Waqf ಜೆಪಿಸಿ ಅಧ್ಯಕ್ಷ ಭೇಟಿ ಹಿನ್ನೆಲೆ: ವಿಜಯಪುರಕ್ಕೆ ಬಂದ ಜೊಲ್ಲೆ ದಂಪತಿ, ಜಾರಕಿಹೊಳಿ
Team Udayavani, Nov 7, 2024, 11:44 AM IST
ವಿಜಯಪುರ: ರೈತರಿಗೆ ವಕ್ಫ ನೋಟಿಸ್ ಕೊಟ್ಟಿರುವ ಹಿನ್ನೆಲೆಯಲ್ಲಿ ಗುರುವಾರ (ನ.07) ನಗರಕ್ಕೆ ದೆಹಲಿಯಿಂದ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ ನೀಡುತ್ತಿದ್ದಾರೆ.
ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಸಾಕಷ್ಟು ಕೋಲಾಹಲ ಸೃಷ್ಟಿರುವ ನಡುವೆ ಸಂಸತ್ತಿನಲ್ಲಿ ಮಂಡನೆಯಾದ ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ರಚಿಸಲಾದ ಜಂಟಿ ಸಂಸದೀಯ ಸಮಿತಿಯ ಅಂಗಳಕ್ಕೆ ವಿವಾದ ತಲುಪಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ವಕ್ಫ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಸೋಮವಾರದಿಂದ ಅಹೋರಾತ್ರಿ ಧರಣಿ ನಡೆಯುತ್ತಿದೆ. ಈ ಧರಣಿ ಸ್ಥಳಕ್ಕೆ ಮಧ್ಯಾಹ್ನ ಜೆಪಿಸಿ ಅಧ್ಯಕ್ಷ ಪಾಲ್ ಬರುತ್ತಿದ್ದಾರೆ.
ಅಲ್ಲದೇ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ರಮೇಶ ಜಾರಕಿಹೊಳಿ ಸಹ ಧರಣಿ ಸ್ಥಳಕ್ಕೆ ಆಗಮಿಸಿದ್ದಾರೆ.
ಇದೇ ವೇಳೆ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಯತ್ನಾಳ್ ವಕ್ಫ್ ವಿವಾದವನ್ನು ಅಧ್ಯಕ್ಷರ ಗಮನಕ್ಕೆ ತರಲು ಸಿದ್ಧತೆ ನಡೆಸಿದ್ದಾರೆ. ಧರಣಿ ಸ್ಥಳದಲ್ಲೇ ರೈತರ ಅಹವಾಲುಗಳು, ವಕ್ಫ ಕುರಿತ ನ್ಯಾಯಾಲಯಗಳ ಆದೇಶಗಳು, ನೋಟಿಸ್ ಸೇರಿದಂತೆ ಹಲವು ದಾಖಲೆಗಳನ್ನು ಶೋಭಾ ಹಾಗೂ ಯತ್ನಾಳ್ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.