ಮುಖ್ಯ ನಾಲೆಗೆ ಇಂದಿನಿಂದ ನೀರು
•ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳಿಗೆ ಅನುಕೂಲ: ಎಂ.ಬಿ. ಪಾಟೀಲ
Team Udayavani, May 14, 2019, 5:01 PM IST
ವಿಜಯಪುರ: ಮುಳವಾಡ ಏತ ನೀರಾವರಿ ಯೋಜನೆ ವಿಜಯಪುರ ಮುಖ್ಯ ಕಾಲುವೆಯಿಂದ ಬುಧವಾರದಿಂದ ನೀರು ಹರಿಸಲು ಎಲ್ಲ ಸಿದ್ಧತೆಗಳು ಪೂರ್ಣಗೊಳ್ಳುತ್ತಿವೆ. ನೀರಿನ ತೀವ್ರ ಅಭಾವ ಇರುದರಿಂದಾಗಿ ವಾರಾಬಂದಿ ಪದ್ಧತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಿ ನೀರು ಹರಿಸಲಾಗುತ್ತಿದೆ. ಹೀಗಾಗಿ ರೈತರು ಸಹಕರಿಸಬೇಕು ಎಂದು ಎಂದು ಗೃಹ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಚಿಂಚೋಳಿ ಉಪ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ ವಿಜಯಪುರ ಮುಖ್ಯ ಕಾಲುವೆಗೆ ನೀರು ಹರಿಸಲು ವಿನಂತಿಸಿ, ವಿವಿಧ ಗ್ರಾಮಗಳ ರೈತರ ಮನವಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
ವಿಜಯಪುರ ಮುಖ್ಯ ಕಾಲುವೆಯ ಕೂಡಗಿ ಹತ್ತಿರದ ರೈಲ್ವೆ ಲೈನ್ ಪಾಸಿಂಗ್ ಕಾಮಗಾರಿ ತಾಂತ್ರಿಕ ತೊಂದರೆಯಿಂದ ವಿಳಂಬದಿಂದ ಸಾಗಿದೆ. ಈಗಾಗಲೇ ಗುತ್ತಿಗೆ ಅವಧಿ 18 ತಿಂಗಳು ಪೂರ್ಣಗೊಂಡು, ವಿಸ್ತರಣೆಯ 6 ತಿಂಗಳು ಹೆಚ್ಚವರಿ ಅವಧಿ ಮುಗಿದಿದ್ದರೂ ಕಾಮಗಾರಿ ಪೂರ್ಣಗೊಳ್ಳುತ್ತಿಲ್ಲ ಎಂದು ತಿಳಿಸಿದ್ದಾರೆ.
ಚಲಿಸುವ ರೈಲ್ವೆ ಲೈನ್‌ಗಳ ಕೆಳ ಭಾಗದಲ್ಲಿಯೇ ಬೃಹತ್ ಕಾಮಗಾರಿ ನಡೆಯುತ್ತಿರುವದು ವಿಳಂಬಕ್ಕೆ ಪ್ರಮುಖ ಕಾರಣ. ರೈಲುಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಇಲಾಖೆಯವರು ಒಪ್ಪ್ಪುತ್ತಿಲ್ಲ. ಕಳೆದ ವರ್ಷದಂತೆ ಈ ಬಾರಿಯೂ ತಾತ್ಕಾಲಿಕ ಪುಸ್ಸಿಂಗ್ ಕಾಮಗಾರಿ ಮೂಲಕ ನೀರು ಹರಿಸಲು ಸೂಚಿಸಲಾಗಿದ್ದು, ಇದಕ್ಕಾಗಿ 60 ಲಕ್ಷ ರೂ. ಹೆಚ್ಚುವರಿ ಅನುದಾನ ಒದಗಿಸಲಾಗಿದೆ ಎಂದು ವಿವರಿಸಿದ್ದಾರೆ.
93 ಕ್ಯೂಮೆಕ್ಸ್ ನೀರು ಹರಿಸುವ ಸಾಮರ್ಥಯ ಹೊಂದಿರುವ ವಿಜಯಪುರ ಮುಖ್ಯ ಕಾಲುವೆಯಲ್ಲಿ ತಾತ್ಕಾಲಿಕ ಪೈಪ್ ಪುಸ್ಸಿಂಗ್‌ನಿಂದ 22 ಕ್ಯೂಮೆಕ್ಸ್ ನೀರು ಮಾತ್ರ ಹರಿಯಲಿದ್ದು, ವಿಜಯಪುರ ಮುಖ್ಯ ಕಾಲುವೆಯಲ್ಲಿ 136 ಕಿ.ಮೀ. ಜಾಲವಾದವರೆಗೆ ನೀರು ಹರಿಸಸಲಾಗುತ್ತದೆ. ಅಲ್ಲಿಂದ ಕಗ್ಗೋಡ, ಕುಮಟಗಿ, ಪಡಗಾನೂರ, ದೇವರಹಿಪ್ಪರಗಿ, ಮಣೂರ, ಮಾರ್ಕಬ್ಬಿನಹಳ್ಳಿ, ಬೊಮ್ಮನಜೋಗಿ ಕೆರೆಗಳನ್ನು ತುಂಬಿಸಲಾಗುತ್ತದೆ. ಹೂವಿನಹಿಪ್ಪರಗಿ ಶಾಖಾ ಕಾಲುವೆಯಿಂದ 40 ಕಿ.ಮೀ.ವರೆಗೆ ನೀರು ಹರಿಸಿ ನಾಗವಾಡ, ಮಣೂರ, ಮುಕರ್ತಿಹಾಳ, ಅಲಕೊಪ್ಪರ, ರೂಡಗಿ ಕೆರೆಗಳನ್ನು ತುಂಬಿಸಲಾಗುತ್ತದೆ.
ಅಲ್ಲಿಂದ ಮುಂದೆ ಬಸವನಬಾಗೇವಾಡಿ ಶಾಖಾ ಕಾಲುವೆಯಿಂದ 40 ಕಿ.ಮೀ. ನೀರು ಹರಿಸಿ ಡೋಣುರ, ಬಿಸನಾಳ, ರೆಬಿನಾಳ, ಸಾತಿಹಾಳ ಕೆರೆಗಳನ್ನುತುಂಬಲಾಗುತ್ತದೆ. ಇದಾದ ಬಳಿಕ ತಿಡಗುಂದಿ ಶಾಖಾ ಕಾಲುವೆಗೆ 2.7 ಕಿ.ಮೀ.ವರೆಗೆ ನೀರು ಹರಿಸಿ, ಮದಭಾವಿ, ನಾಗಠಾಣ ಕೆರೆಗಳನ್ನು ಕುಡಿಯುವ ನೀರಿನ ಅಗತ್ಯಕ್ಕೆ ಮಾತ್ರ ತುಂಬಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಕೆಲವು ಕೆರೆಗಳ ಮೇಲೆ ಬಹು ಹಳ್ಳಿಗಳ ಕುಡಿಯುವ ನೀರಿನ ಯೋಜನೆಗಳು ಅವಲಂಬಿತವಾಗಿದ್ದು, ಆ ಎಲ್ಲ ಯೋಜನೆಗಳಿಗೆ ವಿಜಯಪುರ ಮುಖ್ಯ ಕಾಲುವೆಗಳಿಂದ ನೀರು ಹರಿಸುವದರಿಂದ ಅನುಕೂಲವಾಗಲಿದೆ ಎಂದು ಎಂ.ಬಿ. ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.