Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
ಕದ್ದ ಚಿನ್ನ ಮಹಾರಾಷ್ಟ್ರದ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟಿದ್ದ ಖದೀಮರು
Team Udayavani, Oct 5, 2024, 8:56 PM IST
ವಿಜಯಪುರ: ಇಂಡಿ ತಾಲೂಕಿನ ಹೊರ್ತಿ ಠಾಣಾ ವ್ಯಾಪ್ತಿಯ ಏಳು ಹಾಗೂ ದೇವರ ಹಿಪ್ಪರಗಿ ಠಾಣಾ ವ್ಯಾಪ್ತಿಯ ಒಂದು ಪ್ರಕರಣ ಸೇರಿ ಒಟ್ಟು ಎಂಟು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಬೇಧಿಸಿದ್ದಾರೆ. ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ, 184 ಗ್ರಾಂ ಚಿನ್ನ ಮತ್ತು 80 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಿದ್ದಾರೆ. ಇನ್ನುಳಿದ ಐವರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಈ ಖದೀಮರ ಬಂಧನಕ್ಕೂ ಪೊಲೀಸರು ಬಲೆಬೀಸಿದ್ದಾರೆ.
ಕಳೆದ ಒಂದು ವರ್ಷದಲ್ಲಿ ಇಂಡಿ ತಾಲೂಕಿನ ಹೊರ್ತಿ, ಅಗಸನಾಳ, ಹಳಗುಣಕಿ, ಇಂಚಗೇರಿ ಗ್ರಾಮಗಳಲ್ಲಿ ನಡೆದ 7 ಮನೆ ಕಳ್ಳತನ ಹಾಗೂ 1 ಸುಲಿಗೆ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸ್ ತಂಡವು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಪಾಂಡುಜರಿ ತಾಂಡಾದ ವಿಕಿ ಅಲಿಯಾಸ್ ವಿಕ್ಯಾ ಮತ್ತು ಸಂಜು ಪವಾರ ಎಂಬುವರನ್ನು ಬಂಧಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಶನಿವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಇಬ್ಬರು ಖದೀಮರು ತಮ್ಮ ಐವರು ಸಹಚರರೊಂದಿಗೆ ಸೇರಿಕೊಂಡು ಮಹಾರಾಷ್ಟ್ರದಿಂದ ಜಿಲ್ಲೆಗೆ ಬರುತ್ತಿದ್ದರು. ಕಳ್ಳತನ ಮತ್ತು ಸುಲಿಗೆ ಕೃತ್ಯದಲ್ಲಿ ಭಾಗವಹಿಸುತ್ತಿದ್ದರು. ಈ ಬಗ್ಗೆ ಸಂಶಯದ ಮೇಲೆ ಜತ್ತ ತಾಲೂಕಿನ ಸಂಖ ಹತ್ತಿರ ಸೆಪ್ಟೆಂಬರ್ 17ರಂದು ಮೊದಲ ಆರೋಪಿಯನ್ನು ಹಾಗೂ ಎರಡನೇ ಆರೋಪಿಯನ್ನು ಸೋಲಾಪೂರದ ಸೋರೆಗಾಂವ ಪೊಲೀಸ್ ಚೆಕ್ ಪೋಸ್ಟ್ ಬಳಿ ಸೆಪ್ಟೆಂಬರ್ 22ರಂದು ವಶಕ್ಕೆ ಪಡೆಯಲಾಗಿತ್ತು. ಬಳಿಕ ವಿಚಾರಣೆಗೆ ಒಳಪಡಿಸಿದಾಗ ಆರೋಪಿತರು ತಮ್ಮ ಕೃತ್ಯವನ್ನು ಬಾಯ್ಬಿಟ್ಟಿದ್ದರು ಎಂದು ಮಾಹಿತಿ ನೀಡಿದರು.
ಅಂತಾರಾಜ್ಯ ಕಳ್ಳರಾಗಿದ್ದ ಇವರನ್ನು ಪತ್ತೆ ಹಚ್ಚುವುದು ಸವಾಲಿನ ಕೆಲಸವಾಗಿತ್ತು. ನೆರೆ ರಾಜ್ಯದ ಪೊಲೀಸರ ನೆರವು ಪಡೆದು ಕದ್ದ ಚಿನ್ನಾಭರಣ ಹಾಗೂ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 8 ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿತರಿಂದ 9.55 ಲಕ್ಷ ರೂ. ಮೌಲ್ಯದ 184.57 ಗ್ರಾಂ ತೂಕದ ಬಂಗಾರ ಮತ್ತು 80 ಗ್ರಾಂ ಬೆಳ್ಳಿ ಆಭರಣಗಳು ಹಾಗೂ ಕೃತ್ಯಕ್ಕೆ ಬಳಸಿದ 5 ಲಕ್ಷ ರೂ. ಮೌಲ್ಯದ ಜೈಲೋ ಕಾರನ್ನು ಜಪ್ತಿ ಮಾಡಲಾಗಿದೆ. ಈ ಪೈಕಿ 50 ಗ್ರಾಂ ಚಿನ್ನಾಭರಣವನ್ನು ಖದೀಮವರು ಮಹಾರಾಷ್ಟ್ರದ ಬ್ಯಾಂಕ್‌ವೊಂದರಲ್ಲಿ ಠೇವಣಿ ಇರಿಸಿದ್ದರು. ಇದನ್ನು ಜಪ್ತಿ ಮಾಡುವಲ್ಲಿ ಬ್ಯಾಂಕ್ ಅಧಿಕಾರಿಗಳು ಸಹ ಸಹಕಾರ ನೀಡಿದ್ದಾರೆ. ತಲೆ ಮರೆಸಿಕೊಂಡಿರುವ ಇತರ ಐವರ ಬಂಧನಕ್ಕೂ ಕ್ರಮ ವಹಿಸಲಾಗಿದೆ ಎಂದು ಎಸ್‌ಪಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.