30ರೊಳಗೆ ಕಾಲುವೆಗಳಿಗೆ ನೀರು: ಸಚಿವ ಕತ್ತಿ
Team Udayavani, Aug 16, 2022, 5:47 PM IST
ಆಲಮಟ್ಟಿ: ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗಳಿಗೆ ನೀರು ಹರಿಸುವ ಪಂಪ್‌ಸೆಟ್ ಕೆಟ್ಟು ಹೋಗಿದ್ದು ಅವುಗಳ ದುರಸ್ತಿ ಕೆಲಸ ನಡೆದಿದೆ. ಅ. 30ರೊಳಗಾಗಿ 4 ಪಂಪ್ ಗಳಿಂದ ಕಾಲುವೆಗೆ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಉಮೇಶ ಕತ್ತಿ ಹೇಳಿದರು.
ಸೋಮವಾರ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾ ಭವನದಲ್ಲಿ ನಡೆದ ರೈತರು ಮತ್ತು ಅಧಿಕಾರಿಗಳ ಸಭೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಕಾಲುವೆಗಳಿಗೆ ನೀರು ಹರಿಸಲು ಒಟ್ಟು 8 ಪಂಪ್‌ಗ್ಳಿವೆ. ಅವುಗಳಲ್ಲಿ 7 ಕೆಟ್ಟಿದ್ದು ದುರಸ್ತಿಗಾಗಿ 7.75 ಕೋಟಿ ರೂ.ಗಳನ್ನು ಮೀಸಲಾಗಿರಿಸಲಾಗಿತ್ತು. ಆ. 15ರೊಳಗೆ ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಕಾಲುವೆಗೆ ನೀರು ಹರಿಸಲು ಆರಂಭಿಸುವ ಬಗ್ಗೆ ತೀರ್ಮಾನಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಅಗಷ್ಟ 30ರೊಳಗೆ 147ಕಿ. ಮೀ.ಉದ್ದವಿರುವ ಗುತ್ತಿಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆ ಕೊನೆಯಂಚಿನವರೆಗೂ ನೀರು ಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನುಳಿದ ಪಂಪ್‌ಗ್ಳನ್ನು ಕ್ರಮೇಣ ದುರಸ್ತಿಗೊಳಿಸಿ ರೈತರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದಕ್ಕೂ ಮೊದಲು ರೈತರು ಮತ್ತು ಅಧಿಕಾರಿಗಳ ಮಧ್ಯ ನಡೆದ ಸಭೆಯಲ್ಲಿ ಗುತ್ತಿ ಬಸವಣ್ಣ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಮಲ್ಲಯ್ಯ ಸಾರಂಗಮಠ ಅವರು ರೈತರಿಗಾಗುತ್ತಿರುವ ತೊಂದರೆ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟರು. ಶಾಂತ ಚಿತ್ತದಿಂದ ಆಲಿಸಿ ಜಿಲ್ಲಾ ಉಸ್ತುವಾರಿ ಮಂತ್ರಿ ಉಮೇಶ ಕತ್ತಿ, ಅಧಿಕಾರಿಗಳ ಸಮಸ್ಯೆ ಬಗ್ಗೆಯೂ ಆಲಿಸಿ ರೈತರಿಗೆ ತೊಂದರೆಯಾಗದಂತೆ ಸಮಸ್ಯೆ ಬಗೆಹರಿಸಲು ಸಮರೋಪಾದಿಯಲ್ಲಿ ಕ್ರಮಕ್ಕೆ ಸೂಚಿಸಿದರು.
ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಅವರನ್ನು ಉದ್ದೇಶಿಸಿ ಕಾಲುವೆಗಳಿಂದ ಅಧಿಕೃತವಾಗಿ ನೀರೆತ್ತುವ ಪಂಪ್ ಮತ್ತು ಡೀಸೆಲ್ ಎಂಜಿನ್‌ಗಳನ್ನು ತೆರುವುಗೊಳಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳಿಗೆ ಸಹಕಾರ ನೀಡಲು ಆದೇಶಿಸಿದರು.
ಕಾಲುವೆಗಳಿಂದ ಅನಧಿಕೃತವಾಗಿ ನೀರೆತ್ತುವ ಎಲ್ಲ ವಿಧದ ಪಂಪ್ ಗಳನ್ನು ತೆರುವುಗೊಳಿಸಿ ಕಾಲುವೆಗಳ ಕೊನೆ ಅಂಚಿನವರೆಗೂ ನೀರು ತಲುಪುವಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ, ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್. ಶಿವಕುಮಾರ, ರಾಂಪುರ ವಲಯ ಮುಖ್ಯ ಅಭಿಯಂತರ ಎಸ್.ಡಿ.ನಾಯಕ, ಜಿಪಂ ಸಿಇಒ ರಾಹುಲ್ ಶಿಂಧೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ದಿ, ಆಲಮಟ್ಟಿ ವಲಯ ಮುಖ್ಯ ಅಭಿಯಂತರ ಎಚ್.ಸುರೇಶ, ಅಧೀಕ್ಷಕ ಅಭಿಯಂತರ ಡಿ.ಬಸವರಾಜ, ರೈತರಾದ ಮಲ್ಲಯ್ಯ ಸಾರಂಗಮಠ, ಮಹಾದೇವ ಮೂಲಿಮನಿ, ಮಲಕಣ್ಣ ನಾವದಗಿ, ಮಾಶಿಮ ವಾಲೀಕಾರ, ಸಿದ್ದಣ್ಣ ಕಿಣಗಿ, ಶಿವರಾಜ್ ಕಿಣಗಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.