Vijayapura; ಅಪಘಾತದಂತೆ ಬಿಂಬಿಸಿ ಸಂಚಿನಿಂದ ವಕೀಲನ ಹತ್ಯೆ; ಐವರ ಬಂಧನ

Team Udayavani, Aug 13, 2024, 8:11 PM IST

Vijayapura; ಅಪಘಾತದಂತೆ ಬಿಂಬಿಸಿ ಸಂಚಿನಿಂದ ವಕೀಲನ ಹತ್ಯೆ; ಐವರ ಬಂಧನ

ವಿಜಯಪುರ: ನಗರದಲ್ಲಿ ಆ.8 ರಂದು ನಡೆದಿದ್ದ ವಕೀಲನ ಸಾವು ಅಪಘಾತದಿಂದ ಆದ್ದದ್ದಲ್ಲ, ಹಳೆಯ ಧ್ವೇಷದ ಹಿನ್ನೆಲೆಯಲ್ಲಿ ವ್ಯವಸ್ಥಿತ ಸಂಚಿನಿಂದ ನಡೆಸಿದ ಹತ್ಯೆ ಎಂಬುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪ್ರಕರಣದಲ್ಲಿ ಐವರನ್ನು ಬಂಧಿಸಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಇತರರ ಪತ್ತೆಗೆ ಜಾಲ ಬೀಸಿದ್ದಾರೆ.

ಮಂಗಳವಾರ ತಮ್ಮ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಪ್ರಕರಣದ ವಿವರ ನೀಡಿದ ಎಸ್ಪಿ ಋಷಿಕೇಶ ಭಗವಾನ್, ನಗರದಲ್ಲಿ ಆ.8 ರಂದು ಸಂಜೆ 5-30 ರ ಸುಮಾರಿಗೆ ನಡೆದಿದ್ದ ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿ ಸಿಲುಕಿ ಸುಮಾರು ಎರಡೂವರೆ ಕಿ.ಮೀ. ದೂರಕ್ಕೆ ಎಳೆದೊಯ್ದ ಘಟನೆಯಲ್ಲಿ ನಗರದ ಯುವ ವಕೀಲ ರವಿ ಮೇಲಿನಕೇರಿ ಮೃತಪಟ್ಟಿದ್ದ.

ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ಪೊಲೀಸರಿಗೆ ಇದು ಅಪಘಾತದಿಂದ ಆಗಿರುವ ಸಾವಲ್ಲ, ಬೆಚ್ಚಿಬೀಳುವಂತ ಸಂಚು ರೂಪಿಸಿ ಹತ್ಯೆ ಎಂದು ಲಭ್ಯವಾದ ಸುಳಿವು ಆಧರಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ತುಳಸಿರಾಮ ಹರಿಜನ, ಅಲೆಕ್ಸ್ ಗೊಲ್ಲರ, ಷಣ್ಮುಖ ನಡುವಿನಕೇರಿ, ಪ್ರಕಾಶ ಗೊಲ್ಲರ, ಮುರುಗೇಶ ಉಳ್ಳಾಗಡ್ಡಿ ಎಂಧು ಗುರುತಿಸಲಾಗಿದೆ. ಬಂಧಿತರೆಲ್ಲರೂ ದಿನಗೂಲಿ ಕಾರ್ಮಿಕರಾಗಿದ್ದು, ಎಲ್ಲರೂ ಅಪರಾಧ ಪ್ರಕರಣಗಳ ಹಿನ್ನೆಲೆ ಹೊಂದಿದ್ದಾರೆ. ಎಲ್ಲರ ಮೇಲೂ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಹತ್ಯೆ, ಹತ್ಯೆ ಯತ್ನ, ದರೋಡೆ, ಜೀವ ಬೆದರಿಕೆಯಂಥ ಪ್ರಕರಣ ದಾಖಲಾಗಿವೆ.

ಬಂಧಿತ ಆರೋಪಿಗಳು ಇತರರೊಂದಿಗೆ ಸೇರಿ ವಕೀಲ ರವಿ ಕೋರ್ಟ್‌ ನಿಂದ ಮನೆಗೆ ಹೊರಟಿದ್ದಾಗ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ವಾಹನದಲ್ಲಿ ಬಂದು ಡಿಕ್ಕಿ ಹೊಡೆದಿದ್ದರು. ಡಿಕ್ಕಿಯ ಬಳಿಕ ಸುಮಾರು ಎರಡೂವರೆ ಕಿ.ಮೀ. ವರೆಗೆ ರವಿಯನ್ನು ರಸ್ತೆಯಲ್ಲೇ ಎಳೆದೊಯ್ದ ಕಾರಣ ರವಿ ಸ್ಥಳದಲ್ಲೇ ಮೃತಪಟ್ಟಿದ್ದ.

ವಕೀಲ ರವಿ ತನ್ನ ಸಹೋದರರ ಜೊತೆ ಸೇರಿ ಸುಮಾರು 4-5 ತಿಂಗಳ ಹಿಂದೆ ತುಳಸಿರಾಮ ಹರಿಜನ ಎಂಬವನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದಲ್ಲದೇ ಸುಮಾರು 20 ದಿನಗಳ ಹಿಂದೆ ಇದೇ ಅಲೆಕ್ಸ್ ಗೊಲ್ಲರ ಎಂಬವನನ್ನು ಅಪಹರಿಸಿ, ಹತ್ಯೆ ಮಾಡುವ ಬೆದರಿಕೆ ಹಾಕಿದ್ದ.

ಇದರಿಂದ ದ್ವೇಷ ಸಾಧಿಸುತ್ತಿದ್ದ ಈ ಹತ್ಯಾ ಸಂಚಿನ ಸೂತ್ರಧಾರ ತುಳಸಿರಾಮ, ತನ್ನ ಸ್ನೇಹಿತರಾದ ಪ್ರಕರಣದ ಬಂಧಿತ ಆರೋಪಿಗಳೊಂದಿಗೆ ಸೇರಿ ಅಪಘಾತ ಎಂಬಂತೆ ಬಿಂಬಿಸಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಹತ್ಯೆ ಮಾಡಿದ್ದಾರೆ ಎಂದು ಎಸ್ಪಿ ವಿವರಿಸಿದರು.

ಹತ್ಯೆ ಬಳಸಿರುವ ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರು ಕೂಡ ಜೂಜಾಟದಲ್ಲಿ 1 ಲಕ್ಷ ರೂ.ಗೆ ಸಚಿನ್ ಎಂಬವನಿಂದ ಆರೋಪಿಗಳು ಕಿತ್ತುಕೊಂಡಿದ್ದ ಕಾರು ಎಂಬುದು ಪತ್ತೆಯಾಗಿದೆ. ಇದಲ್ಲದೇ ವಕೀಲ ರವಿ ಕೋರ್ಟ್‍ನಿಂದ ಮನೆಗೆ ಮರಳುವ ಕುರಿತು ನಿಗಾ ಇರಿಸಿ ಮಾಹಿತಿ ನೀಡಲು ಇಬ್ಬರು ಬೈಕ್‍ನಲ್ಲಿ ತಿರುಗುತ್ತಿದ್ದರು ಎಂಬುದು ಪೊಲೀಸರ ತನಿಖೆಯಲ್ಲಿ ಹೊರ ಬಿದ್ದಿದೆ.

ಪ್ರಾಥಮಿಕ ಹಂತದದ ತನಿಖೆಯಲ್ಲಿ ಇಡೀ ಪ್ರಕರಣದಲ್ಲಿ ಇನ್ನೂ ಕೆಲವರು ಈ ಸಂಚಿನಲ್ಲಿ ಪಾಲ್ಗೊಂಡಿರುವ ಮಾಹಿತಿ ಇದೆ, ಅವರೆಲ್ಲ ತಲೆ ಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವನ್ನು ತ್ವರಿತವಾಗಿ ಪತ್ತೆ ಮಾಡಿ, ಆರೋಪಿಗಳನ್ನು ಬಂಧಿಸುವಲ್ಲಿ ತನಿಖಾ ತಂಡ ಯಶಸ್ವಿಯಾಗಿದೆ.

ಹೀಗಾಗಿ ಡಿಎಸ್ಪಿ ಬಸವರಾಜ ಎಲಿಗಾರ ನೇತೃತ್ವದಲ್ಲಿದ್ದ ಗೋಲಗುಂಬಜ ಸಿಪಿಐ ಮಹಾಂತೇಶ ಮಠಪತಿ, ಗಾಂಧಿಚೌಕ ಠಾಣೆ ಸಿಪಿಐ ಪ್ರದೀಪ ತಳಕೇರಿ ಹಾಗೂ ತಂಡದ ಪೊಲೀಸರ ಕಾರ್ಯಕ್ಕೆ ಬಹುಮಾನ ಘೋಷಿಸಲಾಗಿದೆ. ಸ್ವಾತಂತ್ರ್ಯೋತ್ಸವ ದಿನದಂದು ನಡೆಯುವ ಪರೇಡ್ ಸಮಾರಂಭದಲ್ಲಿ ಬಹುಮಾನ ವಿತರಿಸುವುದಾಗಿ ಹೇಳಿದರು.

ಎಎಸ್ಪಿ ಶಂಕರ ಮಾರಿಹಾಳ, ಡಿಎಸ್ಪಿ ಬಸವರಾಜ ಎಲಿಗಾರ ಸಿಪಿಐ ಪ್ರದೀಪ ತಳಕೇರಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.