ಜಲಮೂಲಗಳ ಗಣತಿ ಕಾರ್ಯಕ್ಕೆ ಡಿಸಿ ಪಾಟೀಲ ಸೂಚನೆ
ಎಲ್ಲ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಲಿ
Team Udayavani, Jan 25, 2020, 1:48 PM IST
ವಿಜಯಪುರ: ಸಣ್ಣ ನೀರಾವರಿ ಹಾಗೂ ನೀರಿನ ಆಸರೆಗಳ ಗಣತಿ ಕಾರ್ಯವನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 6ನೇ ಸಣ್ಣ ನೀರಾವರಿ ಗಣತಿ ಮತ್ತು ನೀರಿನ ಆಸರೆಗಳ ಗಣತಿ ಕಾರ್ಯ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆಯ ಶೇ. 100 ಕೇಂದ್ರ ಪುರಸ್ಕೃತ ಸಣ್ಣ ನೀರಾವರಿ ಅಂಕಿ ಅಂಶಗಳ ಸಮನ್ವಯೀಕರಣ ಯೋಜನೆ ಅಡಿಯಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಸಣ್ಣ ನೀರಾವರಿ ಗಣತಿ ನಡೆಸಬೇಕು. ಹೀಗಾಗಿ ಜಿಲ್ಲೆಯಲ್ಲಿರುವ ಎಲ್ಲ ಸಣ್ಣ ನೀರಾವರಿ ನೀರಿನಾಸರೆಗಳ ಗಣತಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆ, ಆರ್ಥಿಕ ಮತ್ತು ಸಾಂಖ್ಯೀಕ ಇಲಾಖೆ, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ, ಭಾರಿ ಮತ್ತು ಮಧ್ಯಮ ನೀರಾವರಿ ಇಲಾಖೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸ್ಥಳೀಯ ಸಂಸ್ಥೆಗಳಾದ ಮಹಾನಗರಪಾಲಿಕೆ, ಪುರಸಭೆ, ನಗರಸಭೆಗಳು ರಾಜ್ಯದ ಹಿತದೃಷ್ಟಿಯಿಂದ ಈ ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಗಣತಿ ಕ್ಷೇತ್ರ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ರಾಜ್ಯದಲ್ಲಿರುವ 0-200 ಹೆಕ್ಟೇರ್ ಅಚ್ಚುಕಟ್ಟು ಎಲ್ಲ ನೀರಾವರಿ ಯೋಜನೆಗಳು ಸಣ್ಣ ನೀರಾವರಿ ಯೋಜನೆಗಳೆಂದು ಪರಿಗಣಿಸಿದ್ದು, ಅಂತರ್ಜಲ ಯೋಜನೆಗಳು ಹಾಗೂ ಮೇಲ್ಮಯ ಹರಿಯುವ ಜಲ ಯೋಜನೆಗಳು ಎಂದು ವಿಧಗಳಾಗಿ ವರ್ಗಿಕರಿಸಲಾಗಿದ್ದು ಅಂತರ್ಜಲ ಯೋಜನೆಗಳಡಿ ಅಗೆದ ಬಾವಿ, ಕೊಳವೆ ಬಾವಿಗಳು ನಮೂನೆ 1ರಲ್ಲಿ ಹಾಗೂ ಮೆಲ್ಮೈ ಹರಿಯುವ ಜಲ ಯೋಜನೆಗಳಡಿ ಏತ ನೀರಾವರಿ ಯೋಜನೆಗಳನ್ನು ನಮೂನೆ 2ರಲ್ಲಿ ಭರ್ತಿ ಮಾಡಿ ಗಣತಿ ಕಾರ್ಯ ಕೈಗೊಂಡು ಮಾಹಿತಿ ಸಂಗ್ರಹಿಸಬೇಕು. ಗ್ರಾಮಗಳ ವ್ಯಾಪ್ತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ತಹಶೀಲ್ದಾರರ ಮೇಲ್ವಿಚಾರಣೆಯಲ್ಲಿ ಗ್ರಾಮ
ಸಹಾಯಕರಿಂದ ಮಾಹಿತಿ ಸಂಗ್ರಹಿಸಬೇಕು. ಅದರಂತೆ ಭಾರಿ ಮತ್ತು ಮಧ್ಯಮ ನೀರಾವರಿ, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ ರಾಜ್, ಗಣಿ ಮತ್ತು ಭೂ ವಿಜ್ಞಾನ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಕೃಷಿ- ತೋಟಗಾರಿಕೆ ಇಲಾಖೆ, ನಗರ ಸ್ಥಳಿಯ ಸಂಸ್ಥೆಗಳ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ಗಣತಿದಾರರು ಮೊಬೈಲ್ ಸ್ನೇಹಿ ಆಫ್ ಬಳಸಿಕೊಂಡು ಅಕ್ಷಾಂಶ ಮತ್ತು ರೆಖಾಂಶ ಸಂಗ್ರಹಿಸಿ ಆನ್‌ಲೈನ್ ಸಾಫ್ಟ್‌ವೇರ್‌ನಲ್ಲಿ ಅಪ್ಲೋಡ್ ಮಾಡಲು ಗಣತಿದಾರರು, ಮೇಲ್ವಿಚಾರಕರು, ಸಂಬಂಧಿ ಸಿದ ಅಧಿಕಾರಿಗಳು ಪರಸ್ಪರ ಸಹಕಾರದಿಂದ ಕಾರ್ಯ ನಿರ್ವಹಿಸಿ ಗಣತಿ ಕ್ಷೇತ್ರ ಕಾರ್ಯ ಸಕಾಲದಲ್ಲಿ ಪೂರೈಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.