ್ತಲೇ ಮನೆಗಳಲ್ಲಿ ಮಲಗಿದ್ದ ಜನರು ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.
ತಾಲೂಕು ಕೇಂದ್ರವಾದ ತಿಕೋಟಾ ಪಟ್ಟಣ ಮಾತ್ರವಲ್ಲದೆ ಕಳ್ಳಕವಟಗಿ, ಘೋಣಸಗಿ, ಬಾಬಾನಗರ, ಟಕ್ಕಳಕಿ, ಹುಬನೂರ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ ಎಲ್ಲ ಗ್ರಾಮಗಳಲ್ಲಿ ಭಾರಿ ಸದ್ದಿನ ಭೂಕಂಪನದ ಅನುಭವ ಆಗಿದೆ.
ಶುಕ್ರವಾರ ರಾತ್ರಿಯ ಭಾರಿ ಸದ್ದಿನ ಭೂಕಂಪನದಿಂದ ಮನೆಗಳು ಅದುರಿದ್ದು, ತಗಡಿನ ಶೆಡ್ ಗಳಂತೂ ಭಾರಿ ಶಬ್ದ ಸೃಷ್ಟಿಸಿದ್ದು, ಮನೆಗಳಲ್ಲಿನ ಪಾತ್ರೆ ಸೇರಿದಂತೆ ಇತರೆ ವಸ್ತುಗಳು ನೆಲಕ್ಕೆ ಉರುಳಿ ಬಿದ್ದಿವೆ.
ಭೂಕಂಪನಕ್ಕೆ ಮುನ್ನ ಈ ಗ್ರಾಮಗಳಲ್ಲಿನ ನಾಯಿಗಳು ವಿಚಿತ್ರವಾಗಿ ಬೊಗಳಿದ್ದು, ಕೆಲವೇ ಕ್ಷಣದಲ್ಲಿ ಭೂಮಿ ಕಂಪಿಸಿದೆ.
ತಿಕೋಟಾ ಭಾಗದಲ್ಲಿ ಕಳೆದ ಹಲವು ವರ್ಷಗಳಿಂದ ಭೂಕಂಪದ ಅನುಭವ ಆಗುತ್ತಲೇ ಇದ್ದು, ಇದೇ ವಾರದಲ್ಲಿ ಎರಡನೇ ಬಾರಿಗೆ ಭೂಕಂಪನ ಸಂಭವಿಸಿದೆ.
ಈ ವರೆಗಿನ ಭೂಕಂಪನಗಳ ಅನುಭವದಲ್ಲೇ ಇದು ಅತಿ ಜೋರಾದ ಹಾಗೂ ಭಾರಿ ಅಪಾಯಕಾರಿ ಎಂಬಂತೆ ಸದ್ದು ಮಾಡಿದೆ. ಪರಿಣಾಮ ಗಾಬರಿಗೊಂಡ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಇದನ್ನೂ ಓದಿ: ಪತ್ನಿ ಆತ್ಮಹತ್ಯೆ ಮರುದಿನವೇ ಪಿತ್ರಾರ್ಜಿತ ಆಸ್ತಿ ಆಸೆಗಾಗಿ ಹೆತ್ತ ತಂದೆಯನ್ನೇ ಕೊಲೆಗೈದ ಮಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.