ಇಂದಿನಿಂದ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆ ಮೌಲ್ಯಮಾಪನ
Team Udayavani, Jul 9, 2020, 11:10 AM IST
ವಿಜಯಪುರ: ನಗರದಲ್ಲಿ ಜು.9ರಿಂದ 20ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆದೇಶ ಹೊರಡಿಸಿದ್ದಾರೆ.
ಅದರಂತೆ ಮೌಲ್ಯಮಾಪನ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸಬೇಕು ಹಾಗೂ ಮೌಲ್ಯಮಾಪನ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ಮೌಲ್ಯಮಾಪನ ಮುಕ್ತಾಯವಾಗುವವರೆಗೆ 09 ಮೌಲ್ಯಮಾಪನ ಕೇಂದ್ರಗಳ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಈ ಮೌಲ್ಯಮಾಪನ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್
ಕೇಂದ್ರಗಳು ತೆರೆಯದಂತೆ ಅವರು ಆದೇಶಿಸಿದ್ದಾರೆ.
ಕೆಒಎಸ್ ಪರೀಕ್ಷೆ ನಗರದಲ್ಲಿ ಜು.15ರ ವರೆಗೆ ಕೆಒಎಸ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಸದರಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿತ ಯಾರೂ ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕೇವಲ ಪರೀಕ್ಷಾ ಕೇಂದ್ರದ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್ ಮಾತ್ರ ಬಳಸಲು ಅವಕಾಶವಿದೆ ಎಂದು ಡಿಸಿ ವೈ.ಎಸ್. ಪಾಟೀಲ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯ. ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ಪರೀಕ್ಷೆ ನಡೆಯುವ ದಿನಗಳಂದು ಬೆಳಿಗ್ಗೆ 9 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರಗಳ ಸುತ್ತಲೂ ಪ್ರವೇಶ ನಿಷಿದ್ಧ. ಅಲ್ಲದೇ ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.