Vijayapura; ಮಹಿಳಾ ವಿವಿ ಲೈಂಗಿಕ ಹಗರಣ:ರಾಜ್ಯಪಾಲರಿಗೆ ಮುತ್ತಿಗೆ ಎಚ್ಚರಿಕೆ

ಕರವೇ ಪ್ರತಿಭಟನೆ: ಆರೋಪಿ ಪ್ರೊ.ಮಲ್ಲಿಕಾರ್ಜುನ ವಿರುದ್ಧ ಕ್ರಮಕ್ಕೆ ಆಗ್ರಹ

Team Udayavani, Mar 10, 2024, 5:52 PM IST

1-weqeqe

ವಿಜಯಪುರ : ಪಿಎಚ್.ಡಿ.ಸಂಶೋಧನಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊಫೇಸರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಕರವೇ ನೇತೃತ್ವದಲ್ಲಿ ಮಹಿಳೆಯರು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಿದರು. ಆರೋಪಿ ವಿರುದ್ಧತ್ವರಿತವಾಗಿ ಶಿಸ್ತು ಕ್ರಮ ಕೈಗೊಳ್ಳದಿದ್ದರೆ ರಾಜ್ಯಪಾಲರಿಗೆ ಮುತ್ತಿಗೆಹಾಕುವ ಎಚ್ಚರಿಕೆ ನೀಡಿದರು.

ಭಾನುವಾರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎದುರು ಕರವೇ ಜಿಲ್ಲಾಧ್ಯಕ್ಷ ಮೊಹ್ಮದ್ ಇಸಾಕ್ ಮುಲ್ಲಾ ನೇತೃತ್ವದಲ್ಲಿ  ಪ್ರತಿಭಟನೆ ನಡೆಸಿದ ಮಹಿಳೆಯರು ಸೇರಿದಂತೆ ಸಂಘಟನೆಯ ಕಾರ್ಯಕರ್ತರು, ನಂತರ ಸ್ಥಳಕ್ಕೆ ಆಗಮಿಸಿದ ಕುಲಪತಿ ಪ್ರೊ.ತುಳಸಿಮಾಲಾ ಅವರಿಗೆ ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಕುಲಪತಿಗಳು ವಿವಿಯಲ್ಲಿ ಇಂತಹ ಒಂದು ಘಟನೆ ಕೇಳಿ ಬಂದಿರುವುದು ನಿಜಕ್ಕೂ ಕಳವಳಕಾರಿ ಸಂಗತಿ. ಈಗಾಗಲೇ ಆಂತರಿಕ ಸಮಿತಿಗೆ ಶಿಫಾರಸ್ಸು ಮಾಡಲಾಗಿದ್ದು ಈಗಾಗಲೇ  ವಿಚಾರಣೆ ನಡೆದಿದ್ದು ಇನ್ನೆರೆಡು ಸುತ್ತಿನ ವಿಚಾರಣೆ ಬಳಿಕ ಮೇಲಾಧಿಕಾರಿಗಳ ಆದೇಶದಂತೆ ಕ್ರಮ ಕೈಗೊಳ್ಳಲಾಗುವ ಭರವಸೆ ನೀಡಿದರು.

ಘಟಿಕೋತ್ಸವ ಪ್ರಯುಕ್ತ ನಮ್ಮ ನಿಮ್ಮೆಲ್ಲರ ಮಕ್ಕಳು ಬಹಳ ಖುಷಿಯಿಂದ ಅವರ ಸಾಧನೆಗೆ ಹಲವು ಪದಕಗಳನ್ನು ಪಡೆದಿರುವ ಮಕ್ಕಳ ಸಾಧನೆಯ ವೇದಿಕೆ ಸಿದ್ಧವಾಗಿದ್ದು, ಸದರಿ ಕಾರ್ಯಕ್ರಮಕ್ಕೆ ಯಾವುದೇ ಅಡ್ಡಿ ಆತಂಕಗಳು ಇಲ್ಲದಂತೆ ಕಾರ್ಯಕ್ರಮ ನಡೆಸಿಕೊಡಲು ಸಹಕರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಅನುರಾಧಾ ಕಲಾಲ, ಗೌರವಾಧ್ಯಕ್ಷೆ ಮಂಜುಳಾ ಅಂಗಡಿ, ಕಳೆದೆರೆಡು ವಾರಗಳ ಹಿಂದೆ ಪ್ರತಿಷ್ಠಿತ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ. ಪದವಿಗಾಗಿ ಸಂಶೋಧನೆ ನಡೆಸುತ್ತಿರುವ ವಿದ್ಯಾರ್ಥಿನಿಯರಿಗೆ ಮಲ್ಲಿಕಾರ್ಜುನ ಎನ್.ಎಲ್.ಎಂಬ ಪ್ರೊಫೇಸರ್ ಲೈಂಗಿಕ ಕಿರುಕುಳ ನೀಡಿರುವ ಅಮಾನವೀಯ ಹಾಗೂ ಅಸಹ್ಯಕರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕಿಡಿಕಾರಿದರು.

ಸದರಿ ಲೈಂಗಿಕ  ಕಿರುಕುಳದ ಆರೋಪ ಹೊತ್ತಿರುವ ವಿಶ್ವವಿದ್ಯಾಲಯದ ಮ್ಯಾನೇಜ್ ಮೆಂಟ್ ವಿಭಾಗದ ಮುಖ್ಯಸ್ಥ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಕರವೇ ಜಿಲ್ಲಾಧ್ಯಕ್ಷ ಮೊಹ್ಮದಿಸಾಕ್ ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿದ್ದು, ಸದರಿ ವಿದ್ಯಾನಿಲಯದಲ್ಲಿ ಬಡ, ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯಲು ಹೆಚ್ಚು ಅನುಕೂಲವಾಗಿದೆ.ಇಂಥ ಘಟನೆಗಳಿಂದ ವಿದ್ಯಾರ್ಥಿನಿಯರ ಅಸುರಕ್ಷತೆ ಹೆಚ್ಚಾಗಿ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಹರಿಹಾಯ್ದರು.
ಶೈಕ್ಷಣಿಕವಾಗಿ ಹಿಂದುಳಿದಿರುವೀ ಭಾಗದಲ್ಲಿ ಮಹಿಳೆಯರನ್ನು ಉನ್ನತ ಶಿಕ್ಷಣಪಡೆಯುವುದಕ್ಕೆಹೆಚ್ಚಿನ ಅವಕಾಶ ನೀಡುವ ಹಾಗೂ ಪ್ರೇರೇಪಿಸುವ ಉದ್ದೇಶದಿಂದ ಸರ್ಕಾರ ಬರಗಾಲ ಪೀಡಿತ ವಿಜಯಪುರ ಜಿಲ್ಲೆಯಲ್ಲಿ ರಾಜ್ಯದ ಎಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದೆ. ಇಂಥ ಘಟನೆಗಳಿಂದ ವಿಶ್ವವಿದ್ಯಾಲಯಕ್ಕೆ ಕಪ್ಪುಚುಕ್ಕೆಯಾಗಿ ಮಹಿಳಾ ಉನ್ನತ ಶಿಕ್ಷಣ ಪಡೆಯುವ ಮಕ್ಕಳಿಗೆ ಹಿನ್ನಡೆ ಆಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಸದರಿ ವಿಶ್ವವಿದ್ಯಾನಿಲಯದಲ್ಲಿ ಸಾವಿರಾರು ವಿದ್ಯಾರ್ಥಿನಿಯರು ಹಲವು ಸಂಕಟ ತಾಪತ್ರಯಗಳ ಮಧ್ಯೆ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಸಾಕಷ್ಟು ವಿದ್ಯಾರ್ಥಿನಿಯರು ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇಂಥ ಸಂದರ್ಭದಲ್ಲಿ ಸ್ವಯಂ ಓರ್ವ ಪ್ರೊಫೇಸರ್ ಮೃಗೀಯ ವರ್ತನೆ  ತೋರಿರುವುದು  ದುರಂತದ ಸಂಗತಿ ಎಂದು ಹರಿಹಾಯ್ದರು.

ಸಂತ್ರಸ್ಥ ವಿದ್ಯಾರ್ಥಿನಿ ಕುಲಪತಿಗಳು, ಕುಲಸಚಿವರಿಗೆ ಲಿಖಿತ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಾರಣ ವಿದ್ಯಾರ್ಥಿನಿಯ ಮೇಲೆ ಪ್ರೊಫೇಸರ್ ಲೈಂಗಿಕ ಕಿರುಕುಳ ಆರೋಪ ವನ್ನು ಗಂಭೀರವಾಗಿ ಪರಿಗಣಿಸಿ, ಶಿಸ್ತು ಕ್ರಮ ಜರುಗಿಸಬೇಕಿದ್ದರೂ,ಅಂಥ ಕ್ರಮ ಕೈಗೊಳ್ಳುವಲ್ಲಿ  ವಿಶ್ವವಿದ್ಯಾಲಯ ವಿಫಲವಾಗಿದೆ ಎಂದು ಹರಿಹಾಯ್ದರು.

ಆರೋಪಿ ಪ್ರೊ.ಮಲ್ಲಿಕಾರ್ಜುನ ವಿರುದ್ಧ ತುರ್ತು  ಕ್ರಮಕೈಗೊಳ್ಳದಿದ್ದರೆ ಘಟಿಕೋತ್ಸವಕ್ಕೆ ಆಗಮಿಸುತ್ತಿರುವ ರಾಜ್ಯಪಾಲರಿಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದರು. ಕರವೇ ಮಹಿಳಾ  ಘಟಕದ  ಕಸ್ತೂರಿ ಪೂಜಾರಿ, ನೀಲಮ್ಮ ಕಾಂಬಳೆ, ಸವಿತಾ ಖಂಡೇಕರ, ನೀಲಾಂಬಿಕೆ ಬಿರಾದಾರ, ಸುಜಾತಾ ಜಾಧವ, ರೇಣುಕಾ ಅಗಸರ, ನೀಲಾ ಕಾಳೆ, ಸಾಗರ ಜಾಧವ, ಕೃಷ್ಣಾ ಚವ್ಹಾಣ, ಜಯಶ್ರೀ ಕಾಶೆಟ್ಟಿ, ಸಂಗೀತಾ ಪಾಟೀಲ, ರೇಣುಕಾ ಕಲಾಲ, ಕಸ್ತೂರಿ ರಾಯಚೂರು, ಮಂಜುಳಾ ಜಾಧವ, ಚಂದ್ರವ್ವ ಕಾಂಬಳೆ, ಸುರೇಶ ಬಿಜಾಪುರ, ಮಹಾದೇವ ರಾವಜಿ, ಫಯಾಜ ಕಲಾದಗಿ, ವಿನೋದ ದಳವಾಯಿ, ಮನೋಹರ ತಾಜವ, ಆಸೀಪ್‍ಪೀರ್ ವಾಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.