ಪಕ್ಷದಲ್ಲೇ ಇರುತ್ತೇನೆ, ಬಿಜೆಪಿ ನಗರ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ಮಾಡಲ್ಲ: ಪಟ್ಟಣಶಟ್ಟಿ
Team Udayavani, Apr 21, 2023, 12:27 PM IST
ವಿಜಯಪುರ: ವಿಜಯಪುರ ನಗರ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಪಡೆಯುವಲ್ಲಿ ನನಗೆ ಅವಕಾಶ ಸಿಗಲಿಲ್ಲ. ಕಾರ್ಯಕರ್ತರ ನಿರೀಕ್ಷೆ ಹುಸಿಯಾಗಿದೆ. ವ್ಯಕ್ತಿಗತವಾಗಿ ನನಗೆ ರಾಜಕೀಯವ ಅನ್ಯಾಯವಾದರೂ ಪಕ್ಷದಲ್ಲೇ ಮುಂದುವರೆಯಲಿದ್ದೇನೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶಟ್ಟಿ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಎರಡು ಬಾರಿ ಟಿಕೆಟ್ ತಪ್ಪಿದೆ. ಪಕ್ಷದ ವರಿಷ್ಠರು ಬೇರೆ ಕ್ಷೇತ್ರ ಆಯ್ಕೆ ಮಾಡಿಕೊಳ್ಳಲು ಸೂಚಿಸಿದರೂ ನಾನು ಒಪ್ಪಿಲ್ಲ. ಬೇರೆ ಕ್ಷೇತ್ರದಲ್ಲೂ ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟನೆಗಾಗಿ ದುಡಿದಿರುತ್ತಾರೆ. ಅವರಿಗೆ ತೊಂದರೆ ಆಗುವುದು ಬೇಡವೆಂದು ಅನ್ಯ ಕ್ಷೇತ್ರದ ಆಯ್ಕೆಗೆ ಮುಂದಾಗಿಲ್ಲ ಎಂದರು.
ರಾಜಕೀಯ ನಾಯಕರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಲಿಂಗಾಯತ ಒಳ ಪಂಗಡಗಳ ಹೆಸರನ್ನು ಮುಂಚೂಣಿಗೆ ತರುವುದು ಸರಿಯಲ್ಲ. ಅನ್ಯ ಒಳ ಪಂಗಡದವರು ಮಾತನಾಡುವಾಗ ಬಣಜಿಗ ಸಮಾಜದವರು ಮಾತನಾಡಿದ್ದು ತಪ್ಪೇನಲ್ಲ ಎಂದರು.
ಇದನ್ನೂ ಓದಿ:ಕಾಂಗ್ರೆಸ್‌ಗೆ ತಾಕತ್ತಿದ್ರೆ ಲಿಂಗಾಯಿತ ಸಿಎಂ ಘೋಷಣೆ ಮಾಡಲಿ: ಮುರುಗೇಶ್ ನಿರಾಣಿ
ವಿಜಯಪುರ ನಗರ ಕ್ಷೇತ್ರದ ಅಭ್ಯರ್ಥಿ ತಮ್ಮನ್ನು ತಾವೇ ಸ್ಟಾರ್ ಪ್ರಚಾರಕ ಎಂದು ಭಾವಿಸಿದ್ದಾರೆ. ನನ್ನ ಬಗ್ಗೆ ಕನಿಷ್ಟ ಸೌಜನ್ಯ ಇಲ್ಲದ, ನನ್ನನ್ನು ಸಂಪರ್ಕಿಸಿ ಮಾತನಾಡಿಲ್ಲ. ಹೀಗಾಗಿ ನಗರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವ ಮಾತೇ ಇಲ್ಲ. ಪಕ್ಷದ ಯಾರೇ ಮನವೊಲಿಸಲು ಮುಂದಾದರೂ ನಾನು ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದರೆ ಇತರೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವುದಾಗಿ ಸ್ಪಷ್ಟಪಡಿಸಿದರು.
ನನ್ನ ಮನಸ್ಸು ಹೇಳಿದಂತೆ ಕೆಲಸ ಮಾಡುತ್ತೇನೆ, ನನ್ನ ಶಕ್ತಿ ಏನೆಂದು ನನಗೆ ಗೊತ್ತಿದೆ. ಹಿತೈಷಿಗಳ ಸಭೆ ಕರೆದಾಗ ಪಕ್ಷೇತರರಾಗಿ, ಇಲ್ಲವೇ ಅನ್ಯ ಪಕ್ಷದಿಂದ ಸ್ಪರ್ಧಿಸುವ ಸಲಹೆ ಬಂತು. ನನಗೆ ಟಿಕೆಟ್ ಕೈತಪ್ಪಿದ ಬಳಿಕ ಪಕ್ಷದ ವರಿಷ್ಠರು ಯಾರೂ ನನ್ನನ್ನು ಸಂಪರ್ಕಿಸಿಲ್ಲ, ಯಾರೂ ಸಂತೈಸಲಿ ಎಂದು ನಾನು ಬಯಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಹೋರಾತ್ರಿ ಧರಣಿ
Vijayapura: ವಕ್ಫ್ ವಿರುದ್ಧ ಹಲವು ಮಠಾಧೀಶರ ನೇತೃತ್ವದಲ್ಲಿ ಹೋರಾಟ
Waqf Issue: ಲ್ಯಾಂಡ್ ಟೆರರಿಸಂ, ಲ್ಯಾಂಡ್ ಜಿಹಾದ್ ನಿಂದ ಬಚಾವಾಗಬೇಕು: ಶೋಭಾ ಕರಂದ್ಲಾಜೆ
Waqf Property: ಬೊಮ್ಮಾಯಿ ಕಾಲದಲ್ಲೂ ವಕ್ಫ್ ಆಸ್ತಿ ತೆರವಿಗೆ ಹೇಳಿದ್ರು: ಸಚಿವ ಜಮೀರ್
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.