ಶರಣರ ವಚನಗಳು ಮಾರ್ಗದರ್ಶಿ

ಸಿದ್ಧರಾಮೇಶ್ವ‌ರ ಜಯಂತಿ ಶರಣರ ಮೂಲ ಆಶಯ ಈಡೇರಿಸಲು ಪಣ ತೊಡಿ

Team Udayavani, Jan 15, 2020, 5:20 PM IST

15-January-24

ವಿಜಯಪುರ: ಸಮಾಜಕ್ಕೆ ಬೆಳಕನ್ನು ನೀಡಿದ ಶರಣರ-ಸಂತರ ಹಾಗೂ ಮಹಾಂತರ ಬಗ್ಗೆ ಮಾಹಿತಿ ನೀಡುವುದಕ್ಕೆ ಸರಕಾರ ಜಯಂತಿಗಳನ್ನು ಆಚರಿಸುತ್ತದೆ. ಸಾವಿರಾರು ವಚನಗಳನ್ನು ಬರೆದಿರುವ ಶಿವಯೋಗಿ ಸಿದ್ಧರಾಮೇಶ್ವರ ವಚನಗಳ ತತ್ವಸಾರವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಜೀವನದಲ್ಲಿ ಬೆಳಕನ್ನು ಕಾಣಬೇಕು ಎಂದು ಜಿಲ್ಲಾ ಧಿಕಾರಿ ವೈ.ಎಸ್‌. ಪಾಟೀಲ ಸಲಹೆ ನೀಡಿದರು.

ಮಂಗಳವಾರ ನಗರದ ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

12ನೇ ಶತಮಾನದ ಶರಣಲ್ಲಿ ಬಸವೇಶ್ವರರೊಂದಿಗೆ ಇದ್ದ ಸಿದ್ಧರಾಮೇಶ್ವರ ಶರಣರು, ಅನುಭವ ಮಂಟಪದ ಪ್ರಮುಖರಾಗಿದ್ದರು. ಬಸವೇಶ್ವರರು ಜನ್ಮ ತಳೆದಿರುವ ಈ ನೆಲದಲ್ಲಿ ಬಸವೇಶ್ವರ, ಸಿದ್ಧರಾಮೇಶ್ವರರು ಸೇರಿದಂತೆ ಬಸವಾದಿ ಶರಣರ ಮೂಲ ಆಶಯ ಈಡೇರಿಸಲು ಪ್ರತಿ ವಿದ್ಯಾರ್ಥಿಗಳು ಪಣ ತೊಡಬೇಕು. ಸಾಮಾಜಿಕ ಕ್ರಾಂತಿ ಉಂಟು ಮಾಡಿದ ಶರಣರ ವಚನಗಳು, ಜೀವನ ವಿಧಾನಗಳ ಮೌಲ್ಯಗಳ ಕುರಿತು ಇಂದಿನ ಮಕ್ಕಳು ಅಧ್ಯಯನ ನಡೆಸಿ ಮಾದರಿ ಜೀವನ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕರ್ನಾಟಕ ಮಾತ್ರವಲ್ಲ ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ ಸೇರಿದಂತೆ ದೇಶದ ವಿವಿಧೆಡೆ ಸಿದ್ದರಾಮೇಶ್ವರರ 174 ಕಡೆಗಳಲ್ಲಿ ದೇವಸ್ಥಾನಗಳಿವೆ. ಸಂಕ್ರಮಣದ ಸಂದರ್ಭದಲ್ಲಿ ಸಿದ್ಧರಾಮೇಶ್ವರ ಜಾತ್ರೆಯ ವೈಭವದ ಹಿನ್ನೆಲೆಯಲ್ಲಿ ದೇಶದ ಜನರು ವಿಜಯಪುರ ನಗರದ ಕಡೆಗೆ ಚಿತ್ತ ನೆಡುವಂತೆ ಮಾಡಿರುವುದು ಜಾತ್ರೆಯ ವಿಶೇಷ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳು ಜೀವನದಲ್ಲಿಶಿಸ್ತು, ಸಮಯಪ್ರಜ್ಞೆ, ಯೋಜನಾಬದ್ಧ ಜೀವನ ಶೈಲಿ ಹಾಗೂ ಪರಿಶ್ರಮದ ಓದಿನಿಂದ ಮಾತ್ರ ಉತ್ತಮ ಹುದ್ದೆ ಪಡೆದು, ಹೆತ್ತವರ ಆಶಯ ಈಡೇರಿಸಲು ಸಾಧ್ಯ. ನಮ್ಮ ನೆಲದ ಶರಣರ ಚರಿತ್ರೆ ಓದಿ, ಜೀವನದಲ್ಲಿ ಅಳವಡಿಸಿಕೊಂಡಲ್ಲಿ, ನಿಮ್ಮ ಆದರ್ಶ ಮೌಲ್ಯಗಳಲ್ಲಿ ಹಿರಿಮೆ ಪಡೆಯಲು ಸಾಧ್ಯವಿದೆ ಎಂದರು.

ವಚನ ಪಿತಾಮಹ ಡಾ| ಫ.ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಕಾರ್ಯದರ್ಶಿ ಡಾ| ಎಂ.ಎಸ್‌. ಮದಭಾವಿ ಮಾತನಾಡಿ, 12ನೇ ಶತಮಾನದ ವಚನಕಾರರಲ್ಲಿ ಬಸವೇಶ್ವರರೊಂದಿಗೆ ಪ್ರಮುಖವಾಗಿ ಗುರುತಿಸಿಕೊಂಡಿದ್ದ ಅನುಭವ ಮಂಟಪದ ಪ್ರಮುಖರು ಹಾಗೂ ಶ್ರೇಷ್ಠ ವಚನಕಾರರಲ್ಲಿ ಸಿದ್ಧರಾಮೇಶ್ವರರೂ ಅಗ್ರಗಣ್ಯರು.

ಜ್ಞಾನ, ಯೋಗ ಮತ್ತು ಸಮಾಜದಲ್ಲಿರುವ ಜನರ ಕುರಿತು ವಚನಗಳನ್ನು ರಚಿಸುವ ಮೂಲಕ ಸಮಾಜಕ್ಕೆ ಸಾರ್ವಕಾಲಿಕ ಆದರ್ಶ ಸಂದೇಶ ನೀಡಿದ್ದಾರೆ ಎಂದು ಬಣ್ಣಿಸಿದರು. ಸೊಲ್ಲಾಪುರದ ವರ್ತಕರು ವ್ಯಾಪಾರಕ್ಕೆಂದು ವಿಜಯಪುರಕ್ಕೆ ಬಂದಾಗ ಕರ್ಮಯೋಗಿ, ಶಿವಯೋಗಿ ಸಿದ್ಧರಾಮೇಶ್ವರ ಪ್ರತಿರೂಪವನ್ನು ನಗರದಲ್ಲಿ ಪ್ರತಿಷ್ಠಾಪಿಸಿ, ನಿತ್ಯ ಅವರಿಗೆ ಕೈ ಮುಗಿದು ವ್ಯಾಪಾರವನ್ನು ಆರಂಭಿಸಿದರು. ಅಂದಿನಿಂದ ಆರಂಭಗೊಂಡಿರುವ ಸಿದ್ಧೇಶ್ವರರ ದೇವಸ್ಥಾನದಲ್ಲಿನ ನಿತ್ಯ ಪೂಜೆ, ಹಬ್ಬಗಳಲ್ಲಿ ವಿಶೇಷ ಪೂಜೆ, ಸಂಕ್ರಾಂತಿ ಸಂದರ್ಭದಲ್ಲಿ ಜಾತ್ರೆ ಇಂದಿಗೂ ಮುಂದುವರಿದಿದೆ ಎಂದರು.

ವಚನಕಾರರಲ್ಲಿ ಪ್ರಮುಖರಾಗಿರುವ ಸಿದ್ಧರಾಮೇಶ್ವರ ಶರಣರು 68 ಸಾವಿರ ವಚನಗಳನ್ನು ರಚಿಸಿದ್ದು, ಕಲ್ಯಾಣ ಕ್ರಾಂತಿ ಸಂದರ್ಭದಲ್ಲಿ ಶರಣರ ವಚನಗಳ ಕಟ್ಟುಗಳನ್ನು ನಾಶ ಮಾಡಿದಾಗ ಸಿದ್ಧರಾಮೇಶ್ವರರ ವಚನಗಳೂ ನಾಶವಾಗಿದೆ. ಇದರ ಹೊರತಾಗಿಯೂ ಈವರೆಗೆ 1679 ವಚನಗಳು ಮಾತ್ರ ದೊರಕಿವೆ ಎಂದು ವಿವರಿಸಿದರು.

ಜಿಪಂ ಮುಖ್ಯ ಯೋಜನಾ ಧಿಕಾರಿ ನಿಂಗಪ್ಪ ಗೋಠೆ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌ .ಜಿ. ಪೂಜೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಸನ್ನಕುಮಾರ, ರಾಮು ಹೊಸಪೇಟೆ, ನಾಗಪ್ಪ ವಡ್ಡರ, ಪರಶುರಾಮ ಗುಂಜಲಕರ್‌, ಜ್ಞಾನೇಶ್ವರ ಹಾಲಕುಂಠೆ, ವಿ.ಸಿ. ನಾಗಠಾಣ ಇದ್ದರು. ದೂರದರ್ಶನ-ಆಕಾಶವಾಣಿ ಕಲಾವಿದೆ ಅಶ್ವಿ‌ನಿ ಹಿರೇಮಠ ಸಿದ್ಧರಾಮೇಶ್ವರರ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಾಕ್ಷಿ ಹಿರೇಮಠ ಸಂಗಡಿಗರು ನಾಡಗೀತೆ ಹಾಡಿದರು. ಕನ್ನಡ ಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋತದಾರ ಸ್ವಾಗತಿಸಿದರು. ಎಚ್‌.ಎ. ಮಮದಾಪುರ ನಿರೂಪಿಸಿದರು. ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ಉಪ ನಿರ್ದೇಶಕ ಎಸ್‌.ಜಿ. ಲೋಣಿ ವಂದಿಸಿದರು.

ಟಾಪ್ ನ್ಯೂಸ್

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.