Vijayapura; ಕುಡಿಯುವ ನೀರಿಗೆ ಕನ್ನ: ಎಂಟು ರೈತರ ವಿರುದ್ಧ ಪ್ರಕರಣ ದಾಖಲು
Team Udayavani, Oct 27, 2023, 6:27 PM IST
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ ವಿಜಯಪುರ ಜಿಲ್ಲೆಯ ಕುಡಿಯುವ ನೀರಿಗಾಗಿ ಕೆರೆ ತುಂಬಿಸಲು ಕಾಲುವೆಗೆ ಹರಿಸುತ್ತಿದ್ದ ನೀರನ್ನು ಅಕ್ರಮವಾಗಿ ಕೃಷಿ ಚಟವಟಿಕೆಗೆ ಬಳಸಿಕೊಂಡ ಆರೋಪದಲ್ಲಿ ಎಂಟು ರೈತರ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರೀ ಜಲಾಶಯದ ಹಿನ್ನೀರಿನ ಏತ ನೀರಾವರಿ ಯೋಜನೆಗಳ ಮೂಲಕ ಜಿಲ್ಲೆಯಲ್ಲಿ 106 ಕೆರೆಗಳಿಗೆ ನೀರು ತುಂಬಿಸಲು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ.
ಅಲ್ಲದೇ ಕುಡಿಯುವ ನೀರಿನ ಉದ್ಧೇಶದ ನೀರಿನ ದುರ್ಬಳಕೆ ತಡೆಯುವುದಕ್ಕಾಗಿ ನೀರು ಹರಿಸುವ ಕಾಲುವೆಗಳ ಮೇಲೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೆ ತರಲಾಗಿದೆ. ಇದರ ಹೊರತಾಗಿಯೂ ಮುಳವಾಡ ಏತ ನೀರಾವರಿ ಯೋಜನೆಯಿಂದ 100 ಕೆರೆಗಳಿಗೆ ನೀರು ತುಂಬಿಸಲು ಕಾಲುವೆಗಳಿಗೆ ಹರಿಸುತ್ತಿರುವ ನೀರನ್ನು ಅಕ್ರಮವಾಗಿ ಕೃಷಿ ಚಟುವಟಿಕೆಗೆ ಬಳಸಿಕೊಂಡ ಎಂಟು ರೈತರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೆಬಿಜೆಎನ್‍ಎಲ್ ಬಸವನಬಾಗೇವಾಡಿ ವೃತ್ತದ ಗೋವಿಂಧ ರಾಠೋಡ ಇಂಡಿ ಭಾಗದಲ್ಲಿ ಅಕ್ರಮವಾಗಿ ಕೃಷಿ ಚಟುವಟಿಕೆಗಳಿಗೆ ನೀರು ಬಳಸಿಕೊಂಡ ಆರೋಪದಲ್ಲಿ ರೈತರ ವಿರುದ್ಧ ದೂರು ದಾಖಲಾಸಿದ್ದಾಗಿ ವಿವರಿಸಿದ್ದಾರೆ.
ಮತ್ತೊಂದೆಡೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆ ರೈತರಿಗೆ ಮನವಿ ಮಾಡಿರುವ ಜಿಲ್ಲಾಧಿಕಾರಿ ಭೂಬಾಲನ್, ಕುಡಿಯುವ ನೀರಿಗಾಗಿ ಕೆರೆಗಳಿಗೆ ನೀರು ತುಂಬಿಸಲು ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಕೆರೆಗಳು ತುಂಬಿದಲ್ಲಿ ಸಹಜವಾಗಿ ಅಂತರ್ಜಲ ಹೆಚ್ಚಿ, ರೈತರಿಗೂ ಕೃಷಿ ಬಳಕೆಗೆ ಅನುಕೂಲವಾಗಲಿದೆ ಎಂದಿದ್ದಾರೆ.
ಇದರ ಹೊರತಾಗಿಯೂ ರೈತರು ಕೆರೆರಗಳಿಗೆ ನೀರು ತುಂಬಿಲಸು ಕಾಲುವೆಗಳಿಗೆ ಹರಿಸುತ್ತಿರುವ ನೀರನ್ನು ಅಕ್ರಮವಾಗಿ ಬಳಸಿಕೊಳ್ಳಬಾರದು. ಕಾಲುವೆಗಳಿಗೆ ನಿಯಮ ಬಾಹೀರವಾಗಿ ಪೈಪ್ ಅಳವಡಿಸುವುದು, ಪಂಪ್‍ಸೆಟ್ ಮೂಲಕ ನೀರು ಎತ್ತುವುದು, ಕಾಲುವೆಗಳನ್ನು ಪಡೆಯಬಾರದು. ಬದಲಾಗಿ ಭೀಕರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುವ ಜಿಲ್ಲಾಡಳಿತದ ಆಶಯ ಈಡೇರಿಸಲು ರೈತರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಇದಲ್ಲದೇ ಜಿಲ್ಲೆಯ 6 ಕೆರೆಗಳಿಗೆ ನೀರು ತುಂಬಿಸಲು ಅ.28 ರಿಂದ ಚಿಮ್ಮಲಗಿ ಏತ ನೀರಾವರಿ ಕಾಲುವೆಗಳ ಮೂಲಕವೂ ನೀರು ಹರಿಸಲಾಗುತ್ತಿದ್ದು, ಕಾಲುವೆ ಮೇಲೆ ನಿಷೇಧಾಜ್ಞೆ ಜಾರಿಗೆ ತರಲಾಗುತ್ತಿದೆ. ಕಾರಣ ರೈತರು ಕೆರೆಗಳಿಗೆ ನೀರು ತುಂಬಿಸುವ ಉದ್ದೇಶದಿಂದ ಕಾಲುವೆಗಳಿಗೆ ಹರಿಸುವ ನೀರನ್ನು ಅಕ್ರಮವಾಗಿ ಕೃಷಿ ಚಟುವಟಿಕೆಗೆ ಬಳಸದಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Padubidri: ಅಪರಿಚಿತ ವಾಹನ ಢಿಕ್ಕಿ; ಪಾದಚಾರಿಗೆ ತೀವ್ರ ಗಾಯ
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.