ಮಾನವ ಸರಪಳಿ ನಿರ್ಮಿಸಿ ಮತದಾನ ಜಾಗೃತಿ
Team Udayavani, Mar 29, 2019, 4:31 PM IST
ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರ ತಪ್ಪದೇ ಮತದಾನ ಮಾಡುವಂತೆ ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಮನವಿ ಮಾಡಿದರು. ನಗರದ ಮಹತ್ಮಾ ಗಾಂಧೀಜಿ ವೃತ್ತದಲ್ಲಿ ಎಸ್.ಎಸ್. ಕಾಲೇಜ್‌ನ ವಿದ್ಯಾರ್ಥಿಗಳು, ದರಬಾರ್ ಪದವಿ ಕಾಲೇಜ್, ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್ ಹಾಗೂ ಅಂಜುಮನ್ ಕಾಲೇಜ್ ವಿದ್ಯಾರ್ಥಿಗಳು ಮತದಾನ ಜಾಗೃತಿ ಅಂಗವಾಗಿ ರೂಪಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ
ಮಾತನಾಡಿದ ಅವರು, 18 ವರ್ಷ ಮೇಲ್ಪಟ್ಟ ಎಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸಿ, ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ತಕ್ಷಣ ಖಾತ್ರಿ ಪಡಿಸಿಕೊಳ್ಳಬೇಕು. ತಮ್ಮ ಕುಟುಂಬ, ನೆರೆ-ಹೊರೆಯವರಲ್ಲಿಯೂ ಈ ಕುರಿತಂತೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಅಂತರ್ಜಾಲ, ಆಯಾ ತಾಲೂಕು ತಹಶೀಲ್ದಾರ್ ಕಚೇರಿಗಳಲ್ಲಿ, ಬಿಎಲ್‌ಒಗಳಿಗೆ ಸಂಪರ್ಕಿಸಿ ಹಾಗೂ 1950 ಸಹಾಯವಾಣಿಗೆ ಸಂಪರ್ಕಿಸಿಯೂ ಸಹ ತಮ್ಮ ಹೆಸರಿರುವುದನ್ನು ಖಚಿತಪಡಿಸಿಕೊಳ್ಳಬಹುದಾಗಿದೆ. ಮುಂಬರುವ ಚುನಾವಣೆಯಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನೆರವಾಗುವಂತೆ ಕರೆ ನೀಡಿದರು. ಮಹಾನಗರ ಪಾಲಿಕೆ ಆಯುಕ್ತ ಔದ್ರಾಮ, ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಡಯಟ್ ಉಪನ್ಯಾಸಕ ಕೊಣ್ಣೂರ, ಎಸ್.ಜಿ. ಲೋಣಿ, ಸುಲೇಮಾನ ನದಾಫ್, ಮೋಹನಕುಮಾರಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.