ತೈಲ ಬೆಲೆ ಏರಿಕೆಗೆ ವಿರೋಧ
Team Udayavani, Jul 3, 2020, 3:26 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ವಿಜಯಪುರ: ದೇಶದಲ್ಲಿ ಪೆಟ್ರೋಲ್, ಡಿಸೇಲ್ ಸೇರಿದಂತೆ ಇಂಧನ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದು, ಸರ್ಕಾರ ಕೂಡಲೇ ಇಂಧನ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಎಸ್‌ಯುಸಿಐ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಫಲಕಗಳನ್ನು ಪ್ರದರ್ಶಿಸಿದರು. ಈ ವೇಳೆ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ ಮಾತನಾಡಿ, ಪೆಟ್ರೋಲ್ ದರ 83 ರೂ. ಗಡಿ ದಾಟಿದ್ದು, ಡಿಸೇಲ್ 77 ರೂ. ಮೀರಿದೆ. ಇದರಲ್ಲಿ 55 ರೂ.ದಷ್ಟು ಸರ್ಕಾರದ ತೆರಿಗೆಯೇ ಸೇರಿದೆ. ಕಳೆದ 2 ತಿಂಗಳ ಹಿಂದೆ ಕೋವಿಡ್ ಲಾಕ್‌ಡೌನ್ ಸಮಯದಲ್ಲಿ ಜಾಗತಿಕವಾಗಿ ತೈಲ ಬೇಡಿಕೆ ಕುಸಿತ ಕಂಡಿದೆ. ಇದರಿಂದಾಗಿ ಕಚ್ಚಾ ತೈಲ ಬೆಲೆಯೂ ಶೂನ್ಯಕ್ಕೆ ತಲುಪಿತ್ತು. ಆದರೆ ಇದರ ಲಾಭವನ್ನು ಜನರಿಗೆ ತಲುಪಿಸದ ಕೇಂದ್ರ ಸರ್ಕಾರ ಪೆಟ್ರೋಲ್-ಡಿಸೇಲ್ ಮೇಲೆ ಪ್ರತಿ ಲೀಟರಿಗೆ 3 ರೂ. ಹೆಚ್ಚುವರಿ ಅಬಕಾರಿ ಸುಂಕ ವಿಧಿಸಿ ಜನ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.
ಜಿಲ್ಲಾ ಸಮಿತಿ ಸದಸ್ಯ ಬಾಳು ಜೇವೂರ ಮಾತನಾಡಿ, ಕೋವಿಡ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜನಪರ ರೀತಿಯಾಗಿ ಸರ್ಕಾರಗಳು ನಡೆದುಕೊಳ್ಳಬೇಕು, ಪೆಟ್ರೋಲ್, ಡಿಸೇಲ್ ಸೇರಿದಂತೆ ವಿವಿಧ ಜೀವನಾವಶ್ಯಕ ವಸ್ತುಗಳಿಗೆ ಕಡಿಮೆ ದರ ನಿಗದಿ ಮಾಡಬೇಕು. ಕೂಡಲೇ ಇಂಧನ ಬೆಲೆ ಇಳಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು. ಪ್ರಭುಗೌಡ ಪಾಟೀಲ, ಸಿದ್ದಲಿಂಗ ಬಾಗೇವಾಡಿ, ಭರತಕುಮಾರ, ಮಲ್ಲಿಕಾರ್ಜುನ, ಸುನೀಲ ಸಿದ್ರಾಮಶೆಟ್ಟಿ, ಶೋಭಾ, ಸುಮಿತ್ರಾ, ವಿದ್ಯಾ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.