ಅನರ್ಹರ ಬಿಪಿಎಲ್‌ ಕಾರ್ಡ್‌ ಎಪಿಎಲ್‌ಗೆ ಪರಿವರ್ತನೆ: ಡಿಸಿ

Team Udayavani, Feb 29, 2020, 4:01 PM IST

29-February-19

ವಿಜಯಪುರ: ಜಿಲ್ಲೆಯಾದ್ಯಂತ ಅನರ್ಹರರು ಹೊಂದಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಗೊಳಿಸಲು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆಯಾದ್ಯಂತ ಅನರ್ಹರು ಹೊಂದಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ತಕ್ಷಣ ಪತ್ತೆ ಹಚ್ಚಬೇಕು. ನಿಯಮಾವಳಿ ಅನ್ವಯ ಇದೇ ಮಾರ್ಚ್‌ 31ರೊಳಗೆ ಎಪಿಎಲ್‌ ಪಡಿತರ ಚೀಟಿಗಳಾಗಿ ಪರಿವರ್ತಿಸುವ ಕುರಿತಂತೆ ಸೂಚಿಸಿದರು.

ಬಿಪಿಎಲ್‌ ಪಡಿತರ ಚೀಟಿಯನ್ನು ಹೊಂದಲು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲ ಕಾಯಂ ನೌಕರರು, ಸೇವಾ ತೆರಿಗೆ ವೃತ್ತಿ ತೆರಿಗೆ ಪಾವತಿಸುವ ಎಲ್ಲ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೆರ್‌ ಒಣಭೂಮಿ, ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶ ಹೊರತು ಪಡಿಸಿ ನಗರ, ಪಟ್ಟಣ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆಯನ್ನು ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತವಾಗಿ ಓಡಿಸುವ ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್‌ ಹೊಂದಿದ ಕುಟುಂಬಗಳನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನ ಹೊಂದಿರುವ ಎಲ್ಲ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚಿಗೆ ಇರುವ ಕುಟುಂಬಗಳು ಬಿಪಿಎಲ್‌ ಪಡಿತರ ಚೀಟಿ ಹೊಂದಲು ಅರ್ಹರಲ್ಲ ಎಂದು ವಿವರಿಸಿದರು.

ಅದರಂತೆ ಬಿಪಿಎಲ್‌ ಪಡಿತರ ಚೀಟಿಗೆ ಅರ್ಹತೆ ಹೊಂದದ ಕುಟುಂಬಗಳು ಒಂದು ವೇಳೆ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಬಿಪಿಎಲ್‌ ಪಡಿತರ ಚೀಟಿಗಳನ್ನು ಪಡೆದಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದರೆ, ಆಯಾ ಸ್ಥಳೀಯ ಸಂಸ್ಥೆಗಳಿಂದ ಮಾಹಿತಿ ಕ್ರೋಢೀಕರಿಸಿ ಅನರ್ಹರು ಹೊಂದಿರುವ ಬಿಪಿಎಲ್‌ ಪಡಿತರ ಚೀಟಿಗಳನ್ನು ಕಂಡು ಹಿಡಿದು ಅವರು ಈವರೆಗೆ ಪಡೆದಿರುವ ಪಡಿತರ ವಸ್ತುಗಳಿಗೆ ಅನುಗುಣವಾಗಿ ಮುಕ್ತ ಮಾರುಕಟ್ಟೆ ದರದಂತೆ ದಂಡವನ್ನು ವಿ ಧಿಸುವಂತೆ ಜಿಲ್ಲೆಯ ಎಲ್ಲ ತಾಲೂಲು ತಹಶೀಲ್ದಾರ್‌ರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸರ್ಕಾರದ ಆದೇಶದನ್ವಯ ಪ್ರತಿಯೊಂದು ಮತ್ತು ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರು ಸಂಬಂಧಿಸಿದ ಆಯಾ ನ್ಯಾಯ ಬೆಲೆ ಅಂಗಡಿಗೆ ಕುಟುಂಬದ ಎಲ್ಲ ಸದಸ್ಯರೊಂದಿಗೆ ಬಯೋ ಮೆಟ್ರಿಕ್‌ ನೀಡಿ, ಇ-ಕೆವೈಸಿ ಮಾಡಿಸಲು ಸೂಚಿಸಿದೆ. ಈವರೆಗೆ ಕೇವಲ 2,90,646 ಪಡಿತರ/ ಚೀಟಿದಾರರು ಮಾತ್ರ ಕೆವೈಸಿ ಮಾಡಿದ್ದು, ಮಾರ್ಚ್‌ 31ರವರೆಗೆ ಮಾತ್ರ ಸರ್ಕಾರ ಇ-ಕೆವೈಸಿ ಮಾಡಲು ಗಡುವು ನೀಡಿದೆ. ಈ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳನ್ನು ಇ-ಕೆವೈಸಿ ಮಾಡಲು ಸೂಕ್ತ ಜಾಗೃತಿ ಮತ್ತು ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಕೆಲ ಪಡಿತರ ಚೀಟಿದಾರರು ಸರ್ಕಾರದಿಂದ ಪಡಿತರ ವಸ್ತುಗಳಾದ ಅಕ್ಕಿಯನ್ನು ಪಡೆದುಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಗಮನಕ್ಕೆ ಬಂದಿದೆ. ಅಂತಹ ಅಕ್ಕಿ ಮಾರಾಟ ಮಾಡುವವರ ಬಗ್ಗೆ ಪತ್ತೆ ಹಚ್ಚಬೇಕು. ಅಂತಹ ಪಡಿತರ ಚೀಟಿದಾರರ ವಿರುದ್ಧ ಪ್ರಕರಣ ಸಹ ದಾಖಲಿಸುವ ಜೊತೆಗೆ ಪಡಿತರ ಚೀಟಿ ರದ್ದು ಪಡಿಸಲು ಮತ್ತು ಕಾನೂನು ರಿತ್ಯ ಅವಶ್ಯಕ ಕ್ರಮ ಕೈಗೊಳ್ಳಲು ಸೂಚಿಸಿದರು.

ಜಿಲ್ಲೆಯಲ್ಲಿ 2016ರಿಂದ ಈವರೆಗೆ 1,121 ಸರ್ಕಾರಿ ನೌಕರರು ಬಿಪಿಎಲ್‌ ಕಾರ್ಡ್‌ ಹೊಂದಿದವರ ಮೇಲೆ ಕ್ರಮ ಕೈಗೊಂಡು 87 ಲಕ್ಷ ರೂ. ದಂಡ ವಸೂಲಿ ಮಾಡಲಾಗಿದೆ. 2019-20 ನೇ ಸಾಲಿನಲ್ಲಿ 6700 ಬಿಪಿಎಲ್‌ ಕಾರ್ಡ್‌ ಪಡೆದ ಅನರ್ಹರರನ್ನು ಪತ್ತೆ ಹಚ್ಚಿ 55 ಸಾವಿರ ರೂ. ದಂಡ ವಿ ಧಿಸಲಾಗಿದೆ. 5500 ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಪರಿವರ್ತನೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕಿ ಸುರೇಖಾ ಹೇಳಿದರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.