ಎಸ್ಸಿಪಿ-ಎಸ್ಟಿಪಿ ಪ್ರಗತಿ ಸಾ ಧನೆಗೆ ಸೂಚನೆ

ಗೈರಾದ ಅಧಿಕಾರಿಗಳಿಗೆ ನೋಟಿಸ್‌ ನೀಡಲು ಆಗ್ರಹ

Team Udayavani, Mar 20, 2020, 4:58 PM IST

20-March-24

ವಿಜಯಪುರ: ವಿಶೇಷ ಘಟಕ ಗಿರಿಜನ ಉಪ ಯೋಜನೆಯಡಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವುದರ ಜೊತೆಗೆ ಅನುದಾನ ಮರಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಘಟಕ ಮತ್ತು ಗಿರಿಜನ ಉಪ ಯೋಜನೆಯಡಿ ಇಲಾಖಾವಾರು 2020ರ ಫೆಬ್ರವರಿ ಅಂತ್ಯದ ವರೆಗೆ ಸಾಧಿಸಿದ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಿದ ಅವರು, ಸದರಿ ಯೋಜನೆಯಲ್ಲಿ ಕೃಷಿ ಇಲಾಖೆ ವ್ಯಾಪ್ತಿಯ ಕೃಷಿ ಭಾಗ್ಯ ಯೋಜನೆ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಬೇಕು. ಅನುದಾನ ಮರಳಿ ಹೋಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅದರಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿಯೂ ಸಹ ಸೂಕ್ತ ಪ್ರಗತಿ ಸಾಧಿಸುವಂತೆ ಅವರು ಸೂಚನೆ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಸಿಂದಗಿ, ಆಲಮೇಲ, ನಾಲತವಾಡ, ಮನಗೂಳಿ, ಬ.ಬಾಗೇವಾಡಿಗಳಲ್ಲಿ ನಿಗದಿತ ಗುರಿಗೆ ಪ್ರಗತಿ ಸಾಧಿಸದೆ ಇರುವುದರಿಂದ ಕಾರಣ ಕೇಳಿ, ನೋಟಿಸ್‌ ಜಾರಿಗೊಳಿಸಬೇಕು. ಅದರಂತೆ ಸಭೆಗೆ ಗೈರು ಹಾಜರಾಗಿರುವವರಿಗೂ ನೋಟಿಸ್‌ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯ ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಅಂಥವರ ಬಗ್ಗೆ ತೀವ್ರ ನಿಗಾ ಇಡುವುದರ ಜೊತೆಗೆ ಅವಶ್ಯಕ ಕ್ರಮ ಕೈಗೊಳ್ಳಬೇಕು. ಮೀನುಗಾರಿಕೆ ಚಟುವಟಿಕೆ ಉತ್ತೇಜನ, ವಿವಿಧ ಕೆರೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕು. ಶೇ.100ರಷ್ಟು ಪ್ರಗತಿ ಸಾಧಿ ಸದೆ ಇರುವ ಇಲಾಖೆಗಳ ಅಧಿಕಾರಿಗಳು ಬಾಕಿ ಇರುವ ಕಾಮಗಾರಿ ಪೂರ್ಣಗೊಳಿಸಲು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಲು ಮತ್ತು ಅನುದಾನವನ್ನು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಲು ಸೂಚಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಸಮಾಜ ಕಲ್ಯಾಣ ಉಪನಿರ್ದೇಶಕ ಮಹೇಶ ಪೋದ್ದಾರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.