ಗ್ರಾಮೀಣ ಮನೆ-ಸಾರ್ವಜನಿಕ ಕಟಡಕ್ಕೆ ನಲ್ಲಿ ನೀರು ಯೋಜನೆ
Team Udayavani, May 12, 2020, 4:46 PM IST
ವಿಜಯಪುರ: ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲ ಮನೆಗಳು, ಸಾರ್ವಜನಿಕ ಕಟ್ಟಡಗಳಿಗೆ ನೀರಿನ ನಲ್ಲಿಗಳ ಸಂಪರ್ಕ ಕಲ್ಪಿಸುವ ಜಲ ಜೀವನ ಯೋಜನೆ ಅಡಿಯಲ್ಲಿ 562 ಕೋಟಿ ರೂ. ಕ್ರಿಯಾಯೋಜನೆ ರೂಪಿಸಿ, ಮಂಜೂರಿಗಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ
ಕಚೇರಿ ಸಭಾಂಗಣದಲ್ಲಿ ಜಿಪಂ ಸಿಇಒ ಗೋವಿಂದರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಕುರಿತು ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೇಂದ್ರ-ರಾಜ್ಯ ಪುರಸ್ಕೃತ ಜಲ ಜೀವನ ಯೋಜನೆ ಅಡಿ 2020ರಿಂದ 2024ರ ವರೆಗೆ ಜಿಲ್ಲೆಯ ಎಲ್ಲ ಮನೆಗಳು, ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯ ಹಾಗೂ ಆರೋಗ್ಯ ಕೇಂದ್ರಗಳಿಗೆ ಕಾರ್ಯಾತ್ಮಕ ನಲ್ಲಿ ನೀರು ಕಲ್ಪಿಸುವ ಉದ್ದೇಶ ಹೊಂದಲಾಗಿದ್ದು, ಈಗಾಗಲೇ ತಾಲೂಕು ವಾರು ಮತ್ತು ಜಿಲ್ಲೆಯ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ಈ ಕ್ರಿಯಾ ಯೋಜನೆಯಡಿ ಜಿಲ್ಲೆಯ ಐದು ತಾಲೂಕುಗಳ 3,53,658 ಮನೆಗಳಿಗೆ, 3.28 ಲಕ್ಷ ನಲ್ಲಿಗಳ ಸಂಪರ್ಕಕ್ಕಾಗಿ 56205.54 ಲಕ್ಷ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ರಾಜ್ಯ ಸರ್ಕಾರದ ಮಂಜೂರಾತಿಗೆ ಸಲ್ಲಿಸಲು ನಿರ್ಧರಿಸಲಾಯಿತು.
ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಬರುವ ದಿನಗಳಲ್ಲಿ ಜಲಧಾರೆ ಹಾಗೂ ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೆ ನೀರಿನ ಸೌಲಭ್ಯ ದೊರೆಯಲಿದೆ. ಕೇಂದ್ರ-ರಾಜ್ಯ ಸರ್ಕಾರಗಳಿಂದ ತಲಾ ಶೇ.45 ಮತ್ತು ಗ್ರಾಪಂಗಳಿಂದ ಶೇ.10 ಅನುದಾನದಡಿ ಯೋಜನೆ ಜಾರಿಯಾಗಲಿದೆ. ಜಿಲ್ಲೆಯ 213 ಗ್ರಾಪಂ ವ್ಯಾಪ್ತಿಯ 629 ಗ್ರಾಮಗಳ ಎಲ್ಲ ಮನೆ, ಶಾಲೆ, ಅಂಗನವಾಡಿ ಕೇಂದ್ರ, ವಸತಿ ನಿಲಯ ಹಾಗೂ ಆರೋಗ್ಯ ಕೇಂದ್ರಗಳಿಗೆ ಕಾರ್ಯಾತ್ಮಕ ನಲ್ಲಿ ನೀರು ಸಂಪರ್ಕ ಕಲ್ಪಿಸುವ ಯೋಜನೆ ಹೊಂದಲಾಗಿದೆ ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಎಸ್. ಕುಮಾರ್ ಮಾತನಾಡಿ, 5 ವರ್ಷಗಳಲ್ಲಿ ಶುದ್ಧ ನೀರು ಕಲ್ಪಿಸುವ ಯೋಜನೆ ಇದಾಗಿದ್ದು, ವಿವಿಧ ಗ್ರಾಪಂ ವ್ಯಾಪ್ತಿಗಳ 1035 ಜನವಸತಿಗಳಿಗೆ ನೀರು ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ಸದರಿ ಯೋಜನೆಗೆ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಭಿಯಂತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು
Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.