![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Dec 8, 2023, 11:54 AM IST
ವಿಜಯಪುರ: ಕರ್ನಾಟಕ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ 2024 ಜನವರಿ 9 ರಿಂದ 12 ರವರೆಗೆ ವಿಜಯಪುರ ನಗರದಲ್ಲಿ ರಾಷ್ಟ್ರೀಯ 28ನೇ ರೋಡ್ ಸೈಕ್ಲಿಂಗ್ ಸ್ಪರ್ಧೆ ಆಯೋಜಿಸಲಾಗಿದೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸ್ಪರ್ಧೆಯ ವಿವರ ನೀಡಿದ ಸೈಕ್ಲಿಂಗ್ ಸಂಸ್ಥೆಯ ಅಧ್ಯಕ್ಷ ರಾಜು ಬಿರಾದಾರ, ಸ್ಪರ್ಧೆ ಆಯೋಜನೆಗೆ ಭಾರತೀಯ ಸೈಕ್ಲಿಂಗ್ ಫೆಡರೇಶನ್ ಅನುಮತಿ ನೀಡಿದ್ದು, ಸೈಕ್ಲಿಂಗ್ ತವರು ವಿಜಯಪುರ ನಗರದಲ್ಲಿ ಮತ್ತೊಮ್ಮೆ ರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಸಂಘಟಿಸುವ ಅವಕಾಶ ದೊರಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯಗಳಿಂದ ರಾಷ್ಟ್ರ-ಅಂತಾರಾಷ್ಟ್ರೀಯ ಪ್ರಖ್ಯಾತಿ ಪಡೆದಿರುವ ಸುಮಾರು1 ಸಾವಿರ ಸೈಕ್ಲಿಸ್ಟ್ ಗಳು ಪಾಲ್ಗೊಳ್ಳಲು ನಗರಕ್ಕೆ ಆಗಮಿಸುತ್ತಿದ್ದಾರೆ ಎಂದರು.
ಇದನ್ನೂ ಓದಿ:Mysore: ಸಿಎಂ ತವರಲ್ಲಿ ಜೀತಪದ್ದತಿ ಜೀವಂತ; ನೇಪಾಳ ಮೂಲದ ತಾಯಿ-ಮಕ್ಕಳ ರಕ್ಷಣೆ
ಸದರಿ ಕಾರ್ಯಕ್ರಮ ಸಂಘಟಿಸಲು ಸುಮಾರು 45 ಲಕ್ಷ ರೂ. ವೆಚ್ಚದ ಅಂದಾಜಿದ್ದು, ಸರ್ಕಾರ, ದಾನಿಗಳು, ಪ್ರಾಯೋಜಕರು, ಜನಪ್ರತಿನಿಧಿಗಳ ನೆರವಿಗೆ ಮನವಿ ಮಾಡಲಾಗಿದೆ ಎಂದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.