Vijaypura:ತಲೆಯ ಮೇಲೆ ಕಲ್ಲು ಎತ್ತಿಹಾಕಿ 27 ವರ್ಷದ ಯುವಕನ ಭೀಕರ ಹತ್ಯೆ
ರಂಜಾನ್ ಹಬ್ಬಕ್ಕೆ ಸಂಬಂಧಿಯ ಮನೆಗೆ ಬಂದಿದ್ದ
Team Udayavani, Apr 11, 2024, 10:22 PM IST
ವಿಜಯಪುರ : ಗುರುವಾರ ಸಂಜೆ ರಂಜಾನ್ ಹಬ್ಬಕ್ಕೆ ಸಂಬಂಧಿಯ ಮನೆಗೆ ಬಂದಿದ್ದ ಯುವಕನೊಬ್ಬ ಭೀಕರವಾಗಿ ಹತ್ಯೆಯಾಗಿದ್ದಾನೆ.
ನಗರದ ಪೇಟಿಬಾವಡಿ ನಿವಾಸಿ 27 ವರ್ಷದ ರಜೀನ್ ಜಮಾದಾರ ಎಂಬ ಯುವಕನೇ ಹತ್ಯೆಯಾದವನು. ನಗರದ ಜಾಮಿಯಾ ಮಸೀದಿ ಬಳಿ ರಜೀನ್ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಪದೇ ಪದೆ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗುತ್ತಿದ್ದ ಎರಡು ಗುಂಪುಗಳ ಮಧ್ಯದ ದ್ವೇಷದ ಹಿನ್ನೆಲೆಯಲ್ಲಿ ಈ ಹತ್ಯೆಯಾಗಿದೆ ಎಂದು ಶಂಕಿಸಲಾಗಿದೆ.ಕುಟುಂಬ ಸದಸ್ಯರು ಹತ್ಯೆಗೆ ಸಂಬಂಧಿಸಿದಂತೆ ಕೆಲವರ ಹೆಸರನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಕೃತ್ಯ ನಡೆದ ಮಾಹಿತಿ ಬರುತ್ತಲೇ ಎಸ್ಪಿ ಋಷಿಕೇಶ ಭಗವಾನ್ ಸ್ಥಳಕ್ಕೆ ಧಾವಿಸಿದ್ದಾರೆ. ಹತ್ಯೆಯ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಲಿಖಿತ ದೂರು ಬಂದ ಬಳಿಕ ಎಫ್ಐಆರ್ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಹತ್ಯೆಯ ಕುರಿತು ಗೋಲಗುಂಬಜ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.