ಪರೀಕ್ಷಾ ಪಾವಿತ್ರ್ಯ ಕಾಪಾಡಲು ಸೂಚನೆ

ಜಿಲ್ಲೆಯಲ್ಲಿವೆ 41 ಪರೀಕ್ಷಾ ಕೇಂದ್ರ27,359 ಪರೀಕ್ಷಾರ್ಥಿಗಳ ನೋಂದಣಿಸುಳ್ಳು ಸುದ್ದಿ ಹರಡಿದರೆ ಕ್ರಮ

Team Udayavani, Feb 21, 2020, 3:29 PM IST

21-February-14

ವಿಜಯಪುರ: ಮಾ.4ರಿಂದ 23ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲದಂತೆ ನಡೆಸಬೇಕು. ಇಲಾಖೆಯ ನಿಯಮಾನುಸಾರ ಯಾವ ಲೋಪವಾಗದಂತೆ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಎಸ್‌.ಬಿ. ಕಲಾ ಹಾಗೂ ಕೆ.ಸಿ.ಪಿ. ವಿಜ್ಞಾನ ಕಾಲೇಜಿನಲ್ಲಿ ಗುರುವಾರ ನಡೆದ ದ್ವಿತೀಯ ಪಿಯು ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಜಿಲ್ಲೆಯಲ್ಲಿ 15,972 ವಿದ್ಯಾರ್ಥಿಗಳು ಹಾಗೂ 11,387 ವಿದ್ಯಾರ್ಥಿನಿಯರು ಸೇರಿ ಒಟ್ಟು 27,359 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಣಿ ಮಾಡಿಸಿದ್ದಾರೆ. ಜಿಲ್ಲೆಯಲ್ಲಿ 4 ಸರ್ಕಾರಿ ಕಾಲೇಜು, 27 ಅನುದಾನಿತ ಹಾಗೂ 10 ಅನುದಾನ ರಹಿತ ಕಾಲೇಜುಗಳಲ್ಲಿ ಜಿಲ್ಲೆಯ ಒಟ್ಟು 41 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.

ದ್ವಿತೀಯ ಪಿಯು ಪರೀಕ್ಷಾ ಕೇಂದ್ರಗಳ ಕೊಠಡಿ ಹಾಗೂ ಹೋರಾಂಗಣದಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಮತ್ತೆ ಯಾರೂ ಸ್ಮಾರ್ಟ್‌ ಫೋನ್‌ ಬಳಸುವಂತಿಲ್ಲ. ಶೀತಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಹಾಗೂ ವಿದ್ಯಾರ್ಥಿಗಳು ನೆಲದ ಮೇಲೆ ಪರೀಕ್ಷೆಯನ್ನು ಬರೆಸುವಂತಿಲ್ಲ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದಂಡ ಪ್ರಕ್ರಿಯೆ 1973ರ ಪ್ರಕಾರ ಸೆಕ್ಷನ್‌ 107 ಹಾಗೂ 110ರ ಪ್ರಕಾರ ಪರೀಕ್ಷೆಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಇನ್ನಿತರ ರೀತಿಯಲ್ಲಿ ಸುಳ್ಳು ಸುದ್ದಿ ಹರಡಿದ ವ್ಯಕ್ತಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ದ್ವಿತೀಯ ಪಿಯು ಪರೀಕ್ಷೆಯ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರೀಧೀ ಕೇಂದ್ರಗಳಿಗೆ ಹೆಚ್ಚಿನ ಪೊಲೀಸ್‌ ವ್ಯವಸ್ಥೆ ಹಾಗೂ ಜಾಗೃತಿ ದಳಗಳನ್ನು ನೇಮಿಸಲಾಗುವುದು.

ಪರೀ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಸೆಕ್ಷನ್‌ 144 ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷಾ ಕೊಠಡಿಗಳಲ್ಲಿ ಪರೀಕ್ಷೆ ನಡೆಯುವ ಸಮಯದಲ್ಲಿ ಮುಖ್ಯ ಅಧೀಕ್ಷಕರನ್ನು ಹೊರತು ಪಡಿಸಿ, ಅನ್ಯರಿಗೆ ಪ್ರವೇಶ ಕಲ್ಪಿಸಬಾರದು. ಪರೀಕ್ಷಾ ಕ್ರಮಗಳ ಬಗ್ಗೆ
ಯಾವುದೇ ಸುದ್ದಿ ವಾಹಿನಿಗಳು ಬ್ರೇಕಿಂಗ್‌ ನ್ಯೂಸ್‌ ಗಳನ್ನು ಬಿತ್ತರಿಸುವಂತಿಲ್ಲ ಎಂದು ಸೂಚಿಸಿದರು.

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನಿರ್ದೇಶನಾಲಯದ ಪ್ರಕಾರ ಸಾಧ್ಯವಿದ್ದ ಶಾಲೆಯ ವಿದ್ಯಾರ್ಥಿಗಳನ್ನು ರ್‍ಯಾಂಡ್‌ಮೈಜ್‌ ಮಾಡಲಾಗುತ್ತಿದೆ. ವಿದ್ಯಾರ್ಥಿಗಳ ರ್‍ಯಾಂಡ್‌ಮೈಜೇಶನ್‌ ಆಗದ ಪರೀಕ್ಷಾ  ಕೇಂದ್ರಗಳಲ್ಲಿ ಸಂಪೂರ್ಣ ಸಿಬ್ಬಂದಿಗಳನ್ನು ರ್‍ಯಾಂಡ್‌ ಮೈಜ್‌ ಮಾಡುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ| ಔದ್ರಾಮ, ಉಪವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜೆ.ಎಸ್‌. ಪೂಜಾರಿ ಸೇರಿದಂತೆ ಇತರರು ಸಭೆಯಲ್ಲಿ
ಹಾಜರಿದ್ದರು.

ಟಾಪ್ ನ್ಯೂಸ್

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.