ಬಸವಸಾಗರ ಜಲಾಶಯದಿಂದ ನದಿಗೆ ನೀರು
Team Udayavani, Feb 12, 2019, 11:54 AM IST
ನಾಲತವಾಡ: ಸಮೀಪದ ಬಸವಸಾಗರ ಜಲಾಶಯದಿಂದ ರವಿವಾರ ಬೆಳಗ್ಗೆ 6 ಗಂಟೆಯಿಂದ ಆಣೆಕಟ್ಟಿನ 2 ಕ್ರಸ್ಟ್‌ಗೇಟ್‌ಗಳ ಮೂಲಕ 6 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರದ ಮೂಲಕ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ (ಆರ್‌ಟಿಪಿಎಸ್) ಹರಿಸಲಾಗುತ್ತಿದೆ ಎಂದು ಆಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದ್ದಾರೆ.
ಆರ್‌ಟಿಪಿಎಸ್‌ನ ಬೇಡಿಕೆಯಂತೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರೋಗ್ಯ ಸಚಿವ ಶಿವಾನಂದ ಪಾಟೀಲರ ನಿರ್ದೇಶನ, ಮೇಲಧಿಕಾರಿಗಳ ಸೂಚನೆಯಂತೆ ಆಣೆಕಟ್ಟಿನ ಕ್ರಸ್ಟ್‌ಗೇಟ್ ಮೂಲಕ ನದಿ ಪಾತ್ರಕ್ಕೆ ನೀರು ಹರಿಸಲಾಗುತ್ತಿದೆ. ಕಾರಣ ನದಿ ತೀರದಲ್ಲಿ ಬರುವ ಗ್ರಾಮಗಳ ಜನ, ಜಾನುವಾರುಗಳು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸೋಮವಾರ ಸಂಜೆ ನದಿ ಪಾತ್ರಕ್ಕೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಒಟ್ಟಾರೆ ಜಲಾಶಯದಿಂದ ಕುಡಿಯುವ ನೀರಿಗೆ ಅವಲಂಬಿತವಾಗಿರುವ ನಗರ, ಪಟ್ಟಣಗಳಿಗೆ ಮುಂದಿನ ಬೇಸಿಗೆ ಜುಲೈ ತಿಂಗಳು ಅಂತ್ಯದವರೆಗೆ 4 ಟಿಎಂಸಿಯಷ್ಟು ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಆಲಮಟ್ಟಿ ಜಲಾಶಯದಲ್ಲಿ ನೀರು ಸಂಗ್ರಹವಿದ್ದು, ಕಾಲ ಕಾಲಕ್ಕೆ ಸರ್ಕಾರದಿಂದ ಬರುವ ಸೂಚನೆ ಮೇರೆಗೆ ಕುಡಿಯುವ ನೀರನ್ನು ಜಲಾಶಯದಿಂದ ಬಳಕೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Muddebihal: ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.