ಆ.19 ರಂದು ವಿಜಯಪುರದಲ್ಲಿ ಬೃಹತ್ ಉದ್ಯೋಗ ಮೇಳ: ಇಲ್ಲಿದೆ ಸಂಪರ್ಕ ವಿವರ
Team Udayavani, Aug 13, 2022, 3:49 PM IST
ವಿಜಯಪುರ: ಹಣಮಂತ ನಿರಾಣಿ ಫೌಂಡೇಶನ್ ಹಾಗೂ ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ವಿಜಯಪುರ ನಗರದಲ್ಲಿ ಆ.19 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶಾಂತಿನಿಕೇತನ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸುರೇಶ ಬಿರಾದಾರ ಹೇಳಿದರು.
ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಉದ್ಯೋಗ ಮೇಳದ ವಿವರ ನೀಡಿದ ಅವರು, ನಗರದ ಬಿಎಲ್ ಡಿಇ ಎಂಜಿನಿಯರಿಂಗ್ ಕಾಲೇಜ್ ಎದುರಿನ ಶಾಂತಿನಿಕೇತನ ಶಿಕ್ಷಣ ಸಮೂಹ ನಮೃತಾ ಕಾಲನಿಯಲ್ಲಿ ಮೇಳ ನಡೆಯಲಿದೆ. ಮೇಳಕ್ಕೆ ಈಗಾಗಲೇ ಸಕಲ ಸಿದ್ದತೆ ಪೂರ್ಣಗೊಳಿಸಲಾಗಿದೆ ಎಂದು ವಿವರಿಸಿದರು.
ಕೋವಿಡ್ ಕಾರಣದಿಂದ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಹೀಗಾಗಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲು ಬೃಹತ್ ಪ್ರಮಾಣದ ಉದ್ಯೋಗ ಮೇಳ ಆಯೋಜಿಸಲಾಗಿದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಶೈಕ್ಷಣಿಕ ಅರ್ಹತೆ ಹೊಂದಿದವರನ್ನು ನೇಮಿಸಿಕೊಳ್ಳಲೆಂದೇ ಸುಮಾರು 75 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ. ಉದ್ಯೋಗ ಮೇಳದಲ್ಲಿ ಸಂದರ್ಶನಕ್ಕೆ ಹಾಜರಾಗುವ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ನಿರುದ್ಯೋಗಿ ಪದವೀಧರರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಯಾವುದೇ ಪದವಿ, ತಾಂತ್ರಿಕ ಕೋರ್ಸ್, ಮಾರ್ಕೆಟಿಂಗ್ ಹಾಗೂ ಮ್ಯಾನೇಜ್ ಮೆಂಟ್ ಪದವೀಧರರು ಮೇಳದಲ್ಲಿ ಭಾಗವಹಿಸಬಹುದು. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಶಿಕ್ಷಣ ಪಡೆದ ವಿದ್ಯಾರ್ಥಿಗಳೂ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಂದರ್ಶನಕ್ಕೆ ಬರುವ ಉದ್ಯೋಗಾಕಾಂಕ್ಷಿಗಳು ತಮ್ಮ ಶೈಕ್ಷಣಿಕ ದಾಖಲೆಗಳ ಪ್ರತಿ, ಪಾಸ್ ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ಮತ್ತು ಸ್ವ ವಿವರ ಅರ್ಜಿಯನ್ನು ಇ ಮೇಲ್ [email protected] ಗೆ ಸಲ್ಲಿಸಬಹುದು. ಮಾಹಿತಿಗೆ ಮೊ. 9071772722, 9071776454, 9945000793 ಗೆ ಸಂಪರ್ಕಿಸಬಹುದು ಎಂದರು.
ಈರಣ್ಣ ಪಟ್ಟಣಶೆಟ್ಟಿ, ರಾಜು ಕಳಸಗೊಂಡ, ಈರಣ್ಣ ಹೆರಲಗಿ, ಐ.ಜಿ. ನ್ಯಾಮಗೌಡ, ವಿಜಯ ಜೋಶಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
Malpe ಬೀಚ್ ಸ್ವಚ್ಛತೆ: 3 ದಿನದಲ್ಲಿ 26 ಲೋಡ್ ಕಸ ಸಂಗ್ರಹ
Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.