ಸಮಾನತೆ ಸಾರಿದವರು ಹೇಮರಡ್ಡಿ ಮಲ್ಲಮ್ಮ
Team Udayavani, May 11, 2020, 11:54 AM IST
ವಿಜಯಪುರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೇಮರಡ್ಡಿ ಮಲ್ಲಮ್ಮ ಜಯಂತಿ ಸರಳವಾಗಿ ಆಚರಿಸಲಾಯಿತು.
ವಿಜಯಪುರ: ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಕಿತ್ತೂರು ಚೆನ್ನಮ್ಮ, ಅಕ್ಕಮಹಾದೇವಿ ಅವರಂತೆ ಸಮಾಜದ ಸುಧಾರಣೆಗೆ ತಮ್ಮನ್ನು ಸಮರ್ಪಿಸಿಕೊಂಡ ಶ್ರೇಷ್ಠ ವೀರಶರಣೆಯಾಗಿ ಕೀರ್ತಿ ಗಳಿಸಿದ್ದರು.
ಅವರು ಸರ್ವರನ್ನು ಸಮನಾಗಿ ಕಂಡಿದ್ದರು ಎಂದು ಜಿಲ್ಲಾಧಿಕಾರಿ ವೈ. ಎಸ್. ಪಾಟೀಲ ಹೇಳಿದರು. ರವಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಸರಳ ರೀತಿಯಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ವೇಮನ ಎಂಬ ಸಾಮಾನ್ಯ ವ್ಯಕ್ತಿಯನ್ನು ತತ್ವಜ್ಞಾನಿಯಾಗಿ ಪರಿವರ್ತಿಸಿದ ಕೀರ್ತಿ ಹೇಮರಡ್ಡಿ ಮಲ್ಲಮ್ಮ ಅವರಿಗೆ ಸಲ್ಲುತ್ತದೆ ಎಂದರು.
ರಡ್ಡಿ ಸಮಾಜ ಸಂಘದ ಅಧ್ಯಕ್ಷ ಸುರೇಶ ದೇಸಾಯಿ ಮಾತನಾಡಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಶ್ರೀಶೈಲ ಮಲ್ಲಿಕಾರ್ಜುನ ದೇವರನ್ನು ಆರಾಧಿಸಿ, ಧ್ಯಾನಿಸಿ ಸದ್ಗತಿ ಹೊಂದಿದಳು. ತನ್ನ ರಡ್ಡಿ ಸಮುದಾಯಕ್ಕೆ ಸಂಪತ್ತಿನಿಂದ ಸೊಕ್ಕದೇ ದಾನ ಗುಣ ಬೆಳೆಸಿಕೊಳ್ಳುವ ಸಂದೇಶ ನೀಡಿದ್ದಾರೆ. ಹೇಮರಡ್ಡಿ ಮಲ್ಲಮ್ಮ ಸಾರಿದ ಸಂದೇಶದಂತೆ ನಮ್ಮ ಸಮುದಾಯ ಸಮಾಜಕ್ಕೆ ತನ್ನನ್ನು ಸಮರ್ಪಿಸಿಕೊಂಡಿದೆ ಎಂದರು.
ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಜಿಪಂ ಸಿಇಒ ಗೋವಿಂದರೆಡ್ಡಿ, ಎಸ್ಪಿ ಅನುಪಮ್ ಅಗರವಾಲ್, ಎಡಿಸಿ ಡಾ| ಔದ್ರಾಮ್, ತಹಶೀಲ್ದಾರ್ ಮೋಹನಕುಮಾರಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತ್ದಾರ, ಡಾ| ಕರಿಗೌಡರ, ಡಾ| ಕಂಠೀರವ ಕುಲ್ಲೊಳ್ಳಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.