ವಿಜಯಪುರದ ಆಲಮೇಲದಲ್ಲಿ ಹಾಡಹಗಲೇ ರೌಡಿಶೀಟರ್ ಹತ್ಯೆ
Team Udayavani, Jul 11, 2023, 5:04 PM IST
ಆಲಮೇಲ (ವಿಜಯಪುರ): ರೌಡಿಶೀಟರ್ ಒಬ್ಬನನ್ನು ಜಿಲ್ಲೆಯ ಆಲಮೇಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ಜರುಗಿದೆ.
ಆಲಮೇಲ ಪಟ್ಟಣ ನಿವಾಸಿ ಮಾಳಪ್ಪ ಯಮನಪ್ಪ ಮೇತ್ರಿ ಹತ್ಯೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ. ದೇವರನಾವದಗಿ ಪರಿಸರದಲ್ಲಿ ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಮಾರಕಾಸ್ತ್ರಗಳಿಂದ ತಲೆಗೆ ಭಾರಿ ಪ್ರಮಾಣದಲ್ಲಿ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವವಾಗಿ ಮಾಳಪ್ಪ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ರೌಡಿಶೀಟರ್ ಮಾಳಪ್ಪ ಈ ಪರಿಸರದಲ್ಲಿ ಅನಧಿಕೃತ ಹಾಗೂ ಕಾನೂನು ಬಾಹೀರವಾಗಿ ಇಸ್ಪೀಟ್ ಜೂಜು ಅಡ್ಡೆ ನಡೆಸುತ್ತಿದ್ದ ಎನ್ನಲಾಗಿದೆ. ಹತ್ಯೆಯಾಗಿರುವ ರೌಡಿಶೀಟರ್ ಮಾಳಪ್ಪನ ಮೇಲೆ ಆಲಮೇಲ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣ ದಾಖಲಾಗಿದ್ದು, ಪದೇ ಪದೇ ಕಾನೂನು ಬಾಹೀರ ಕೃತ್ಯದಲ್ಲಿ ಪಾಲ್ಗೊಳ್ಳುತ್ತಿದ್ದ ಕಾರಣ ಪೊಲೀಸರು ರೌಡಿಶೀಟ್ ತೆರೆದಿದ್ದರು.
ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಧಾವಿಸಿರುವ ಆಲಮೇಲ್ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
Vijayapura: ನಾಲ್ಕು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ; ಮಹಿಳೆ ಬಚಾವ್, 2 ಮಕ್ಕಳು ಸಾವು
Congress Government: ಡಿ.ಕೆ.ಶಿವಕುಮಾರ್ ಎಂದಿಗೂ ಸಿಎಂ ಆಗುವುದಿಲ್ಲ: ಯತ್ನಾಳ್
ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.