ಲಾರಿ-ಬೈಕ್ ಕಳ್ಳರ ಬೇಟೆಯಾಡಿದ ವಿಜಯಪುರ ಪೊಲೀಸರು 2 ಲಾರಿ, 13 ಬೈಕ್ ವಶ
Team Udayavani, Apr 15, 2021, 1:04 PM IST
ವಿಜಯಪುರ: ಜಿಲ್ಲೆಯ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು 2 ಲಾರಿ ಹಾಗೂ 13 ಬೈಕ್ ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಗುರುವಾರ ನಗರದ ಗೋಲಗುಂಬಜ ಪೊಲೀಸ್ ಠಾಣೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಎಸ್.ಪಿ. ಅನುಪಮ್ ಅಗರವಾಲ್, ನಗರದ ಅಸಾರಗಲ್ಲಿ ನಿವಾಸಿ ಮಹಿಬೂಬ್ ಹುಸೇನ್ ಹವಾಲ್ದಾರ್ ಹಾಗೂ ಕಲಬುರಗಿ ಜಿಲ್ಲೆಯ ಬಸವೇಶ್ವರ ಕಾಲೋನಿ ನಿವಾಸಿ ಮೊಹಮ್ಮದ್ ಆಸೀಫ್ ಶೇಖ್ ಲಾರಿ ಕಳ್ಳತನ ಆರೋಪದಲ್ಲಿ ಬಂಧಿತರು.
ಬಂಧಿತ ಆರೋಪಿಗಳಿಂದ 7.25 ಲಕ್ಷ ರೂ. ಮೌಲ್ಯದ 2 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದರು.
ಇದನ್ನೂ ಓದಿ : ತಿಹಾರ್ ಜೈಲಿನಿಂದ ಕೋವಿಡ್ ಪೆರೋಲ್ ಮೇಲೆ ಹೊರ ಹೋದ ಸಾವಿರಾರು ಕೈದಿಗಳು ನಾಪತ್ತೆ!
ಇದಲ್ಲದೇ ಜಿಲ್ಲಾದ್ಯಂತ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 7.50 ಲಕ್ಷ ರೂ. ಮೌಲ್ಯದ 13 ಬೈಕ್ ಗಳನ್ನು ಗೋಳಗುಂಬಜ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣಗಳಲ್ಲಿ ಗಾಂಧಿ ಸದಾಶಿವ ಎಮ್ಮೆ ಹಾಗೂ ಗಂಗಾಧರ ತುಕಾರಾಮ್ ಬಗಲಿ ಬಂಧಿಸಲಾಗಿದೆ.
ಸದರಿ ಪ್ರಕರಣಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಡಿಎಸ್ಪಿ ಲಕ್ಷ್ಮೀನಾರಾಯಣ, ಸಿಪಿಐ ಬಸವರಾಜ ಮೂಕರ್ತಿಹಾಳ, ಎಸೈ ರಾಜೇಶ ಲಮಾಣಿ ಇವರ ನೇತೃತ್ವದ ಗೋಳಗುಂಬಜ ಪೊಲೀಸ್ ಠಾಣಾ ತನಿಖಾ ತಂಡ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಎಸ್ಪಿ ಅಗರವಾಲ್ ಪ್ರಶಸ್ತಿ ಪ್ರದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.