ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧ
Team Udayavani, Jun 24, 2020, 5:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಜಿಲ್ಲೆಯಲ್ಲಿ ಈ ತಿಂಗಳ 25ರಿಂದ ಆರಂಭಗೊಳ್ಳಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ಕಡೆಗಳಲ್ಲಿ 106 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತೆಗೆದುಕೊಂಡು ಹೋಗುವುದನ್ನು ನಿರ್ಬಂಧಿಸಲಾಗಿದೆ. ಜೂ.25ರಿಂದ ಜು.3ರ ವರೆಗೆ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆಯಲಿವೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾಗಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ. ಕೇವಲ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಮಾತ್ರ ಬೇಸಿಕ್ ಮೊಬೈಲ್ ಸೆಟ್ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವದು. ಸುತ್ತಲೂ 200 ಮೀಟರ್ ಪ್ರದೇಶವನ್ನು ಬೆಳಿಗ್ಗೆ 9ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ ಎಂದು ವಿವರಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತೆರೆಯದಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.