ಅಂತರ್ಜಲ ಹೆಚ್ಚಳಕ್ಕೆ ನಾಲೆಗೆ ನೀರು ಹರಿಸಿ: ಪಾಟೀಲ
ನೀರಾವರಿ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸತತ ಮೂರು ಗಂಟೆ ಚರ್ಚೆ
Team Udayavani, Jun 22, 2020, 5:50 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ಮಳೆಗಾಲದಲ್ಲಿ ಕಾಲುವೆಗಳಲ್ಲಿ ನೀರು ಹರಿಬಿಡಲಾಗುತ್ತಿದೆ. ಹೀಗಾಗಿ ಏತ ನೀರಾವರಿ ಯೋಜನೆಗಳ ಜಾಕ್‌ವೆಲ್‌ಗಳಲ್ಲಿ ಅದರಲ್ಲೂ ತುಬಚಿ-ಬಬಲೇಶ್ವರ ಯೋಜನೆ ಮೋಟಾರ್ ದುರಸ್ತಿ, ಶಾಖಾ ಕಾಲುವೆಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಎಂದು ಬಬಲೇಶ್ವರ ಶಾಸಕ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭಾನುವಾರ ಅಮಾವಾಸ್ಯೆ ಹಾಗೂ ಗ್ರಹಣ ದಿನವಿದ್ದರೂ ನೀರಾವರಿ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಸತತ ಮೂರು ಗಂಟೆ ಚರ್ಚೆ ನಡೆಸಿದ ಅವರು, ಭೂಸ್ವಾಧೀನ ಸಂಬಂಧಿಸಿದ ಅನುದಾನ ಬಿಡುಗಡೆ ಕುರಿತು ವಿವರ ಪಡೆದರು. ಜಲಸಂಪನ್ಮೂಲ ಸಚಿವರು ಹಾಗೂ ಇಲಾಖೆ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ನೀರಾವರಿ ಯೋಜನೆಗಳ ಕುರಿತು ಚರ್ಚಿಸಿದರು. ಮುಳವಾಡ ಹಾಗೂ ಚಿಮ್ಮಲಗಿ ಏತ ನೀರಾವರಿ ಯೋಜನೆಗಳು ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ಸದರಿ ಯೋಜನೆಗಳನ್ನು ಮುಕ್ತಾಯಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೇ ತಾವು ಪ್ರತಿನಿಧಿಸುವ ಬಬಲೇಶ್ವರ ಕ್ಷೇತ್ರವನ್ನು ನೀರಾವರಿ ಮಾಡುವ ಮಹತ್ವಾಕಾಂಕ್ಷೆಯ ಬೃಹತ್ ತುಬಚಿ-ಬಬಲೇಶ್ವರ ಏತನೀರಾವರಿ ಯೋಜನೆ ಕುರಿತು ಅ ಧಿಕಾರಿಗೆಳೊಂದಿಗೆ ಚರ್ಚಿಸಿದರು. ಅಲ್ಲದೇ ಸಣ್ಣ ನೀರಾವರಿ ಇಲಾಖೆಯಿಂದ ಅಂತರ್ಜಲ ವೃದ್ಧಿಯಾಗಲು, ವಿವಿಧ ನಾಲಾಗಳಿಗೆ ಅಗತ್ಯವಿರುವೆಡೆ ಚೆಕ್ ಡ್ಯಾಂ ಹಾಗೂ ಬಾಂದಾರಗಳನ್ನು ನಿರ್ಮಿಸಲು ಕೈಗೊಳ್ಳುವಂತೆ ಸೂಚಿಸಿದರು.
ಈ ಸಭೆಯಲ್ಲಿ ಕರ್ನಾಟಕ ನೀರಾವರಿ ನಿಗಮ ಅಧೀಕ್ಷಕ ಅಭಿಯಂತರ ಚಂದ್ರಶೇಖರ, ಕೃಷ್ಣಾ ಭಾಗ್ಯ ಜಲ ನಿಗಮ ಅಧಿಧೀಕ್ಷಕ ಅಭಿಯಂತರ ಜಗದೀಶ ರಾಠೊಡ, ಅಥಣಿ ವಲಯ ಕಾರ್ಯನಿರ್ವಾಹಕ ಅಭಿಯಂತರ ಶ್ರೀಕಾಂತ ಜಾಲಿಬೇರಿ, ಸಣ್ಣ ನೀರಾವರಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಾಶ ನಾಯಕ ಸೇರಿದಂತೆ ರೈತರ ಪರವಾಗಿ ಜಿಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.