ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕೆ ತಾಕೀತು
Team Udayavani, Aug 18, 2018, 12:23 PM IST
ವಿಜಯಪುರ: ಜಿಲ್ಲೆಯಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ಪೂರೈಕೆ ಆಗುತ್ತಿರುವ ವಿವಿಧ ಗ್ರಾಮಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಕೂಡಲೇ ವಿವಿಧ ಕಂದಾಯ ಇಲಾಖೆ ನೇತೃತ್ವದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ತಂಡ ತಕ್ಷಣ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್ ಮೊಹಸೀನ್ ಸೂಚಿಸಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. 90 ದಿನಗಳು ನೀರು ಸರಬರಾಜಾದ ತಕ್ಷಣ ನೀರು ಸ್ಥಗಿತಗೊಳಿಸದೇ ಆಯಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆ ವಸ್ತುಸ್ಥಿತಿ ಪರಿಶೀಲಿಸಬೇಕು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇರುವ ಪ್ರದೇಶಗಳಲ್ಲಿ ಎಷ್ಟು ದಿನ ನೀರು ಪೂರೈಕೆ ಸಾಧ್ಯ, ಶಾಶ್ವತ ಪರಿಹಾರಕ್ಕೆ ಕೈಗೊಳ್ಳಬೇಕಿರುವ ಕ್ರಮಗಳೇನು ಎಂದು ಅಧಿಕಾರಿಗಳು ಯೋಜನೆ ರೂಪಿಸಿ ಎಂದರು. ಜಿಲ್ಲೆಯ ಆಯಾ ಎಲ್ಲಾ ತಹಶೀಲ್ದಾರ್‌ರು, ತಾಪಂ ಇಒ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ರೈತರ ಅನುಕೂಲಕ್ಕಾಗಿ ಅಲ್ಪಾವಧಿ ಬೆಳೆ, ಹೆಚ್ಚು ಇಳುವರಿಯ ಬೆಳೆ, ಮಾರುಕಟ್ಟೆ ವ್ಯವಸ್ಥೆ ಕುರಿತು ಸೂಕ್ತ ತಿಳಿವಳಿಕೆ ನೀಡಬೇಕು. ಹವಾಮಾನಕ್ಕೆ ತಕ್ಕಂತೆ ಬೆಳೆಗಳನ್ನು ಬೆಳೆಯುವ ಬಗ್ಗೆಯೂ ಸೂಕ್ತ ಜಾಗೃತಿ ಮೂಡಿಸಲು ತಿಳಿಸಿದ ಅವರು, ಹೋಬಳಿವಾರು ವಿಶೇಷ ಕಾರ್ಯಾಗಾರಗಳನ್ನು ಏರ್ಪಡಿಸಿ ರೈತರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಿದರು.
ಅತಿವೃಷ್ಟಿ-ಅನಾವೃಷ್ಟಿ ಸೇರಿದಂತೆ ಪ್ರಕೃತಿ ವಿಕೋಪದಿಂದ ತೋಟಗಾರಿಕಾ ಬೆಳೆಗಳ ಹಾನಿ ಸಮೀಕ್ಷೆ ತ್ವರಿತಗೊಳಿಸಬೇಕು. ತಹಶೀಲ್ದಾರ್‌ರು, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಸೂಕ್ತ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಸಕಾಲಕ್ಕೆ ಸೌಲಭ್ಯ ಆಯಾ ಫಲಾನುಭವಿಗಳಿಗೆ ದೊರೆಯಬೇಕು. ಇದಕ್ಕಾಗಿ ತಾಲೂಕವಾರು ಕಡ್ಡಾಯವಾಗಿ ಕಂದಾಯ, ಪಿಂಚಣಿ ಅದಾಲತ್ ತಾಲೂಕಾವಾರು ನಡೆಸಬೇಕು. ಸಾರ್ವಜನಿಕರ ಅಹವಾಲು ಸ್ವೀಕಾರಕ್ಕೆ ಪ್ರತಿ ತಾಲೂಕಾವಾರು ಸಮಯ ನಿಗದಿ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ತ್ವರಿತ ಇತ್ಯರ್ಥ ಮಾಡಬೇಕು.
ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ತಮ್ಮ ಅಧೀನ ಕಚೇರಿಗಳಿಗೂ ನಿರಂತರ ಭೇಟಿ ನೀಡಿ ಸಾರ್ವಜನಿಕರ ಕುಂದು-ಕೊರತೆ, ಅಹವಾಲುಗಳು ಸಕಾಲಕ್ಕೆ ಪರಿಹರಿಸುವ ಜೊತೆಗೆ ಈ ಕುರಿತು ಮೇಲಾಧಿಕಾರಿಗಳಿಗೂ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಖಜಾನೆ ಮೂಲಕ 15 ಕೋಟಿ ರೂ. ಬಿಡುಗಡೆ ಮಾಡಿದೆ. ಅಂಚೆ ಕಚೇರಿ ವ್ಯಾಪ್ತಿಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸುವ ಕುರಿತಂತೆ ಫಲಾನುಭವಿಗಳಿಗೆ ಸಕಾಲಕ್ಕೆ ಸೌಲಭ್ಯ ದೊರೆಯುತ್ತಿಲ್ಲ ಎಂಬ ದೂರುಗಳಿವೆ. ಹೀಗಾಗಿ ಜಿಲ್ಲಾ ಅಂಚೆ ಇಲಾಖೆ ಅಧಿಕಾರಿಗಳು ಈ ಕುರಿತು ಸೂಕ್ತ ಗಮನ ಹರಿಸಿ, ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳನ್ನು ಸ್ಥಳೀಯವಾಗಿರುವ ಪ್ರಾಥಮಿಕ ಶಾಲಾ ಕಟ್ಟಡಗಳಿಗೆ ಸ್ಥಳಾಂತರ ಮಾಡಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಸೂಚಿಸಿದರು. ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ, ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.