Wildlife Board; ನನ್ನ ನೇಮಕಾತಿಗೂ ತಂದೆಯ ರಾಜಕೀಯಕ್ಕೂ ಸಂಬಂಧವಿಲ್ಲ:ಎಂ ಬಿ ಪಾಟೀಲ ಪುತ್ರ

ಅಮೆರಿಕದಲ್ಲಿ ಓದುತ್ತಿದ್ದರೂ 3 ತಿಂಗಳನ್ನು ಅರಣ್ಯ ಪ್ರದೇಶಗಳಲ್ಲೇ ಕಳೆಯುತ್ತೇನೆ..

Team Udayavani, Jul 28, 2024, 7:55 PM IST

1-MBP

ವಿಜಯಪುರ: ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯನಾಗಿ ನನ್ನನ್ನು ನೇಮಿಸಿರುವುದಕ್ಕೂ ಸಚಿವರಾಗಿರುವ ನಮ್ಮ ತಂದೆ ಎಂ.ಬಿ.ಪಾಟೀಲ ಅವರ ರಾಜಕಾರಣಕ್ಕೂ ಸಂಬಂಧವಿಲ್ಲ ಎಂದು ಧ್ರುವ ಪಾಟೀಲ ಸ್ಪಷ್ಟಪಡಿಸಿದ್ದಾರೆ.

ಭಾನುವಾರ ಬಬಲೇಶ್ವರ ತಾಲೂಕಿನ ಮಮದಾಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ, ತಮ್ಮ ನೇತೃತ್ವದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಆ್ಯಂಡ್ ಅನಿಮಲ್ಸ್ ಸಹಯೋಗದಲ್ಲಿ ಕೈಗೊಂಡಿರುವ ಕೋಟಿ ವೃಕ್ಷ ಆಂದೋಲನದ ಭಾಗವಾಗಿ ಎರಡು ವರ್ಷಗಳ ಹಿಂದೆ ನೆಟ್ಟಿದ್ದ 1.36 ಲಕ್ಷ ಸಸಿಗಳ ಬೆಳವಣಿಗೆ ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಛಾಯಾಗ್ರಹಣ ಮತ್ತು ಸಂರಕ್ಷಣೆ ಕ್ಷೇತ್ರಗಳಲ್ಲಿ ನಾನು 11 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದನ್ನು ಗುರುತಿಸಿಯೇ ನನ್ನನ್ನು ಈಗ ಸದಸ್ಯನಾಗಿ ನೇಮಿಸಲಾಗಿದೆ ಎಂದು ತಮ್ಮ ನೇಮಕಾತಿಯನ್ನು ಸಮರ್ಥಿಸಿಕೊಂಡರು.

ರಾಜ್ಯ ವನ್ಯಜೀವಿ ಮಂಡಳಿ ಸದಸ್ಯನಾಗಿ ನನ್ನನ್ನು ನೇಮಿಸಿರುವುದು ನಾನು ಸಚಿವರ ಪುತ್ರ ಎಂಬ ಕಾರಣಲ್ಲ, ಅನಗತ್ಯವಾಗಿ ಇಂಥ ಆರೋಪ ಮಾಡುವುದೂ ಸರಿಯಲ್ಲ. ನಾನು ಅಮೆರಿಕದಲ್ಲಿ ಓದುತ್ತಿದ್ದರೂ 4 ತಿಂಗಳ ರಜೆಯಲ್ಲಿ ಇಲ್ಲಿಗೆ ಬಂದಾಗ 3 ತಿಂಗಳನ್ನು ಕಬಿನಿ‌, ಬಂಡೀಪುರ, ದಾಂಡೇಲಿ ಅರಣ್ಯ ಪ್ರದೇಶಗಳಲ್ಲೇ ಕಳೆಯುತ್ತೇನೆ ಎಂದರು.

ಮನುಷ್ಯ ಮತ್ತು ವನ್ಯಜೀವಿ ಸಂಘರ್ಷ ಕುರಿತು ನಾನು ಸಾಕಷ್ಟು ಅಧ್ಯಯನ ಮಾಡಿದ್ದೇನೆ. ಜತೆಗೆ ಕಪ್ಪು ಚಿರತೆ ಹಾಗೂ ಹುಲಿ ಛಾಯಾಗ್ರಹಣ ಮಾಡಿದ್ದೇನೆ. ಅಲ್ಲದೆ, ವಿಜಯಪುರದ ವನ್ಯಜೀವಿ ಸಂಪತ್ತನ್ನು ಕುರಿತು ವೈಲ್ಡ್ ವಿಜಯಪುರ ಎನ್ನುವ ಸಾಕ್ಷ್ಯಚಿತ್ರ ಮಾಡಿದ್ದೇನೆ. ಸಿದ್ಧೇಶ್ವರ ಶ್ರೀಗಳು ಕೂಡ ಅದನ್ನು ವೀಕ್ಷಿಸಿ, ಮೆಚ್ಚಿಕೊಂಡಿದ್ದರು ಎಂದು ವಿವರಿಸಿದ್ದಾರೆ.

8 ವರ್ಷದವನಿದ್ದ ಹಂತದಿಂದಲೂ ನಾನು ವನ್ಯಜೀವಿಗಳ ಬಗ್ಗೆ ಆಸಕ್ತಿ ಹೊಂದಿದ್ದೇನೆ. ಈಗ ವನ್ಯಜೀವಿ ಮಂಡಳಿ ಸದಸ್ಯನಾಗಿ ನೇಮಕ ಮಾಡಿರುವುದು ಅಧಿಕೃತ ಸ್ಥಾನಮಾನ ಅಷ್ಟೆ ಎಂದರು.

ಇದರ ಮೂಲಕ ವನ್ಯಜೀವಿ ಸಂರಕ್ಷಣೆಗೆ ರೂಪಿಸುವ ನೀತಿ ನಿರೂಪಣೆಗಳ ಮೇಲೆ ಸಕಾರಾತ್ಮಕ ಕೊಡುಗೆ ನೀಡಬಹುದು ಎನ್ನುವುದು ನನ್ನ ಭಾವನೆಯಾಗಿದೆ ಎಂದರು.

ಟಾಪ್ ನ್ಯೂಸ್

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರ ಕೊ*ಲೆ ಪ್ರಕರಣ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

priyank-kharge

Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.