ಗುಳೆ ತಡೆಗೆ ನರೇಗಾ ಯೋಜನೆ ಜಾರಿ: ಶಾಸಕ ಪಾಟೀಲ
Team Udayavani, May 23, 2020, 2:35 PM IST
ಸಾಂದರ್ಭಿಕ ಚಿತ್ರ
ವಿಜಯಪುರ: ಗ್ರಾಮೀಣ ಭಾಗದ ಜನರು ಉದ್ಯೋಗ ಅರಸಿ ಗುಳೆ ಹೋಗುವುದನ್ನು ತಡೆಯಲು ಹಾಗೂ ಹಳ್ಳಿಗಳಲ್ಲೇ ಉದ್ಯೋಗ ನಿಡುವ ಉದ್ದೇಶದಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಯೋಜನೆ ಜಾರಿಗೆ ತರಲಾಗಿದೆ. ಹೀಗಾಗಿ ಹಳ್ಳಿಗರು ಗುಳೇ ಹೋಗದೇ ಯೋಜನೆ ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಹೇಳಿದರು.
ಶುಕ್ರವಾರ ಬಬಲೇಶ್ವರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಗ್ರಾಮೀಣ ಉದ್ಯೋಗ ಖಾತ್ರಿ ಹಾಗೂ ಕೃಷಿ ಕಾರ್ಮಿಕರಿಗೆ ಬದು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿ ಹಳ್ಳಿಗಳಲ್ಲಿ ನೀರಿನ ಅಭಾವ ಕಂಡು ಬರುತ್ತದೆ. ಅದಕ್ಕೆ ಚೆಕ್ ಡ್ಯಾಂ, ಬಾಂದಾರ ಹಾಗೂ ಕೆರೆಗಳನ್ನು ತುಂಬುವ ಕಾರ್ಯದಲ್ಲಿ ತೊಡಗಬೇಕು. ಇದರಿಂದ ಅಂತರ್ಜಲ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಅನಕೂಲವಾಗಲಿದೆ ಎಂದರು. ಈ ಸಂದರ್ಭದಲ್ಲಿ ಬಬಲೇಶ್ವರ ತಾಪಂ ಇಒ ಬಸವರಾಜ ಬಿರಾದಾರ, ಪ್ರಕಾಶ ಮಸಳಿ, ಜಿಪಂ ಮಾಜಿ ಅಧ್ಯಕ್ಷ ವಿ.ಎಸ್.ಪಾಟೀಲ, ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ, ಗ್ರಾಪಂ ಅಧ್ಯಕ್ಷೆ ಬೋರಮ್ಮ ಬುದಿಹಾಳ, ಪರಸಪ್ಪ ಪಡತಾರೆ, ಮುಖಂಡರಾದ ಧರ್ಮಣ್ಣ ಬಿಳೂರ, ಹನಮಂತ ಲೊಕುರಿ, ಪ್ರವೀಣ ಪಾಟೀಲ, ಸುರೇಶ ತಡಲಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.