ಇಂಡಿ ತಾಲೂಕಾದ್ಯಂತ ನೀರಿನ ಕೊರತೆ

Team Udayavani, Jan 5, 2019, 9:48 AM IST

vij-3.jpg

ಇಂಡಿ: ತಾಲೂಕಿನಾದ್ಯಂತ ಭೀಕರ ಬರಗಾಲದ ಛಾಯೆ ಆವರಿಸಿದ್ದು ಬೇಸಿಗೆ ಆರಂಭಕ್ಕೂ ಪೂರ್ವದಲ್ಲಿಯೇ ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ತೊಂದರೆ ಉಂಟಾಗಿದೆಯಲ್ಲದೆ ರೈತರ ಬಹುವಾಷಿಕ ಬೆಳೆಗಳಾದ ಲಿಂಬೆ, ದಾಳಿಂಬೆ, ದ್ರಾಕ್ಷಿ ಬೆಳೆಗಳು ಒಣಗಲು ಪ್ರಾರಂಭಿಸಿವೆ. ವಿಜಯಪುರ ಜಿಲ್ಲೆ ಬ್ರಿಟಿಷರ ಕಾಲದಿಂದ ಇಲ್ಲಿವರೆಗೂ ಶಾಶ್ವತ ಬರಗಾಲಕ್ಕೆ ತುತ್ತಾಗುತ್ತ ಬರುತ್ತಿದೆ.

ಬ್ರಿಟಿಷರು ಆಡಳಿತ ಮಾಡುವ ಸಂದರ್ಭದಲ್ಲಿ ವಿಜಯಪುರ ನಗರದಲ್ಲಿ ಬರ ನಿವಾರಣೆ ಸಂಸ್ಥೆ ತೆರೆದು ಬರ ನಿವಾರಣೆಗೆ ಪ್ರಯತ್ನಿಸುತ್ತ 71 ವರ್ಷ ಕಳೆದರೂ ವಿಜಯಪುರ ಜಿಲ್ಲೆ ಬರಗಾಲದಿಂದ ಮುಕ್ತವಾಗಿಲ್ಲ. ಬರಗಾಲ ನಿವಾರಣಾ ಸಂಸ್ಥೆ ಅದ್ಯಾವ ಕೆಲಸದಲ್ಲಿ ತೊಡಗಿದಿಯೋ ತಿಳಿಯದಂತಾಗಿದೆ. ಬರಗಾಲದಿಂದ ಜನರು ರೈತರು ಜಾನುವಾರುಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದಾರೆ. ಪಂಚ ನದಿಗಳು ಹರಿದರೂ ಜಿಲ್ಲೆಯ ಜನರು ಕುಡಿಯುವ ನೀರಿಗಾಗಿ ಅಲೆದಾಡುತ್ತಿದ್ದಾರೆ.

ಇನ್ನು ತಾಲೂಕಿನಾದ್ಯಂತ ಬಹು ವಾರ್ಷಿಕ ಬೆಳೆಗಳಾದ ಲಿಂಬೆ 5510 ಹೆಕ್ಟೇರ್‌, ದ್ರಾಕ್ಷಿ 1663 ಹೆಕ್ಟೇರ್‌, ದಾಳಿಂಬೆ 2361 ಹೆಕ್ಟೇರ್‌ ಬೆಳೆ ಇದೆ. ಇದರಲ್ಲಿ ಶೇ. 75 ಬೆಳೆಗಳು ಈಗಾಗಲೆ ನೀರಿನ ಕೊರತೆಯಿಂದ ಒಣಗಲು ಪ್ರಾರಂಭವಾಗಿವೆ. ಬೆಳೆಗಳ ಉಳಿವಿಗಾಗಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಹ ಟ್ಯಾಂಕರ್‌ ನೀರು ಪೂರೈಕೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದು ಇಲಾಖೆ ತಾಲೂಕಾಧಿಕಾರಿ ತಿಳಿಸಿದ್ದಾರೆ.

ಸರ್ಕಾರದಿಂದ ಏನು ಉತ್ತರ ಬರುತ್ತದೆಯೋ ಕಾದು ನೋಡಬೇಕಿದ್ದು ಟ್ಯಾಂಕರ್‌ ನೀರು ಪೂರೈಸಲು ಇನ್ನೊಂದು ತಿಂಗಳು ತಡವಾದರೂ ಶೇ. 75 ಬೆಳೆಗಳು ಸಂಪೂರ್ಣ ಒಣಗಿ ಹೋಗುತ್ತವೆ ಎನ್ನುತ್ತಾರೆ ಇಲ್ಲಿನ ರೈತರು.

ನೀರಿನ ಅಭಾವದಿಂದ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ನಿಂಬೆ, ದ್ರಾಕ್ಷಿ, ದಾಳಿಂಬೆ, ಬಿಸಿಲಿನ ತಾಪ, ಮತ್ತು ತೇವಾಂಶದ ಕೊರತೆಯಿಂದ ಒಣಗಿ ಹೋಗುತ್ತಿವೆ. ಇದುವರೆಗೆ ಕಷ್ಟಪಟ್ಟು ಬೆಳೆಸಿದ ರೈತರು ಬೆಳೆ ಉಳಿಸಿಕೊಳ್ಳಲು ಹರಸಹಾಸ ಪಡುತ್ತಿದ್ದಾರೆ. ಬೆಳೆ ರಕ್ಷಣೆಗಾಗಿ ಕೆಲ ರೈತರು ಸುಮಾರು 5ರಿಂದ 10 ಕಿ.ಮೀ. ದೂರದಿಂದ ಟ್ಯಾಂಕರ್‌ ಮೂಲಕ ನೀರನ್ನು ತಂದು ಬೆಳೆ ರಕ್ಷಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಬೆಳಗ್ಗೆ ಉಣಿಸುತ್ತಿರುವ ನೀರು ನಾಲ್ಕು ದಿನಕ್ಕೂ ಸಾಕಾಗುತ್ತಿಲ್ಲ ಎಂದು ರೈತರು ಕೈ ಚೆಲ್ಲಿ ಕುಳಿತಿದ್ದಾರೆ.

ತೋಟಗಾರಿಕೆ ಇಲಾಖೆಯಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಜನವರಿಯಿಂದ ಜೂನ್‌ ತಿಂಗಳವರೆಗೆ 31.84 ಕೋಟಿ ರೂ. ಅನುದಾನ ಕೋರಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅಷ್ಟು ಅನುದಾನ ನೀಡಿದರೆ ಟ್ಯಾಂಕರ್‌ ನೀರು ಜೂನ್‌ ತಿಂಗಳವರೆಗೆ ಸರಬರಾಜು ಮಾಡಲು ಸಾಧ್ಯವಾಗುತ್ತದೆ.
 ಆರ್‌.ಟಿ. ಹಿರೇಮಠ ತೋಟಗಾರಿಕೆ ಇಲಾಖೆ ಅಧಿಕಾರಿ

ಬೆಳೆ ರಕ್ಷಣೆಗಾಗಿ ಸರಕಾರ ಹೊಸ ಯೋಜನೆ ರೂಪಿಸಬೇಕು. ದೀರ್ಘ‌ಕಾಲದ ತೋಟಗಾರಿಕಾ ಬೆಳೆಗಳು ಒಣಗಿದರೆ ಮುಂದಿನ 5 ವರ್ಷದವರೆಗೆ ರೈತರು ಪರಿತಪಿಸಬೇಕಾಗುತ್ತದೆ. ಸರಕಾರ ರೈತರ ಸಂಕಷ್ಟಕ್ಕೆ ಪರಿಹಾರ ನೀಡಬೇಕು.
 ಜಗನ್ನಾಥ ಇಂಡಿ ರೈತ ಮುಖಂಡ

„ಉಮೇಶ ಬಳಬಟ್ಟಿ

ಟಾಪ್ ನ್ಯೂಸ್

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ

4(1

Snuff: ನಶ್ಯ ತಂದಿಟ್ಟ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.