ಜಲನಗರ ಸರ್ಕಾರಿ ಪ್ರೌಢಶಾಲೆಗೆ ಅಪರ ಆಯುಕ್ತ ಬಿರಾದಾರ ಭೇಟಿ
Team Udayavani, Jan 15, 2022, 5:17 PM IST
ವಿಜಯಪುರ: ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳ್ಳಲು ಶಿಕ್ಷಕರು, ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡದ ಅಪರ ಆಯುಕ್ತ ಎಸ್. ಎಸ್. ಬಿರಾದಾರ ಕರೆ ನೀಡಿದರು.
ವಿಜಯಪುರ ನಗರದ ಜಲನಗರದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ ಮಾತನಾಡಿದ ಅವರು, ಸರ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗವಾಗಬೇಕು. ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಊಟ ನೀಡಬೇಕು. ವಿಜಯಪುರ ಜಿಲ್ಲೆ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಅಳಿಸಲು ಗುಣಾತ್ಮಕ ಶಿಕ್ಷಣ ನೀಡಿ ಉತ್ತಮ ನಾಗರಿಕರನ್ನು ನಿರ್ಮಿಸಲು ಸಹಕಾರಿಯಾಗಬೇಕು. ಜಿಲ್ಲೆ ಶೈಕ್ಷಣಿಕ ಪ್ರಗತಿಯಲ್ಲಿ ಮುಂದೆ ಬರಲು ಪ್ರತಿಯೊಬ್ಬ ಶಿಕ್ಷಕರು, ಶಿಕ್ಷಣ ಕೇತ್ರದ ಅಧಿಕಾರಿಗಳು ಶ್ರಮ ವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಜಲನಗರ ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಗುಣಮಟ್ಟ ಪರೀಕ್ಷೆಗಾಗಿ ತರಗತಿ ಪರಿಶೀಲನೆ ನಡೆಸಿದರು.
ಆಯುಕ್ತರ ಜೊತೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ವಿ. ಹೊಸೂರ, ನಗರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮೋರಟಗಿ, ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎಸ್. ಹತ್ತಳ್ಳಿ, ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಕೆ. ಬಿರಾದಾರ, ಪ್ರೌಢಶಾಲಾ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎ.ಕೆ. ಬಾಗವಾನ, ಸಿಆರ್‌ಪಿ ಎಸ್. ಎಂ. ಬಿರಾದಾರ, ಪ್ರೌಢಶಾಲೆ ಮುಖ್ಯಾಧ್ಯಾಪಕ ಎ.ಆರ್. ದಶವಂತ ಎಸ್.ಆರ್. ಹಜೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.