Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು
Team Udayavani, May 2, 2024, 11:18 AM IST
ವಿಜಯಪುರ: ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯುವ ಮನಸ್ಥಿತಿಯ ವ್ಯಕ್ತಿ ನಮಗೆ ಬೇಕಿಲ್ಲ. ಹೀಗಾಗಿ ನಮ್ಮ ಸಮಾಜ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ನಿರ್ಧರಿಸಿದೆ ಎಂದು ಪಂಚಮಸಾಲಿ ಸಮಾಜದ ಮುಖಂಡರು ಹೇಳಿದರು.
ಗುರುವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಂಚಮಸಾಲಿ ಸಮಾಜದ ಮುಖಂಡರಾದ ಸಂಗಮೇಶ ಬಬಲೇಶ್ವರ, ಎಂ.ಆರ್.ಪಾಟೀಲ ಬಳ್ಳೊಳ್ಳಿ, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 4 ರಂದು ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಗ್ರಾಮದಲ್ಲಿ ಸಮಾಜದ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸದರಿ ಸಮಾವೇಶದಲ್ಲಿ ಶಾಸಕರಾದ ಆಳಂದದ ಬಿ.ಆರ್.ಪಾಟೀಲ, ಧಾರವಾಡದ ವಿನಯ ಕುಲಕರ್ಣಿ, ಹುನಗುಂದದ ವಿಜಯಾನಂದ ಕಾಶಪ್ಪನವರ, ಕೊಪ್ಪಳ ಮಾಜಿ ಸಂಸದ ಸಂಗಣ್ಣ ಕರಡಿ ಸೇರಿದಂತೆ ಸಮಾಜದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.
ಕ್ಷೇತ್ರದಲ್ಲಿ ಸತತ ಮೂರು ಬಾರಿ ಅಯ್ಕೆಯಾದರೂ ವಿಜಯಪುರ ಹಾಲಿ ಸಂಸದರು ಅಭಿವೃದ್ಧಿ ಕೆಲಸದ ಕಡೆಗೆ ಒತ್ತು ನೀಡುವ ಬದಲು ಸಮಾಜವನ್ನು ಒಡೆಯುವ ಕೆಲಸ ಮಾಡಿದರು. ಹೀಗಾಗಿ ನಿಷ್ಕ್ರಿಯ ಸಂಸದರನ್ನು ಬದಲಿಸಲು ನಮ್ಮ ಸಮಾಜ ನಿರ್ಧರಿಸಿದೆ ಎಂದರು.
ಈರಣ್ಣ ಪಟ್ಟಣಶೆಟ್ಟಿ, ಶಂಕರಗೌಡ ಬಿರಾದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
Kabaddi: ಇಂದು ಸೀನಿಯರ್ ಕಬಡ್ಡಿ ತಂಡದ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.