ಜಿಪಂ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಕಾಂಗ್ರೆಸ್ ಅಭ್ಯರ್ಥಿ
Team Udayavani, Jun 26, 2020, 5:30 PM IST
ವಿಜಯಪುರ: ಇಲ್ಲಿನ ಜಿಪಂ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸುಜಾತಾ ಕಳ್ಳಿಮನಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗುರುವಾರ ಸಂಜೆ ಪಕ್ಷದ ಶಾಸಕರ ಸಮ್ಮುಖದಲ್ಲಿ ನಡೆದ ಜಿಪಂ ಸದಸ್ಯರ ಸಭೆಯಲ್ಲಿ ಒಮ್ಮತದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ರಾಜು ಆಲಗೂರ ಅಧ್ಯಕ್ಷತೆಯಲ್ಲಿ ನಡೆದ ಜಿಪಂ ಅಧ್ಯಕ್ಷ ಸ್ಥಾನದ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಮಾಜಿ ಶಾಸಕರಾದ ಸಿ.ಎಸ್. ನಾಡಗೌಡ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು. ಸಭೆಯಲ್ಲಿ ಸುಜಾತಾ ಕಳ್ಳಿಮನಿ ಒಬ್ಬರ ಹೆಸರು ಮಾತ್ರ ಪ್ರಸ್ತಾಪವಾಯಿತು.
ಸುಜಾತಾ ಹೆಸರು ಪ್ರಸ್ತಾಪಿಸುತ್ತಲೇ ಕಾಂಗ್ರೆಸ್‌ನ 18 ಸದಸ್ಯರಲ್ಲಿ ಸಭೆಯಲ್ಲಿ ಪಾಲ್ಗೊಂಡಿದ್ದ 17 ಜನರು ಬೆಂಬಲ ವ್ಯಕ್ತಪಡಿಸಿದರು. ಸಭೆಗೆ ಗೈರಾದ ಜಿಪಂ ಸದಸ್ಯ ಆಳಿಂಗರಾಯ ಅವರು ಅನಾರೋಗ್ಯದ ಕಾರಣ ನೀಡಿದ್ದರು. ಆದರೆ ಆಳಿಂಗರಾಯ ಇವರನ್ನು ಸಂಪರ್ಕಿಸಿದ ಪ್ರಮುಖರು, ಪಕ್ಷದ ಪ್ರಮುಖರನ್ನು ಸಂಪರ್ಕಿಸುವಂತೆ ಸೂಚನೆ ನೀಡಿದರು.
ಸಭೆಗೆ ಗೈರು ಹಾಜರಾದರೂ ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಹೇಳಿದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಸದರಿ ಸಭೆಯಲ್ಲಿ ಕಾಂಗ್ರೆಸ್ ಮೂವರು ಶಾಸಕರು ಹಾಗೂ ಮಾಜಿ ಶಾಸಕರು ಮ್ಯಾಜಿಕ್ ಸಂಖ್ಯೆ ಪಡೆಯಲು 4 ಸದಸ್ಯರ ಕೊರತೆ ಇದ್ದು, ಜೆಡಿಎಸ್‌ನ ಮೂವರು ಸದಸ್ಯರ ಹಾಗೂ ಓರ್ವ ಪಕ್ಷೇತರ ಬೆಂಬಲ ಪಡೆಯಲು ಮನವೊಲಿಸುವ ಕುರಿತು ಗಂಭೀರ ಚರ್ಚೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.