BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Team Udayavani, Jan 11, 2025, 6:29 PM IST
ವಿಜಯಪುರ: ಸಚಿವ ಪ್ರಿಯಾಂಕ್ ಖರ್ಗೆ ಅವರ ಧಮ್ಕಿಯಿಂದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಪಕ್ಷದ ಹೋರಾಟದಿಂದ ದೂರ ಉಳಿದಿದ್ದರು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಲಬುರಗಿಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಹಿತೈಷಿಗಳೇ ದೊಡ್ಡ ಮಟ್ಟದ ಹೋರಾಟ ಆಯೋಜನೆ ಮಾಡಿದ್ದರು. ಆದರೂ, ವಿಜಯೇಂದ್ರ ಈ ಹೋರಾಟಕ್ಕೆ ಯಾಕೆ ಹೋಗಲಿಲ್ಲ? ಗೈರಾಗಿದ್ದು ಯಾಕೆ? ಸುರಕ್ಷತೆಯ ಭಯವೇ ಎಂದು ವಿಜಯೇಂದ್ರನೇ ಹೇಳಬೇಕು ಎಂದರು.
ಮುಂದುವರೆದು ಮಾತನಾಡಿದ ಯತ್ನಾಳ್, ವಿಜಯೇಂದ್ರಗೆ ನಿಮ್ಮ ತಂದೆಯ ಎಲ್ಲ ವಿಷಯಗಳನ್ನು ಹೊರ ತೆಗೆಯುತ್ತೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಧಮ್ಕಿ ಹಾಕಿದ್ದರು. ಈ ಭಯದ ಕಾರಣಕ್ಕೆ ವಿಜಯೇಂದ್ರ ಹೋಗಿಲ್ಲ ಎಂದು ದೂರಿದರು.
ಇದೇ ವೇಳೆ, ಅಖಾಡಕ್ಕೆ ಯಡಿಯೂರಪ್ಪ ಸೇರಿ ಯಾರೇ ಇಳಿದರೂ, ನನಗೆ ಏನೂ ಆಗಲ್ಲ. ಗುರುವಾರದ ಸಭೆಯಲ್ಲಿ ಪಾಲ್ಗೊಂಡಿದ್ದ 17 ಜನರು ನನಗೆ ಕರೆ ಮಾಡಿದ್ದರು. ನಾವು ನಮ್ಮ ಆತ್ಮಸಾಕ್ಷಿಯಿಂದ ಸಭೆಗೆ ಹೋಗಿಲ್ಲ. ವಿಜಯೇಂದ್ರ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಇರುವ ಕಾರಣ ಹೋಗಿರುವುದಾಗಿ ಹೇಳಿದ್ದಾರೆ. ಆದರೆ, ಕಳೆದ ಚುನಾವಣೆಯುಲ್ಲಿ ನಮ್ಮ ಶಾಸಕರನ್ನು ಸೋಲಿಸಿರುವ ಕಾಣದ ಕೈಗಳು ಯಾವುವು? ಆ ಕೈಗಳು ಎರಡಾ? ನಾಲ್ಕಾ ಎಂಬ ಬಗ್ಗೆ ಆ ಸಭೆಯಲ್ಲಿ ಚರ್ಚೆಯಾಗಬೇಕಿತ್ತು. ಅಷ್ಟೇ ಅಲ್ಲ, ಚುನಾವಣೆಯಲ್ಲಿ ಸೋತ 2 ವರ್ಷಗಳ ನಂತರ ಮಾಜಿ ಶಾಸಕರಿಗೆ ಈಗ ಸಾಂತ್ವನ ಹೇಳುತ್ತಿದ್ದಾರೆ. ಇದಕ್ಕೆ ನಿಷ್ಠಾವಂತ ಬಿಜೆಪಿ ಗುಂಪೇ ಕಾರಣ. ಯತ್ನಾಳ್, ರಮೇಶ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರ ಗುಂಪಿನ ಪರಿಣಾಮವಾಗಿ ಮಾಜಿ ಶಾಸಕರಿಗೆ ಗೌರವ ಸಿಕ್ಕಿದೆ. ಇದನ್ನೂ ಮಾಧ್ಯಮಗಳು ಹೇಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್ಪೋರ್ಟ್ ಆಗಲಿ: ವಿ.ಸೋಮಣ್ಣ
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.