Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Team Udayavani, Nov 25, 2024, 3:24 PM IST

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

ವಿಜಯಪುರ: ಒಂದು ವರ್ಷದ ಮಗುವನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಣ ಮಾಡಿ 24 ಗಂಟೆಯೊಳಗೆ ತಾನೇ ಮರಳಿ ತಂದು ಬಿಟ್ಟಿರುವ ಘಟನೆ ನಗರದ ಜಿಲ್ಲಾಸ್ಪತ್ರೆಯಲ್ಲಿ ರವಿವಾರ ನಡೆದಿದೆ. ಇದರೊಂದಿಗೆ ಸಂದೀಪ ಎಂಬ ಕಂದಮ್ಮನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ.

ದೇವರಹಿಪ್ಪರಗಿ ತಾಲೂಕಿನ ಚಟ್ನಳ್ಳಿ ಗ್ರಾಮದ ಆರೋಪಿ 38 ವರ್ಷದ ರವಿ ಛಲವಾದಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ನಿವಾಸಿ ರಾಮೇಶ್ವರಿ ಎಂಬ ಮಹಿಳೆ ತನ್ನ ಇಬ್ಬರು ಮಕ್ಕಳು ಹಾಗೂ ತಾಯಿ ಪದ್ಮಾ ಪವಾರ ಅವರೊಂದಿಗೆ ವಿಜಯಪುರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ, ಪದ್ಮಾ ಪವಾರ ಆರೋಗ್ಯ ಹದಗೆಟ್ಟಿದೆ. ಹೀಗಾಗಿ ಮೂರು ದಿನಗಳ ಹಿಂದೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಉಪಚಾರಕ್ಕಾಗಿ ರಾಮೇಶ್ವರಿ ಸಹ ತನ್ನ ಇಬ್ಬರು ಮಕ್ಕಳು ಸಮೇತ ಆಸ್ಪತ್ರೆಯಲ್ಲಿದ್ದರು.

ಶನಿವಾರ ಬೆಳಗ್ಗೆ 11ರ ಸುಮಾರಿಗೆ ತಾಯಿ ಪದ್ಮಾಳ ಕಫದ ಪರೀಕ್ಷೆಗಾಗಿ ರಾಮೇಶ್ವರಿ ಮಗು ಸಂದೀಪನನ್ನು ತಾಯಿ ಬಳಿ ಬಿಟ್ಟು ಹೋಗಿದ್ದರು. ಈ ವೇಳೆ, ಸಂದೀಪ ಅಳಲಿಕ್ಕೆ ಶುರು ಮಾಡಿದಾಗ ಅಪರಿಚಿತನಾದ ರವಿ ಛಲವಾದಿ ಮಗುವನ್ನು ಎತ್ತಿಕೊಂಡು ಆಟವಾಡಿಸಿದ್ದಾನೆ. ಬಳಿಕ ಹೊರಗೆ ತೆಗೆದುಕೊಂಡು ಬಂದು ಅಲ್ಲಿಂದ ಮಗುವಿನ ಸಮೇತವಾಗಿ ಕಾಲ್ಕಿತ್ತಿದ್ದ. ರಾಮೇಶ್ವರಿ ಮರಳಿ ಬಂದು ನೋಡಿದಾಗ ಕಂದಮ್ಮ ಕಾಣಿಸಿಲ್ಲ. ಹೀಗಾಗಿ ವಾರ್ಡ್‌ನಲ್ಲಿ ಹುಡುಕಾಟ ನಡೆಸಿ, ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಪೊಲೀಸ್‌ ಠಾಣೆ ಹಾಗೂ ವೈದ್ಯರ ಗಮನಕ್ಕೆ ತಂದಿದ್ದಾರೆ.

ಸಿಸಿಟಿವಿಯಲ್ಲಿ ದೃಶ್ಯ ಸೆರೆ: ಈ ಮಾಹಿತಿ ಅರಿತ ಪೊಲೀಸರು ಜಿಲ್ಲಾಸ್ಪತ್ರೆ ಆವರಣ ಮತ್ತು ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ನಡೆಸಿದ್ದಾರೆ. ಆಗ ವ್ಯಕ್ತಿಯೊಬ್ಬ ಮಗು ಕದ್ದೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೀಲಿ ಬಣ್ಣದ ಟೀ ಶರ್ಟ್‌ ಧರಿಸಿದ್ದ ಆರೋಪಿ ಒಂದು ಕೈಯಲ್ಲಿ ಚೀಲ, ಮತ್ತೂಂದು ಕೈಯಲ್ಲಿ ಮಗು ಹೊತ್ತುಕೊಂಡು ಹೋಗುವ ದೃಶ್ಯ ಕಂಡು ಬಂದಿದೆ. ಈ ದೃಶ್ಯಾವಳಿ ಆಧರಿಸಿ ಮಗು ಪತ್ತೆಗಾಗಿ ಶನಿವಾರದಿಂದಲೇ ಗಾಂಧಿ ಚೌಕ್‌ ಠಾಣೆಯ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದರು. ಇತ್ತ, ಮಗು ಕಾಣೆಯಾಗಿದ್ದರಿಂದ ತಾಯಿ ರಾಮೇಶ್ವರಿ ಕಂಗಾಲಾಗಿ ಎರಡು ದಿನಗಳಿಂದ ಕಣ್ಣೀರಿಡುತ್ತಿದ್ದರು. ಆದರೆ, ರವಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮಗುವನ್ನು ಆರೋಪಿ ರವಿ ಛಲವಾದಿ ತಾನೇ ಆಸ್ಪತ್ರೆಗೆ ಮರಳಿ ಕರೆ ತಂದಿದ್ದಾನೆ.

ಆಸ್ಪತ್ರೆಯ ವೈದ್ಯರು ಹಾಗೂ ಪೊಲೀಸರ ಸಮ್ಮುಖದಲ್ಲಿ ಮಗುವನ್ನು ತಾಯಿಗೆ ಒಪ್ಪಿಸಲಾಗಿದೆ. ಮಗು ಮರಳಿ ತನ್ನ ಮಡಿಲು ಸೇರಿರುವುದರಿಂದ ಹೆತ್ತ ಅಮ್ಮ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ, ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಮಗುವಿನ ಅಪಹರಣದಂತಹ ಘಟನೆ ನಡೆದಿರುವುದು ರೋಗಿಗಳು ಮತ್ತು ಅವರ ಸಂಬಂ ಧಿಕರಲ್ಲಿ ಗಾಬರಿ ಪಡುವಂತೆ ಮಾಡಿದೆ. ಜತೆಗೆ ಭದ್ರತೆ ವ್ಯವಸ್ಥೆ ಬಗ್ಗೆಯೂ ಆತಂಕ ವ್ಯಕ್ತಪಡಿಸಿದ್ದಾರೆ.

ಮಗುವಿಗೆ ಹಾಲು ಕುಡಿಸಿ, ಬಿಸ್ಕಟ್‌ ತಿನ್ನಿಸಿದ್ದ ಆರೋಪಿ

ಮಗು ಅಪಹರಣದ ಪ್ರಕರಣದ ಆರೋಪಿ ರವಿ ಛಲವಾದಿ ತಾನು ಬೆನ್ನು ನೋವಿನಿಂದಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಬೇಕು ಎಂದು ಬಂದಿದ್ದ. ಆದರೆ, ಆಧಾರ್‌ ಕಾರ್ಡ್‌ ಇದರ ಕಾರಣಕ್ಕೆ ಸಿಬ್ಬಂದಿ ದಾಖಲಿಸಿಕೊಂಡಿರಲಿಲ್ಲ. ಹೀಗಾಗಿ 2 ದಿನದಿಂದ ಆಸ್ಪತ್ರೆ ಆವರಣದಲ್ಲೇ ಇದ್ದ. ಈ ವೇಳೆ, ಶನಿವಾರ ವಾರ್ಡ್ ನಲ್ಲಿ ಮಗು ತನ್ನ ಅಜ್ಜಿ ಬಳಿ ಇತ್ತು. ಆಗ ಮಗು ಆಳುವುದು ಕೇಳಿ ಆರೋಪಿ ಬಂದಿದ್ದಾನೆ. ಅಲ್ಲದೇ, ಎತ್ತಿಕೊಂಡು ಹೊರಗಡೆ ಬಂದು ಮಗುವಿಗೆ ಹಾಲು ಕುಡಿಸಿ, ಬಿಸ್ಕಟ್‌ ತಿನ್ನಿಸಿದ್ದಾನೆ. ಜತೆಗೆ ಅಜ್ಜಿ ಬಳಿ ಯಾರೂ ಇರದೇ ಕಾರಣಕ್ಕೆ ಅಲ್ಲಿಯೇ ಎರಡ್ಮೂರು ಗಂಟೆ ಕಳೆದಿದ್ದ. ಇಷ್ಟೇ ಅಲ್ಲ, ಕಲಬುರಗಿಯಲ್ಲಿ ಸಂಬಂಧಿಕರು ನಿಧನ ಹೊಂದಿದ ವಿಷಯ ತಿಳಿದು ಮಗುವನ್ನು ಅಲ್ಲಿಗೂ ಕರೆದೊಯ್ದಿರುವುದಾಗಿ ಸದ್ಯ ಆರೋಪಿ ಹೇಳಿಕೊಂಡಿದ್ದಾನೆ. ಹೀಗಾಗಿ ಆರೋಪಿಯ ಪೂರ್ವಪರ ಪರಿಶೀಲನೆ ಮತ್ತು ನಿಖರ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ

ಟಾಪ್ ನ್ಯೂಸ್

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

6-spcl

Story Of Generations: ಪೀಳಿಗೆಗಳ ವೃತ್ತಾಂತ

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.