Vijayapura; ಹಿಟ್ನಳ್ಳಿ ಕೃಷಿ ಕಾಲೇಜಿನ ಆವರಣದಲ್ಲಿ 21 ರಿಂದ ಮೂರು ದಿನ ಕೃಷಿಮೇಳ
Team Udayavani, Jan 18, 2024, 1:18 PM IST
ವಿಜಯಪುರ: ವಿಜಯಪುರ ನಗರದ ಹೊರ ವಲಯದಲ್ಲಿರುವ ಹಿಟ್ನಳ್ಳಿ ಕೃಷಿ ಕಾಲೇಜಿನ ಆವರಣದಲ್ಲಿ ಜ.21ರಿಂದ ಮೂರು ದಿನಗಳ ಕಾಲ ಕೃಷಿಮೇಳ ಆಯೋಜಿಸಲಾಗಿದೆ.
ಗುರುವಾರ ಹಿಟ್ನಳ್ಳಿ ಕೃಷಿ ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೃಷಿಮೇಳದ ವಿವರ ನೀಡಿದ ಕೃಷಿ ಕಾಲೇಜಿನ ಡೀನ್ ಹಾಗೂ ಕೃಷಿಮೇಳದ ಅಧ್ಯಕ್ಷ ಡಾ.ಎ.ಭೀಮಪ್ಪ, ಧಾರವಾಡ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ಜ.21 ರಿಂದ 23 ರವರೆಗೆ ವಿಜಯಪುರದ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ ಘೋಷವಾಕ್ಯದೊಂದಿಗೆ ಕೃಷಿ ಮೇಳ-24 ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಜ.21 ರಂದು ಬೆಳಿಗ್ಗೆ 11ಕ್ಕೆ ಕೃಷಿ ಸಚಿವ ಚಲುವರಾಯಸ್ವಾಮಿ ಕೃಷಿ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಕೈಗಾರಿಕೆ ಸಚಿವ ಡಾ.ಎಂ.ಬಿ. ಪಾಟೀಲ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಕೃಷಿ ಪ್ರಕಟಣೆ ಬಿಡುಗಡೆ ಮಾಡಲಿದ್ದಾರೆ. ನಾಗಠಾಣ ಶಾಸಕ ವಿಠ್ಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಜಿಲ್ಲೆಯ ಶಾಸಕರಾದ ಯಶವಂತರಾಯಗೌಡ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಸಿ.ಎಸ್.ನಾಡಗೌಡ, ರಾಜುಗೌಡ ಪಾಟೀಲ, ಆಶೋಕ ಮನಗೂಳಿ, ಹಿಟ್ಟಿನಹಳ್ಳಿ ಗ್ರಾ.ಪಂ ಅಧ್ಯಕ್ಷ ರವಿಕುಮಾರ ಕಡಿಮನಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಜ.23 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ, ನಾಗಠಾಣ ಶಾಸಕ ವಿಠ್ಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಪಿ.ಎಲ್.ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಜ. 21 ರಂದು ಮಧ್ಯಾಹ್ನ 2 ಗಂಟೆಯಿಂದ ಹವಾಮಾನ ವೈಪರಿತ್ಯದ ಪರಿಣಾಮಗಳು, ನಿರ್ವಹಣೆ, ಬರ ನಿರ್ವಹಣೆಗಾಗಿ ಕೃಷಿ ತಂತ್ರಜ್ಞಾನಗಳು, ರೈತರಿಂದ ರೈತರಿಗೆ ಕಾರ್ಯಕ್ರಮ-ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ.
ಜ. 22 ರಂದು ಬೆ.11 ರಿಂದ ಮ. 1 ಗಂಟೆವರೆಗೆ ಸಾವಯವ, ನೈಸರ್ಗಿಕ ಕೃಷಿ, ರೈತರಿಂದ ರೈತರಿಗೆ ಕಾರ್ಯಕ್ರಮ- ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೊಳ್ಳುವ ಕಾರ್ಯಕ್ರಮ ಇರಲಿದೆ ಎಂದರು.
ಜ. 23 ರಂದು ಬೆಳಿಗ್ಗೆ 11 ರಿಂದ ಮ. 1 ಗಂಟೆವರೆಗೆ ಸುಸ್ಥಿರ ಕೃಷಿಗಾಗಿ ಉಪ ಕಸುಬುಗಳು, -ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
Vijayapura: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಿಸುವುದು ನಮ್ಮ ನಿಲುವು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಮದುವೆಯ ಮೊದಲ ರಾತ್ರಿಯೇ ಪತಿಗೆ ಹಾಲಿನಲ್ಲಿ ಮತ್ತು ಬರುವ ಔಷಧಿ ಹಾಕಿ ನಗನಗದು ದೋಚಿದ ಪತ್ನಿ
Sandalwood: ʼನೀ ನಂಗೆ ಅಲ್ಲವಾ’ ಚಿತ್ರಕ್ಕೆ ಮುರಳಿ ಸಾಥ್
Leh; ಐಸ್ ಹಾಕಿ ಲೀಗ್ ದ್ವಿತೀಯ ಆವೃತ್ತಿಯ ಟ್ರೋಫಿ- ಜೆರ್ಸಿ ಅನಾವರಣ
NZvsENG: 147 ವರ್ಷಗಳಲ್ಲೇ ಮೊದಲ ಬಾರಿ..; ಹೊಸ ದಾಖಲೆ ಬರೆದ ಕೇನ್ ವಿಲಿಯಮ್ಸನ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.