ವಿಜಯಪುರ ಪೊಲೀಸರಿಂದ ಏಳು ಅಂತಾರಾಜ್ಯ ಕಳ್ಳರ ಬಂಧನ
Team Udayavani, Sep 9, 2021, 2:31 PM IST
ವಿಜಯಪುರ: ಜಿಲ್ಲೆಯ ಪೊಲೀಸರು ಕಳ್ಳತನ ಆರೋಪದಲ್ಲಿ ಏಳು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದು, 16.10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ಬಂಧಿತ ಏಳು ಆರೋಪಿಗಳಲ್ಲಿ ವಿಜಯಪುರ ಜಿಲ್ಲೆಯ ಐವರು ಹಾಗೂ ಮಹಾರಾಷ್ಟ್ರ ರಾಜ್ಯದ ಅಕ್ಕಲಕೋಟೆ ಮೂಲದ ಇಬ್ಬರು ಸೇರಿದ್ದಾರೆ.
ಏಳು ಜನರ ಈ ತಂಡ ವಿಜಯಪುರ ಜಿಲ್ಲೆಯಲ್ಲಿ ಏಳು, ಬಾಗಲಕೋಟೆ ಜಿಲ್ಲೆಯ ಎರಡು, ಬೆಳಗಾವಿ ಜಿಲ್ಲೆಯ ಒಂದು ಕಳ್ಳತನ ಸೇರಿ 11 ಪ್ರಕರಣದಲ್ಲಿ ಭಾಗಿಯಾಗಿದ್ದಾಗಿ ಒಪ್ಪಿಕೊಂಡಿದ್ದಾರೆ. ಇದಲ್ಲದೇ ಮಹಾರಾಷ್ಟ್ರ ರಾಜ್ಯದ ಕೆಲವೆಡೆ ಈ ತಂಡ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಕುರಿತೂ ಅಲ್ಲಿನ ಪೊಲೀಸರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಎಸ್ ಪಿ ಆನಂದ ಕುಮಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ:ನಾಲ್ಕುಸಾವಿರ ಪೊಲೀಸರ ನೇಮಕಾತಿ: ಆರಗ ಜ್ಞಾನೇಂದ್ರ
ಬಂಧಿತರಿಂದ 16.10 ಲಕ್ಷ ರೂ. ಮೌಲ್ಯದ 356 ಗ್ರಾಂ ಚಿನ್ನಾಭರಣ, 200 ಗ್ರಾಂ ಬೆಳ್ಳಿ ಆಭರಣ, ಒಂದು ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ಪಿಕಪ್ ವಾಹನ ವಶಕ್ಕೆ ಪಡೆಯಲಾಗಿದೆ ಎಂದು ವಿವರ ನೀಡಿದರು.
ಸದರಿ ಪ್ರಕರಣಗಳನ್ನು ಬೇಧಿಸಿ, ಆರೋಪಗಳನ್ನು ಬಂಧಿಸಿ, ಕಳ್ಳತನ ಆಗಿದ್ದ ವಸ್ತುಗಳನ್ನು ವಶಕ್ಕೆ ಪಡೆದ ಡಿಎಸ್ಪಿ ಲಕ್ಷ್ಮೀನಾರಾಯಣ, ಗಾಂಧಿ ಚೌಕ್ ಸಿಪಿಐ ರವೀಂದ್ರ ನಾಯ್ಕೋಡಿ, ಗೋಲಗುಂಬಜ ವೃತ್ತದ ಸಿಪಿಐ ರಮೇಶ ಅವಜಿ, ಎಸೈಗಳಾದ ಎಸ್.ಎಂ.ಶಿರಗುಪ್ಪಿ, ಸೋಮೇಶ ಗೆಜ್ಜಿ ಅವರಿದ್ದ ತನಿಖಾ ತಂಡಕ್ಕೆ ನಗದು ಬಹುಮಾನ ಘೋಷಿಸಿ, ವಿತರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.