ವೀಕೆಂಡ್ ಕರ್ಫ್ಯೂಗೆ ತಾಳಿಕೋಟೆ ಜನರ ಸಾಥ್
Team Udayavani, Apr 26, 2021, 8:33 PM IST
ತಾಳಿಕೋಟೆ : ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಯಂತೆ ರವಿವಾರ ಎರಡನೇ ದಿನದ ವಿಕೆಂಡ್ ಕರ್ಫ್ಯೂಗೆ ಪಟ್ಟಣದ ಜನರು ಸಂಪೂರ್ಣ ಸಾಥ್ ನೀಡಿದ್ದರಿಂದ ಜನಜಂಗುಳಿ ಇಲ್ಲದೇ ಪ್ರಮುಖ ರಸ್ತೆಗಳೆಲ್ಲವೂ ಬಿಕೋ ಎನ್ನುತ್ತಿದ್ದವು.
ಬೆಳಗಿನ ಸಮಯದಲ್ಲಿ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಬಂದ ಜನ 10 ಗಂಟೆ ವೇಳೆಗೆ ಮನೆ ಸೇರಿಕೊಂಡು ಸರ್ಕಾರದ ನಡೆಗೆ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದರು. ಪ್ರತಿ ಸರ್ಕಲ್‌ಗಳಲ್ಲಿ ಪೊಲೀಸರು ಬೀಡು ಬಿಟ್ಟದ್ದರಲ್ಲದೇ ಇನ್ನೂ ತುರ್ತು ಸೇವೆಗಳಿಗೆ ಸಂಬಂಧಿಸಿ ಹೋಗುತ್ತಿರುವವರನ್ನು ದಾಖಲೆ ಮತ್ತು ಐಡಿ ಕಾರ್ಡ್‌ಪಡೆದು ವಿಚಾರಿಸಿ ಕಳುಹಿಸಿದರು. ಪ್ರತ್ಯೇಕ ವ್ಯವಸ್ಥೆ: ಕೊರೊನಾ ವೈರಸ್ ಎರಡನೇ ಅಲೆ ತನ್ನ ಬಾಹುವನ್ನು ಚಾಚುತ್ತಾ ಸಾಗಿದ್ದರಿಂದ ಸ್ಥಳೀಯ ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರ ಅಹವಾಲು ಮತ್ತು ವಿಚಾರಣೆಗಾಗಿ ಠಾಣೆ ಹೊರಗಡೆ ಪೆಂಡಾಲ್ ಹಾಕಿಸಿ ವ್ಯವಸ್ಥೆ ಮಾಡಲಾಗಿದೆ.
ನಿತ್ಯ ನೂರಾರು ಜನರು ಪೊಲೀಸ್ ಠಾಣೆಗೆ ತಮ್ಮ ತೊಂದರೆಗಳನ್ನು ಬಗೆಹರಿಸಿಕೊಳ್ಳಲು ಬರುವುದನ್ನು ಲಕ್ಷೀಸಿದ ಪಿಎಸೈ ವಿನೋದ ದೊಡಮನಿ ಅವರು ಕೋವಿಡ್ ಮಾರ್ಗಸೂಚಿಯಂತೆ ಸಾಮಾಜಿಕ ಅಂತರದೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಂತಹ ಕಾರ್ಯ ಮಾಡಿದ್ದಾರೆ. ಮಾರುಕಟ್ಟೆಯಲ್ಲಿ ಸಿದ್ಧತೆ: ಪಟ್ಟಣದಲ್ಲಿ ಪ್ರತಿ ಸೋಮವಾರ ಸಂತೆ ನಡೆಯುತ್ತದೆ. ರೈತರಿಗೆ ಹಾಗೂ ಕೊಂಡೊಕೊಳ್ಳುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ಅವರ ಸೂಚನೆಯಂತೆ ಆರೋಗ್ಯ ವಿಭಾಗದ ಎಸ್.ಎ. ಘತ್ತರಗಿ ತಮ್ಮ ಸಿಬ್ಬಂದಿಯೊಂದಿಗೆ ಸುಣ್ಣದ ಮೂಲಕ ಗೆರೆಗಳನ್ನು 3 ಅಡಿ ಅಂತರದಂತೆ ಹಾಕಿ ಗುರುತಿಸುವ ಕಾರ್ಯ ಕೈಗೊಂಡಿದ್ದಾರೆ. ಮಾರುಕಟ್ಟೆ ಒಳಗಡೆ ಹೋಗುವಾಗ ಕೊಂಡುಕೊಳ್ಳುವಾಗ ಜನ ಜಂಗುಳಿಯಾಗಬಾರದು ಎಂಬ ಸದುದ್ದೇಶದಿಂದ ಈ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.