Vijayapura: ಬಿಜೆಪಿ ವಕ್ಫ್ ತಂಡದಿಂದ ಜಿಗಜಿಣಗಿ, ಯತ್ನಾಳ್ ದೂರ
Team Udayavani, Oct 29, 2024, 8:13 PM IST
ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ನಿಂದಾದ ತೊಂದರೆ ಬಗ್ಗೆ ಮಂಗಳವಾರ (ಅ.29) ಅಧ್ಯಯನಕ್ಕೆ ಬಂದಿದ್ದ ರಾಜ್ಯ ಬಿಜೆಪಿ ತಂಡದಿಂದ ತಮ್ಮದೇ ಪಕ್ಷದ ಸಂಸದರಾದ ರಮೇಶ ಜಿಗಜಿಗಣಿ ಮತ್ತು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ದೂರವೇ ಉಳಿದಿದ್ದರು.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವಿವಾರ ಗೋವಿಂದ ಕಾರಜೋಳ, ಶಾಸಕರಾದ ಹರೀಶ್ ಪೂಂಜಾ, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ್ ಶಹಾಪುರ ಹಾಗೂ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರನ್ನು ಒಳಗೊಂಡ ತಂಡವನ್ನು ರಚಿಸಿದ್ದರು. ಆದರೆ, ಈ ಬಗ್ಗೆ ಸೋಮವಾರ ಯತ್ನಾಳ್ ಬಹಿರಂಗವಾಗಿಯೇ ಅತೃಪ್ತಿ ವ್ಯಕ್ತಪಡಿಸಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಸಂಜೆ ಸಂಸದ ಜಿಗಜಿಣಗಿ, ಶಾಸಕ ಯತ್ನಾಳ ಮತ್ತು ಮಾಜಿ ಜಿಲ್ಲಾಧ್ಯಕ್ಷ ಎಂ.ಬಿ.ಜಿರಲಿ ಹೆಸರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿತ್ತು.
ಆದರೂ, ಮಂಗಳವಾರ ಯತ್ನಾಳ್ ವಿಜಯಪುರ ನಗರದಲ್ಲಿದ್ದರೂ, ಬಿಜೆಪಿ ತಂಡದಿಂದ ದೂರವೇ ಇದ್ದರು. ಬದಲಿಗೆ ವಿವಿಧ ಅಭಿವೃದ್ಧಿ ಕಾರ್ಯಗಳ ಭೂಮಿಪೂಜೆಯಲ್ಲಿ ಅವರು ಪಾಲ್ಗೊಂಡರು.
ಯತ್ನಾಳ್ ಗೈರು ಕುರಿತು ಪ್ರಶ್ನೆಗೆ ಸಂಸದ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿ, ವಕ್ಫ್ ವಿರುದ್ಧ ವಿಜಯಪುರ ಜಿಲ್ಲೆಯಿಂದಲೇ ಯತ್ನಾಳ ಅವರೇ ಆರಂಭಿಸಿದ್ದಾರೆ. ಅವರ ಧ್ವನಿಗೆ ಬೆಂಬಲವಾಗಿ ನಾವು ಕಾರ್ಯ ಮಾಡುತ್ತೇವೆ ಎಂದಷ್ಟೇ ಹೇಳಿದರು. ಅಲ್ಲದೇ, ಹೆಚ್ಚು ಮಾತನಾಡಲು ಅವರು ನಿರಾಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.