ಅನ್ಯ ರಾಜ್ಯದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್
ಉತ್ತರಪ್ರದೇಶ, ರಾಜಸ್ಥಾನ, ಚಂಡೀಘಡ, ಗುಜರಾತ್, ಗೋವಾ ರಾಜ್ಯಗಳಿಂದ 57 ಜನ ಆಗಮನ
Team Udayavani, May 9, 2020, 12:23 PM IST
ವಿಜಯಪುರ: ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ವಿಡಿಯೋ ಸಂವಾದ ನಡೆಸಿದರು
ವಿಜಯಪುರ: ದೇಶದ ಅತೀ ಹೆಚ್ಚು ಕೋವಿಡ್ ಪೀಡಿತ ರಾಜ್ಯಗಳಾದ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ರಾಜಸ್ಥಾನ್ ಹಾಗೂ ದೆಹಲಿಗಳಿಂದ ಆಗಮಿಸುವ ಪ್ರತಿಯೊಬ್ಬರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ಜಿಲ್ಲೆಯ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಈ ವಿಷಯ ತಿಳಿಸಿದ ಅವರು, ವಿವಿಧ ರಾಜ್ಯಗಳಿಂದ ಜಿಲ್ಲೆಗೆ ಆಗಮಿಸುವ ಜನರನ್ನು ಕೂಡಾ ನಗರ ಪ್ರದೇಶಗಳಲ್ಲಿ ಹೋಮ್ ಕ್ವಾರಂಟೈನ್ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕು. ಆಯಾ ಗ್ರಾಮಗಳಿಗೆ, ನಗರ, ಪಟ್ಟಣಗಳಿಗೆ ಬೇರೆ ರಾಜ್ಯಗಳಿಂದ ಆಗಮಿಸುವ ಜನರ ಬಗ್ಗೆ ತಕ್ಷಣ ಆಯಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಗತ್ಯ ಮಾಹಿತಿ ನೀಡಬೇಕು. ಸುಳ್ಳು ಮಾಹಿತಿ ನೀಡಿ ಮನೆಯಲ್ಲಿ ತಂಗಿದವರ ವಿರುದ್ಧ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಸಾಂಸ್ಥಿಕ ಕ್ವಾರಂಟೈನ್‌ಗಾಗಿ ಪ್ರಥಮ ಆದ್ಯತೆಯಾಗಿ ವಸತಿ ಶಾಲೆಗಳು, ವಸತಿ ನಿಲಯಗಳು, ಪ್ರೌಢಶಾಲೆ, ಪ್ರಾಥಮಿಕ ಶಾಲೆಗೆ ಕಳಿಸಬೇಕು. ವಲಸಿಗರು-ನುಸುಳುಕೋರರ ಬಗ್ಗೆ ತೀವ್ರ ನಿಗಾ ಇಡಲಾಗಿದ್ದು, ಅಂತಹವರು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಬೇರೆ ರಾಜ್ಯಗಳಿಂದ ಬಂದ ಸಾರ್ವಜನಿಕರು ಕೂಡಾ ಜಿಲ್ಲೆಗೆ ಆಗಮಿಸಿರುವ ಬಗ್ಗೆ ತಕ್ಷಣ ಮಾಹಿತಿ ನೀಡುವಂತೆ ಕೋರಿದರು.
ಜಿಲ್ಲೆಯ ಗಡಿಭಾಗವಾದ ಧೂಳಖೇಡದಲ್ಲಿ ಚೆಕ್ ಪೋಸ್ಟ್‌ನಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸುವವರ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಉತ್ತರ ಪ್ರದೇಶ, ರಾಜಸ್ಥಾನ, ಚಂಡೀಘಡ, ಗುಜರಾತ್, ಗೋವಾಗಳಿಂದ 57 ಜನರು ಆಗಮಿಸಿದ್ದಾರೆ. ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಿಂದ 9,137 ಜನರು ಆಗಮಿಸಿದ್ದು, ಬೇರೆ ರಾಜ್ಯಗಳಿಗೆ ಹೋಗಬಯಸುವ ಪ್ರಯಾಣಿಕರ ಕುರಿತಂತೆ ಆಯಾ ಜಿಲ್ಲೆಗಳ ಜಿಲ್ಲಾ ಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿ ಸಿ ಕಳುಹಿಸಲಾಗುತ್ತಿದೆ. ಈಗಾಗಲೇ 17 ಬಸ್ ಗಳ ಮೂಲಕ ಹೊರ ರಾಜ್ಯಗಳಿಗೆ 540 ಜನರನ್ನು ಕಳುಹಿಸಲಾಗಿದೆ ಎಂದು ವಿವರಿಸಿದರು.
ಅತೀ ಹೆಚ್ಚು ಕೋವಿಡ್ 19 ಸೋಂಕು ಹರಡಿರುವ ರಾಜ್ಯಗಳಿಂದ ಮತ್ತು ಇತರೆ ವಿವಿಧ ರಾಜ್ಯಗಳಿಂದ ಬರುವವರ ಮೇಲೆ ತೀವ್ರ ನಿಗಾ ಇರಿಸಬೇಕು. ಆಯಾ ಗ್ರಾಮ, ನಗರಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡುವ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಬೇಕು. ಡಂಗುರ ಸಾರಬೇಕು. ಐದು ರಾಜ್ಯಗಳಿಂದ ಬಂದವರ ಕೈಗೆ ಸ್ಟ್ಯಾಂಪಿಂಗ್ ಮಾಡಿ, ಕ್ವಾರಂಟೈನ್ ಮಾಡಬೇಕು. ಮನೆಗೆ ನೋಟಿಸ್ ಅಂಟಿಸಿ ನೆರೆಹೊರೆ ಜನರ ಕಣ್ಗಾವಲಿಗೆ ತಿಳಿಸಬೇಕು ಎಂದರು.
ಕ್ವಾರಂಟೈನ್ ಕೇಂದ್ರಗಳಲ್ಲಿ ಹಾಸ್ಟೇಲ್ ವಾರ್ಡನ್,ಶಾಲಾ ಮುಖ್ಯೋಪಾಧ್ಯಾಯರಿಗೆ ಊಟ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವ ಹೊಣೆ ನೀಡಬೇಕು. ತಹಶೀಲ್ದಾರರು, ತಾಪಂ ಇಒಗಳು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥ ಅಧಿಕಾರಿಗಳು ನಿತ್ಯವೂ ಕೈಗೊಂಡ ವರದಿ ನೀಡಬೇಕು ಎಂದು ತಾಕೀತು ಮಾಡಿದರು.
ಜಿಲ್ಲೆಯಲ್ಲಿ ಈ ವರೆಗೆ ಕೋವಿಡ್ ಸೋಂಕಿತ 48 ಪ್ರಕರಣಗಳಲ್ಲಿ 25 ರೋಗಿಗಳು ಸೋಂಕುಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮೂವರು ಮೃತಪಟ್ಟಿದ್ದು, 20 ಜನರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಗಂಟಲು ದ್ರವ ಮಾದರಿ ಪರೀಕ್ಷೆಗೆ ಕಳುಹಿಸಿದ 2,414 ಜನರಲ್ಲಿ 2,270 ಜನರ ವರದಿ ನೆಗೆಟಿವ್ ಬಂದಿದೆ. 96 ಜನರ ಪರೀಕ್ಷಾ ವರದಿ ಬರಬೇಕಾಗಿದೆ. ಕೋವಿಡ್-19 ಪಾಸಿಟಿವ್ 20 ರೋಗಿಗಳು ಆಸ್ಪತ್ರೆಯಲ್ಲಿದ್ದು, ಪರಿಣಾಮಕಾರಿ ಚಿಕಿತ್ಸೆ ನೀಡಲಾಗುತ್ತಿದೆ.
ವೈ.ಎಸ್.ಪಾಟೀಲ.
ಜಿಲ್ಲಾಧಿಕಾರಿ
ಜಿಲ್ಲೆಯಲ್ಲಿ ಎಲ್ಲ ತಹಶೀಲ್ದಾರರು ತಮ್ಮ ತಾಲೂಕಿಗೆ ಬೇರೆ ರಾಜ್ಯಗಳಿಂದ ಬಂದವರ ದಾಖಲೆಗಳ ಆಧಾರದ ಮೇಲೆ ಹೋಂ ಕ್ವಾರಂಟೈನ್‌ಗೆ, ಸಾಂಸ್ಥಿಕ ಕ್ವಾರಂಟೈನ್‌ಗೆ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ಬಂದವರ ಬಗ್ಗೆ ಆಯಾ ಗ್ರಾಮ ಕಾರ್ಯಪಡೆ ಸಮಿತಿ ತೀವ್ರ ನಿಗಾ ಇಡಬೇಕು. ಅಗತ್ಯ ಬಿದ್ದಲ್ಲಿ ಪೊಲೀಸರ ನೆರವು ಪಡೆಯಬೇಕು.
ಗೋವಿಂದರಡ್ಡಿ,
ಸಿಇಒ, ಜಿಪಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.